ಆರೋಗ್ಯ ಸೇತು: ನಿಲುವು ಕೇಳಿದ ಕೋರ್ಟ್‌

Team Udayavani, Aug 4, 2020, 7:33 AM IST

ಆರೋಗ್ಯ ಸೇತು: ನಿಲುವು ಕೇಳಿದ ಕೋರ್ಟ್‌

ಬೆಂಗಳೂರು: ಕೋವಿಡ್‌ ಹಿನ್ನೆಲೆಯಲ್ಲಿ ಸಂಪರ್ಕಗಳನ್ನು ಪತ್ತೆ ಹಚ್ಚಲು ರೂಪಿಸಲಾಗಿರುವ “ಆರೋಗ್ಯ ಸೇತು’ ಮೊಬೈಲ್‌ ಆ್ಯಪ್‌ ಡೌನ್‌ಲೋಡ್‌ ಹಾಗೂ ಬಳಕೆಯನ್ನು ಕಡ್ಡಾಯಗೊಳಿಸಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ, ಈ ವಿಚಾರದಲ್ಲಿ ತನ್ನ ನಿಲುವು ತಿಳಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ ನೀಡಿದೆ.

ಆರೋಗ್ಯ ಸೇತು ಆ್ಯಪ್‌ ಬಳಕೆಯನ್ನು ಕೇಂದ್ರ ಸರ್ಕಾರ ಕಡ್ಡಾಯಗೊಳಿಸಿದೆ ಎಂದು ಆಕ್ಷೇಪಿಸಿ ಡಿಜಿಟಲ್‌ ವಲಯದಲ್ಲಿ ನಾಗರಿಕರ ಹಕ್ಕುಗಳ ರಕ್ಷಣೆಗೆ ಹೋರಾಟ ಮಾಡುತ್ತಿರುವ ಬೆಂಗಳೂರಿನ ನಿವಾಸಿ ಅನಿವರ್‌ ಎ. ಅರವಿಂದ್‌ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾ. ಎ.ಎಸ್‌. ಓಕ್‌ ಹಾಗೂ ನ್ಯಾ. ಅಶೋಕ್‌ ಎಸ್‌. ಕಿಣಗಿ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಈ ವೇಳೆ ಕೇಂದ್ರ ಸರ್ಕಾರದ ಪರ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಎಂ.ಬಿ. ನರಗುಂದ ಅವರು, 2020ರ ಜೂ.4ರಂದು ಕೇಂದ್ರ ಗೃಹ ಸಚಿವಾಲಯ ಸಚಿವಾಲಯ ಹೊರಡಿಸಿರುವ ಎಸ್‌ಒಪಿ ಪ್ರಕಾರ ಆರೋಗ್ಯ ಸೇತು ಆ್ಯಪ್‌ ಡೌನ್‌ ಲೋಡ್‌ ಹಾಗೂ ಬಳಕೆಯನ್ನು ಕೇಂದ್ರ ಸರ್ಕಾರ ಕಡ್ಡಾಯಗೊಳಿಸಿಲ್ಲ, ಅದು ಐಚ್ಛಿಕವಾಗಿದೆ ಎಂದು ನ್ಯಾಯ ಪೀಠಕ್ಕೆ ತಿಳಿಸಿದರು.

ಇದಕ್ಕೆ ಅರ್ಜಿದಾರರ ಪರ ವಕೀಲರು ಆಕ್ಷೇಪಿಸಿ, ಎಲ್ಲಾ ಪ್ರಯಾಣಿಕರು ಆರೋಗ್ಯ ಸೇತು ಆ್ಯಪ್‌ ಅನ್ನು ಕಡ್ಡಾಯವಾಗಿ ಡೌನ್ ಲೋಡ್‌ ಮಾಡಿಕೊಳ್ಳಬೇಕು ಮತ್ತು ಬಳಸಬೇಕು ಎಂದು 2020ರ ಜು.30ರಂದು ಭಾರತೀಯ ವಿಮಾನಯಾನ ಪ್ರಾಧಿಕಾರ ಕರ್ನಾಟಕದ ಐದು ವಿಮಾನ ನಿಲ್ದಾಣಗಳು ಸೇರಿದಂತೆ ವಿವಿಧ ರಾಜ್ಯಗಳ ವಿಮಾನ ನಿಲ್ದಾಣಗಳಿಗೆ ಅನ್ವಯವಾಗುವಂತೆ ಸೂಚನೆ ಹೊರಡಿಸಿದೆ ಎಂದು ನ್ಯಾಯಪೀಠದ ಗಮನಕ್ಕೆ ತಂದರು. ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಆ್ಯಪ್‌ ಬಳಕೆ ಕಡ್ಡಾಯವಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ. ಈ ವಿಚಾರದಲ್ಲಿ ರಾಜ್ಯ ಸರ್ಕಾರದ ನಿಲುವು ಏನು? ಈ ಸಂಬಂಧ ರಾಜ್ಯದ ಐದು ವಿಮಾನ ನಿಲ್ದಾಣಗಳಿಗೆ ರಾಜ್ಯ ಸರ್ಕಾರ ಸೂಚನೆ ಗಳನ್ನೇದಾರೂ ಹೊರಡಿಸಿ ದೆಯೇ? ಎಂಬ ಬಗ್ಗೆ ವಿವರಣೆ ನೀಡುವಂತೆ ಸೂಚಿಸಿತು.

