ದಕ್ಷಿಣಕನ್ನಡ 153 ಮಂದಿಗೆ ಕೋವಿಡ್ ಪಾಸಿಟಿವ್; 7 ಮಂದಿ ಸಾವು
Team Udayavani, Aug 3, 2020, 9:56 PM IST
ಮಂಗಳೂರುದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ 153 ಮಂದಿಗೆ ಕೋವಿಡ್ ದೃಢಪಟ್ಟಿದೆ. ಇದೇ ವೇಳೆ 7 ಮಂದಿ ಕೋವಿಡ್ ನಿಂದಾಗಿ ಸಾವನ್ನಪ್ಪಿದ್ದಾರೆ. ಒಟ್ಟು ಸಾವಿನ ಸಂಖ್ಯೆ 176ಕ್ಕೆ ಏರಿಕೆಯಾಗಿದೆ.
ಮಂಗಳೂರಿನಲ್ಲಿ 119, ಬಂಟ್ವಾಳದಲ್ಲಿ 11, ಬೆಳ್ತಂಗಡಿಯಲ್ಲಿ 6, ಪುತ್ತೂರಿನಲ್ಲಿ 4, ಸುಳ್ಯದಲ್ಲಿ ಓರ್ವರಿಗೆ ಕೋವಿಡ್ ದೃಢಪಟ್ಟಿದೆ. ಪರವೂರಿನ 12 ಮಂದಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಮೃತಪಟ್ಟ ಏಳು ಮಂದಿ ಮಂಗಳೂರು ತಾಲೂಕಿನವರಾಗಿದ್ದಾರೆ.
ಕೋವಿಡ್ ನಿಂದ ಮುಕ್ತರಾಗಿ 124 ಮಂದಿ ಸೋಮವಾರ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಈವರೆಗೆ 6168 ಮಂದಿಗೆ ಕೋವಿಡ್ ದೃಢಪಟ್ಟಿದ್ದು, 2854 ಮಂದಿ ಗುಣಮುಖರಾಗಿದ್ದಾರೆ. ಸದ್ಯ 3138 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಹೋಂ ಕ್ವಾರಂಟೈನ್‌ಗೊಳಪಟ್ಟ ಸಚಿವ ಕೋಟ
ಸಿಎಂ ಯಡಿಯೂರಪ್ಪ ಅವರಿಗೆ ಕೋವಿಡ್ ದೃಢಪಟ್ಟ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೋಂ ಕ್ವಾರಂಟೈನ್‌ಗೊಳಪಟ್ಟಿದ್ದಾರೆ.
ಸಚಿವರು ಮುಖ್ಯಮಂತ್ರಿಯವರೊಂದಿಗೆ ಜು. 30ರಂದು ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದರು. ಸಿಎಂಗೆ ಕೋವಿಡ್ ದೃಢಪಡುತ್ತಿದ್ದಂತೆ, ತನ್ನೊಂದಿಗೆ ಪ್ರಾಥಮಿಕ ಸಂಪರ್ಕಕ್ಕೆ ಬಂದವರು ಕ್ವಾರಂಟೈನ್‌ನಲ್ಲಿರುವಂತೆ ಸಿಎಂ ಸಲಹೆ ನೀಡಿದ ಹಿನ್ನೆಲೆಯಲ್ಲಿ ಶ್ರೀನಿವಾಸ ಪೂಜಾರಿ ಅವರು ಸ್ವಯಂ ಆಗಿಯೇ ಕ್ವಾರಂಟೈನ್‌ಗೊಳಪಟ್ಟಿದ್ದಾರೆ. ಅಲ್ಲದೆ, ಮಂಗಳವಾರ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೆ ನೀಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
udupi: ಮಗನ ಅರಸುತ್ತಾ ಬಂದ ತಾಯಿ: ಇಬ್ಬರು ಮಕ್ಕಳ ಸಹಿತ ವೃದ್ಧೆಯ ರಕ್ಷಣೆ
Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್
Mysuru: ಕೋವಿಡ್ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್.ಮಂಜುನಾಥ್
Inquiry Report: ಬಿಜೆಪಿಗೆ ’40 ಪರ್ಸೆಂಟ್’ ಕ್ಲೀನ್‌ಚಿಟ್ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್
Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್ ಪರಾರಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.