ಮುಖ್ಯಮಂತ್ರಿ ಬಿ.ಎಸ್.ವೈ. ಆರೋಗ್ಯ ಚೇತರಿಕೆಗಾಗಿ ಮಲೆಮಹದೇಶ್ವರ ಬೆಟ್ಟದಲ್ಲಿ ವಿಶೇಷ ಪೂಜೆ.
Team Udayavani, Aug 4, 2020, 12:27 AM IST
ಹನೂರು (ಚಾಮರಾಜನಗರ): ಶ್ರೀ ಮಲೈ ಮಹದೇಶ್ವರ ಸ್ವಾಮಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರವರು ಕೋವಿಡ್-19 ಸೋಂಕಿನಿಂದ ಬೇಗ ಗುಣಮುಖರಾಗಿ ಆಸ್ಪತ್ರೆಯಿಂದ ಹೊರಬರಲಿ ಎಂದು ಶ್ರೀ ಮಲೈ ಮಹದೇಶ್ವರ ಸ್ವಾಮಿ ಸನ್ನಿಧಾನದಲ್ಲಿ ವಿಶೇಷ ಪೂಜೆಯನ್ನು ಕೈಗೊಳ್ಳಲಾಯಿತು.
ಸೋಮವಾರ ಸಂಜೆ 7ರಿಂದ 8ರ ಸಮಯದಲ್ಲಿ ಏಕವಾರ ರುದ್ರಾಭಿಷೇಕ ಹಾಗೂ ಮಹಾ ಸಂಕಲ್ಪ ಪೂಜೆಯೊಂದಿಗೆ ಮಹಾ ಮಂಗಳಾರತಿಯನ್ಮು ಪ್ರಾಧಿಕಾರದ ಪ್ರಧಾನ ಆಗಮಿಕರಾದ ಶ್ರೀ ಕರವೀರಸ್ವಾಮಿಗಳು ನೆರವೇರಿಸಿದರು.
ಈ ಸಂಬಂಧ ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವ ಸ್ವಾಮಿ ‘ಉದಯವಾಣಿ’ಯೊಂದಿಗೆ ಮಾತನಾಡಿ ಪ್ರಾಧಿಕಾರದ ಉಪಾಧ್ಯಕ್ಷರು, ಪ್ರಾಧಿಕಾರದ ಎಲ್ಲ ಸದಸ್ಯರು, ಸ್ಥಳೀಯ ಶಾಸಕರು, ಜಿಲ್ಲೆಯ ಎಲ್ಲ ಶಾಸಕರು ಮತ್ತು ಸಂಸದರು, ಜಿಲ್ಲೆಯ ಎಲ್ಲ ಜನ ಪ್ರತಿನಿಧಿಗಳು, ಜಿಲ್ಲಾಧಿಕಾರಿಗಳು, ಜಿಲ್ಲೆಯ ವಿವಿಧ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿ ಪರವಾಗಿ ಮುಖ್ಯಮಂತ್ರಿಗಳು ಹಾಗೂ ಈ ಪ್ರಾಧಿಕಾರದ ಅಧ್ಯಕ್ಷರು ಆದ ಮುಖ್ಯಮಂತ್ರಿ ಯಡಿಯೂರಪ್ಪನವರು ಅತೀ ಶೀಘ್ರ ಗುಣಮುಖರಾಗಿ ಬರಬೇಕು ಮತ್ತು ಆ ಮೂಲಕ ನಾಡಿನ ಜನತೆಗೆ ಇನ್ನೂ ಹೆಚ್ಷಿನ ಸೇವೆಯನ್ನು ನೀಡಲು ದೇವರು ಅವರಿಗೆ ಶಕ್ತಿಯನ್ನು ಒದಗಿಸಬೇಕೆಂದು ಶ್ರೀ ಮಹದೇಶ್ವರರಲ್ಲಿ ಅರಿಕೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.