ಮತ್ತೆ ಏಳು ಜನರಿಗೆ ವಕ್ಕರಿಸಿದ ಕೋವಿಡ್ ಸೋಂಕು
Team Udayavani, Aug 3, 2020, 2:48 PM IST
ಚಳ್ಳಕೆರೆ: ನಗರದಲ್ಲಿ ಭಾನುವಾರ ಏಳು ಜನರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಪೊಲೀಸ್ ವಸತಿ ಗೃಹದಲ್ಲಿರುವ 65 ಮತ್ತು 55 ವರ್ಷದ ಇಬ್ಬರು ವೃದ್ಧರು, ಗಾಂಧಿನಗರದ 33 ವರ್ಷದ ಮಹಿಳೆ, ತ್ಯಾಗರಾಜ ನಗರದ 50 ವರ್ಷದ ಮಹಿಳೆ, ಶಾಂತಿನಗರ ಮತ್ತು ಹಳೇಟೌನ್ ವ್ಯಾಪ್ತಿಯ 21 ವರ್ಷದ ಯುವಕ, 12 ಮತ್ತು 3 ವರ್ಷದ ಇಬ್ಬರು ಬಾಲಕರ ವರದಿ ಪಾಸಿಟಿವ್ ಬಂದಿದೆ. ಇವರಲ್ಲಿ ಮೂವರು ವೃದ್ಧೆಯರನ್ನು ಚಿತ್ರದುರ್ಗದ ಕೋವಿಡ್ ಸೆಂಟರ್‌ಗೆ ದಾಖಲಿಸಲಾಗಿದ್ದು, ಉಳಿದವರನ್ನು ನಗರದ ಹೊರವಲಯದಲ್ಲಿರುವ ಕೋವಿಡ್ ಸೆಂಟರ್‌ಗೆ ದಾಖಲಿಸಲಾಗಿದೆ ಎಂದು ತಹಶೀಲ್ದಾರ್ ಎಂ. ಮಲ್ಲಿಕಾರ್ಜುನ್ ತಿಳಿಸಿದರು.
ಪೌರಾಯುಕ್ತ ಪಿ. ಪಾಲಯ್ಯ ಮಾತನಾಡಿ, ಪಾಸಿಟಿವ್ ಪ್ರಕರಣಗಳ ಪ್ರದೇಶಗಳ ಕೆಲವು ಭಾಗಗಳನ್ನು ಈಗಾಗಲೇ ಸೀಲ್‌ಡೌನ್ ಮಾಡಲಾಗಿದೆ. ತ್ಯಾಗರಾಜ ನಗರದಲ್ಲಿ ಸೀಲ್‌ಡೌನ್ ಮುಂದುವರಿಸಲಾಗಿದೆ. ವೃತ್ತ ನಿರೀಕ್ಷಕರ ಕಚೇರಿ ಮತ್ತು ಪೊಲೀಸ್ ಠಾಣೆ ಸುತ್ತಮುತ್ತ ರಾಸಾಯನಿಕ ದ್ರಾವಣ ಸಿಂಪಡಿಸಲಾಗಿದೆ. ನೈರ್ಮಲ್ಯ ಇಂಜಿನಿಯರ್ ನರೇಂದ್ರಬಾಬು, ಹಿರಿಯ ಆರೋಗ್ಯ ನಿರೀಕ್ಷಕ ಮಹಲಿಂಗಪ್ಪ, ಕಿರಿಯ ಆರೋಗ್ಯ ನಿರೀಕ್ಷಕರಾದ ದಾದಾಪೀರ್ ಮತ್ತು ಗಣೇಶ್ ಅವರಿಗೆ ಸೀಲ್‌ಡೌನ್ ಪ್ರದೇಶಗಳ ಉಸ್ತುವಾರಿ ವಹಿಸಲಾಗಿದೆ ಎಂದರು.
ಚಳ್ಳಕೆರೆ ಪೊಲೀಸ್ ಠಾಣೆಗೆ ಪ್ರವೇಶ ನಿರ್ಬಂಧ: ಇಲ್ಲಿನ ಪೊಲೀಸ್ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಇಬ್ಬರು ಮಹಿಳಾ ಪೇದೆಗಳಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಠಾಣೆಯ ಕೆಲಸ ಕಾರ್ಯಗಳಿಗೆ ತೊಂದರೆಯಾಗದಂತೆ ಸಿಬ್ಬಂದಿ ವರ್ಗ ಹೊರ ಭಾಗದಲ್ಲೇ ಇದ್ದು ಸಮಸ್ಯೆಗಳನ್ನು ಪರಿಹರಿಸುತ್ತಿದ್ದಾರೆ. ಚಳ್ಳಕೆರೆ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಓಡಾಡುವ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಿ ಓಡಾಡಬೇಕು ಎಂದು ವೃತ್ತ ನಿರೀಕ್ಷಕ ಈ. ಆನಂದ ಮನವಿನ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Dasarahalli Kannada Movie: ದಾಸರಹಳ್ಳಿಯಲ್ಲಿ ಧರ್ಮ ಸಂಘರ್ಷ
Sagara: ಕಾಶಿಯಾತ್ರೆಯ ಪ್ಯಾಕೇಜ್ ರೂವಾರಿ ಇನ್ನಿಲ್ಲ; ಮನೆ ಮಾಡಿನಿಂದ ಬಿದ್ದು ಸಾವು
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Bangla:ಬಂಧನಕ್ಕೊಳಗಾದ ಇಸ್ಕಾನ್ ನ ಕೃಷ್ಣದಾಸ್ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್
Udupi: ಭಿಕ್ಷಾಟನೆ, ಅಪೌಷ್ಟಿಕತೆ ವಿರುದ್ಧ ಯುವಕನ ಬರಿಗಾಲ ಜಾಗೃತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.