ಜನರ ಹೆಣದ ಮೇಲೆ ಸರಕಾರ ಹಣ ಮಾಡುವ ಕೆಲಸ ಮಾಡುತ್ತಿದೆ: ಡಾ. ಶರಣಪ್ರಕಾಶ ಪಾಟೀಲ್ ಆಕ್ರೋಶ
Team Udayavani, Aug 3, 2020, 6:56 PM IST
ಬೀದರ್ : ಕೋವಿಡ್-19 ಸೋಂಕು ನಿಯಂತ್ರಣಕ್ಕಾಗಿ ಉಪಕರಣಗಳ ಖರೀದಿಯಲ್ಲಿ ಭಾರಿ ಅವ್ಯವಹಾರ ನಡೆದಿದ್ದು, ಸರ್ಕಾರ ಜನರ ಹೆಣದ ಮೇಲೆ ಹಣ ಮಾಡುತ್ತಿದೆ. ಅವ್ಯವಹಾರದ ಬಗ್ಗೆ ನ್ಯಾಯಾಂಗ ತನಿಖೆ ನಡೆಸಿ, ಸಾಮಗ್ರಿಗಳ ಖರೀದಿಯ ಲೆಕ್ಕವನ್ನು ಜನರ ಮುಂದಿಡಬೇಕು ಎಂದು ಮಾಜಿ ಸಚಿವ ಡಾ. ಶರಣಪ್ರಕಾಶ ಪಾಟೀಲ ಒತ್ತಾಯಿಸಿದರು.
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನರ ತೆರಿಗೆ ಹಣವನ್ನು ಸರ್ಕಾರ ಖರೀದಿ ಹೆಸರಲ್ಲಿ ಲೂಟಿ ಮಾಡಿದೆ. ವಿಪಕ್ಷ ನಾಯಕರು ಖರ್ಚಿನ ಲೆಕ್ಕ ಕೇಳಿದರೆ ಅವರಿಗೆ ನೋಟಿಸ್ ನೀಡಲಾಗಿದೆ. ಇದ್ಯಾವುದಕ್ಕೂ ಕಾಂಗ್ರೆಸ್ ಹೆದರಲ್ಲ. ರಾಜ್ಯದಲ್ಲಿ ಕೋವಿಡ್ ನಿಯಂತ್ರಣ ಮತ್ತು ಔಷಧ ಸಾಮಗ್ರಿಗಳ ಖರೀದಿಯಲ್ಲಿ 2 ಸಾವಿರ ಕೋಟಿ ರೂ. ಅವ್ಯವಹಾರ ನಡೆದಿದ್ದು, ಬಿಜೆಪಿ ಶಾಸಕರೇ ಲೋಕಾಯುಕ್ತರಿಗೆ ದೂರು ನೀಡಿದ್ದಾರೆ. ಸಚಿವರುಗಳು ಕೇವಲ ಹಣ ಹೊಡೆಯಲು ಪೈಪೋಟಿ ನಡೆಸುತ್ತಿದ್ದಾರೆ ಎಂದು ಕಿಡಿಕಾರಿದರು.
ದೇಶದಲ್ಲಿ ಕೋವಿಡ್ ವೈರಸ್ ವ್ಯಾಪಕವಾಗಿ ಹಬ್ಬುತ್ತಿದ್ದು, ಕೈಮೀರಿ ಹೋಗಿದೆ. ರಾಜ್ಯದಲ್ಲಿ ಪರಿಸ್ಥಿತಿ ಹೆಚ್ಚು ಹದಗೆಟ್ಟಿದೆ. ಸೋಂಕು ಹತೋಟಿಗೆ ತರುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿವೆ. ಕೋವಿಡ್ ಪ್ರಕರಣಗಳು ಹೆಚ್ಚುತ್ತಿದ್ದರೂ ವೈದ್ಯಕೀಯ ಚಿಕಿತ್ಸೆ ಸೇರಿದಂತೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಿಲ್ಲ. ಸರ್ಕಾರಕ್ಕೆ ಜನರ ಹಿತಾಸಕ್ತಿ ಬೇಕಾಗಿಲ್ಲ. ಕೆಲಸದಲ್ಲಿ ಬದ್ಧತೆ, ಆಡಳಿತದ ಅನುಭವದ ಕೊರತೆ ಸರ್ಕಾರದ ವೈಫಲ್ಯಕ್ಕೆ ಪ್ರಮುಖ ಕಾರಣವಾಗಿದೆ ಎಂದರು.