ಸಷ್ಪನೆ ನೀಡುವಂತೆ ಪ್ರಾಧಿಕಾರಕ್ಕೆ ಸೂಚನೆ :  ಆ್ಯಪ್‌ ಬಳಕೆ ಕಡ್ಡಾಯಗೊಳಿಸಿ ಹೊರಡಿಸಲಾಗಿರುವ ಸೂಚನೆ ಬಗ್ಗೆ ಸ್ಪಷ್ಟನೆ ನೀಡುವಂತೆ ಭಾರತೀಯ ವಿಮಾನಯಾನ ಪ್ರಾಧಿಕಾರದ ಪರ ವಕೀಲರಿಗೆ ನ್ಯಾಯ ಪೀಠ ಸೂಚಿಸಿತು. ಆಗಸ್ಟ್ 31ರವರೆಗೆ ಮೆಟ್ರೋ ಸಂಚಾರಕ್ಕೆ ಅವಕಾಶವಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ. ಹಾಗಾದರೆ, ಮೆಟ್ರೋ ಸಂಚಾರ ಆರಂಭವಾದ ಮೇಲೆ ಆ್ಯಪ್‌ ಬಳಸಬೇಕು ಎಂದು ಹೇಳಿರುವ ಬಗ್ಗೆ ವಿವರಣೆ ನೀಡುವಂತೆ ಬಿಎಂಆರ್‌ ಸಿಎಲ್‌ ಪರ ವಕೀಲರಿಗೆ ಸೂಚಿಸಿದ ನ್ಯಾಯಪೀಠ ವಿಚಾರಣೆಯನ್ನು ಆ.13ಕ್ಕೆ ಮುಂದೂಡಿತು.

ಟಾಪ್ ನ್ಯೂಸ್

Kasaragod: ಕೊಲ್ಲಿ ಉದ್ಯಮಿಯ ಕೊಲೆ: ಬಂಧಿತರಿಂದ ಮಾಹಿತಿ ಸಂಗ್ರಹ

Kasaragod: ಕೊಲ್ಲಿ ಉದ್ಯಮಿಯ ಕೊಲೆ: ಬಂಧಿತರಿಂದ ಮಾಹಿತಿ ಸಂಗ್ರಹ

Fraud Case: ತರಬೇತಿಯ ಶುಲ್ಕ ಪಾವತಿಸದೆ ವಂಚನೆ

Fraud Case: ತರಬೇತಿಯ ಶುಲ್ಕ ಪಾವತಿಸದೆ ವಂಚನೆ

Madikeri: ನಕಲಿ ಅಂಕಪಟ್ಟಿ ಸಲ್ಲಿಸಿ ಸರಕಾರಿ ಹುದ್ದೆ: ಜೈಲು ಶಿಕ್ಷೆ

Madikeri: ನಕಲಿ ಅಂಕಪಟ್ಟಿ ಸಲ್ಲಿಸಿ ಸರಕಾರಿ ಹುದ್ದೆ: ಜೈಲು ಶಿಕ್ಷೆ

Road Mishap ಮೂಡುಬಿದಿರೆ: ಸ್ಕೂಟರ್‌ಗೆ ಕಾರು ಢಿಕ್ಕಿ

Road Mishap ಮೂಡುಬಿದಿರೆ: ಸ್ಕೂಟರ್‌ಗೆ ಕಾರು ಢಿಕ್ಕಿ

Gangolli: ಇನ್ನೂ ಸಿಗದ ಸಮುದ್ರಕ್ಕೆ ಬಿದ್ದ ಮೀನುಗಾರನ ಸುಳಿವು

Gangolli: ಇನ್ನೂ ಸಿಗದ ಸಮುದ್ರಕ್ಕೆ ಬಿದ್ದ ಮೀನುಗಾರನ ಸುಳಿವು

Udupi: ಪಿಂಚಣಿ ಬಾರದೆ ಸಂಕಷ್ಟ: ಕುಟುಂಬಕ್ಕೆ ನೆರವು

Udupi: ಪಿಂಚಣಿ ಬಾರದೆ ಸಂಕಷ್ಟ: ಕುಟುಂಬಕ್ಕೆ ನೆರವು

MVA-Cong

Rift Widen: ಮೈತ್ರಿಕೂಟ ಪಾಲನೆ ಎನ್‌ಡಿಎ ನೋಡಿ ಕಲಿಯಿರಿ: ಕಾಂಗ್ರೆಸ್‌ಗೆ ಉದ್ಧವ್‌ ಬಣ ಪಾಠ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

895

Fraud Case: 2 ಕೋಟಿ ರೂ.ಗೆ 3.5 ಕೋಟಿ ರೂ. ಕೊಡುವುದಾಗಿ ವಂಚನೆ

216

Bengaluru: ಟ್ರಕ್‌ ಡಿಕ್ಕಿ; ಜನ್ಮದಿನದಂದೇ ಬಾಲಕ ಸಾವು

Bengaluru: ರಸ್ತೆ ಬದಿ ಮಲಗುವ ವಿಷಯಕ್ಕೆ ಜಗಳ; ಕಟ್ಟಿಗೆಯಿಂದ ಹೊಡೆದು ವ್ಯಕ್ತಿಯ ಕೊಲೆ

Bengaluru: ರಸ್ತೆ ಬದಿ ಮಲಗುವ ವಿಷಯಕ್ಕೆ ಜಗಳ; ಕಟ್ಟಿಗೆಯಿಂದ ಹೊಡೆದು ವ್ಯಕ್ತಿಯ ಕೊಲೆ

Bengaluru: ಆನ್‌ಲೈನ್‌ ಗೇಮ್‌ನಲ್ಲಿ ಹಣ ಕಳೆದುಕೊಂಡ ಇಬ್ಬರು ಆತ್ಮಹತ್ಯೆ

Bengaluru: ಆನ್‌ಲೈನ್‌ ಗೇಮ್‌ನಲ್ಲಿ ಹಣ ಕಳೆದುಕೊಂಡ ಇಬ್ಬರು ಆತ್ಮಹತ್ಯೆ

Bengaluru: ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಓರ್ವ ಆರೋಪಿ ಬಂಧನ

Bengaluru: ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಓರ್ವ ಆರೋಪಿ ಬಂಧನ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Kasaragod: ಕೊಲ್ಲಿ ಉದ್ಯಮಿಯ ಕೊಲೆ: ಬಂಧಿತರಿಂದ ಮಾಹಿತಿ ಸಂಗ್ರಹ

Kasaragod: ಕೊಲ್ಲಿ ಉದ್ಯಮಿಯ ಕೊಲೆ: ಬಂಧಿತರಿಂದ ಮಾಹಿತಿ ಸಂಗ್ರಹ

1-bb-alvas

Ball Badminton: ಆಳ್ವಾಸ್‌ ಚಾಂಪಿಯನ್‌

1-kho-kho

ಚೊಚ್ಚಲ ಖೋ ಖೋ ವಿಶ್ವಕಪ್‌ ಆರಂಭ

Fraud Case: ತರಬೇತಿಯ ಶುಲ್ಕ ಪಾವತಿಸದೆ ವಂಚನೆ

Fraud Case: ತರಬೇತಿಯ ಶುಲ್ಕ ಪಾವತಿಸದೆ ವಂಚನೆ

Madikeri: ನಕಲಿ ಅಂಕಪಟ್ಟಿ ಸಲ್ಲಿಸಿ ಸರಕಾರಿ ಹುದ್ದೆ: ಜೈಲು ಶಿಕ್ಷೆ

Madikeri: ನಕಲಿ ಅಂಕಪಟ್ಟಿ ಸಲ್ಲಿಸಿ ಸರಕಾರಿ ಹುದ್ದೆ: ಜೈಲು ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.