ಕೋವಿಡ್ ವಿಷಯದಲ್ಲಿ ಕಾಂಗ್ರೆಸ್ ಪ್ರತಿ ಹಂತದಲ್ಲಿ ಸರ್ಕಾರಕ್ಕೆ ಸಹಕಾರ, ಸಲಹೆ ನೀಡುತ್ತಾ ಬಂದಿದೆ. ಆದರೆ, ಸರ್ಕಾರ ಯಾವುದೇ ಕೆಲಸ ಮಾಡದೇ ವ್ಯರ್ಥ ಕಾಲಹರಣ ಮಾಡುತ್ತ ಬಂದಿದೆ. ಸರಿಯಾದ ನಾಯಕತ್ವದ ಇಲ್ಲದೇ ಅಧಿಕಾರಿ ವರ್ಗದವರು ಸಹ ನಿಸ್ಸಾಯಕರಾಗಿದ್ದಾರೆ. ಕಳೆದ ಮೂರು ತಿಂಗಳಿಂದ ಮೌನ ವಹಿಸಿದ್ದ ಕಾಂಗ್ರೆಸ್ ಈಗ ಸರ್ಕಾರದ ಕ್ರಮ, ಕಾರ್ಯವೈಖರಿಯಿಂದ ಬೇಸತ್ತು ಪ್ರಶ್ನಿಸುವ ಸ್ಥಿತಿ ಬಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬೀದರ್ ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಔಷಧ ಸರಬರಾಜು ಸರಿಯಾಗಿ ಆಗುತ್ತಿಲ್ಲ. ಖಾಸಗಿ ಕ್ಲಿನಿಕ್‌ಗಳು ಅಗತ್ಯ ಸಹಕಾರ ನೀಡುತ್ತಿಲ್ಲ. ಹೀಗಾದರೆ ಸೋಂಕಿತರು ಚಿಕಿತ್ಸೆಗೆ ಎಲ್ಲಿ ಹೋಗಬೇಕು. ಬೀದರ್ ನಲ್ಲಿ ವೈದ್ಯ ಕಾಲೇಜು, ಹೊಸ ಆಸ್ಪತ್ರೆ ಇದ್ದರೂ ಸಹ ಜಿಲ್ಲೆಯಲ್ಲಿ ಸೋಂಕಿತರ ಮರಣ ಪ್ರಮಾಣ ಹೆಚ್ಚುತ್ತಿರುವುದು ಏಕೆ ಎಂದು ಪ್ರಶ್ನಿಸಿದ ಡಾ. ಪಾಟೀಲ, ಸರ್ಕಾರ ಈಗಲಾದರೂ ಎಚ್ಚೆತ್ತು ವೈರಾಣು ನಿಯಂತ್ರಣಕ್ಕೆ ಕ್ರಮ ವಹಿಸಬೇಕು. ಆಕ್ಸಿಜನ್, ಐಸಿಯು ಬೆಡ್ ಮತ್ತು ವೆಂಟಿಲೇಟರ್‌ಗಳ ಸಂಖ್ಯೆ ಹೆಚ್ಚಿಸಬೇಕು. ರೋಗಿಗಳಿಗೆ ಸಮಯಕ್ಕೆ ಚಿಕಿತ್ಸೆ ಲಭ್ಯವಾಗುವಂತೆ ನೋಡಿಕೊಂಡು ಜನರ ಹಿತ ಕಾಪಾಡಬೇಕು ಎಂದು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್‌ನಲ್ಲಿ ಲಾಬಿ ಆರಂಭ
Congress; ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಯತೀಂದ್ರ ಸಿದ್ದರಾಮಯ್ಯ
Temperature; ಮುಂದಿನ 20 ವರ್ಷ ಮಳೆ ಜಾಸ್ತಿ, ಉಷ್ಣಾಂಶ ಏರಿಕೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.