ಚಿಕಿತ್ಸೆ ನಿರಾಕರಿಸಿದರೆ ಕಾನೂನು ಕ್ರಮ ಕೈಗೊಳ್ಳಿ

ಸರ್ಕಾರಕ್ಕೆ ಮಾನವ ಹಕ್ಕುಗಳ ಆಯೋಗ ಸೂಚನೆ

Team Udayavani, Aug 4, 2020, 7:40 AM IST

ಚಿಕಿತ್ಸೆ ನಿರಾಕರಿಸಿದರೆ ಕಾನೂನು ಕ್ರಮ ಕೈಗೊಳ್ಳಿ

ಬೆಂಗಳೂರು: ಆಸ್ಪತ್ರೆಗೆ ದಾಖಲಿಸಿಕೊಳ್ಳಲು ಹಾಗೂ ಚಿಕಿತ್ಸೆ ನೀಡಲು ನಿರಾಕರಿಸುವ ಖಾಸಗಿ ಆಸ್ಪತ್ರೆಗಳ ವೈದ್ಯರು ಹಾಗೂ ಸಿಇಒಗಳನ್ನು ಕಾನೂನು ರೀತಿ ಬಂಧಿಸಿ ಕ್ರಮ ಜರುಗಿಸುವಂತೆ ರಾಜ್ಯ ಮಾನವ ಹಕ್ಕುಗಳ ಆಯೋಗ ಸರ್ಕಾರಕ್ಕೆ ಸೂಚಿಸಿದೆ.

ಕೋವಿಡ್ ಸೋಂಕಿನಿಂದ ಮೃತಪಟ್ಟವರ ಗೌರವ ಯುತ ಶವಸಂಸ್ಕಾರ, ಸೋಂಕಿತರಿಗೆ ತುರ್ತು ಸಂದರ್ಭಗಳಲ್ಲಿ ಆ್ಯಂಬುಲೆನ್ಸ್‌ ವ್ಯವಸ್ಥೆ, ರೋಗಿ ಗಳನ್ನು ಆಸ್ಪತ್ರೆಗಳಿಗೆ ದಾಖಲಿಸುವ ವಿಚಾರದಲ್ಲಿ ಆಗುತ್ತಿರುವ ಅವ್ಯವಸ್ಥೆ ಹಾಗೂ ಮಾನವ ಹಕ್ಕುಗಳ ಉಲ್ಲಂಘನೆ ಸಂಬಂಧ ಮಾಜಿ ಸಚಿವ ಎಚ್‌.ಕೆ. ಪಾಟೀಲ್‌ ಸಲ್ಲಿಸಿದ್ದ ದೂರು ಆಧರಿಸಿ ವಿಚಾರಣೆ ನಡೆಸಿದ ಆಯೋಗದ ಅಧ್ಯಕ್ಷ ನ್ಯಾ. ಡಿ.ಎಚ್‌. ವಘೇಲಾ ನೇತೃತ್ವದ ಪೀಠ ಈ ಸೂಚನೆ ನೀಡಿತು.

ಆಯೋಗದ ಸೂಚನೆಯಂತೆ ಆರೋಗ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್‌ ಅಖ್ತರ್‌ ಅವರು ಸೋಮವಾರ ವಿಚಾರಣೆಗೆ ಹಾಜರಾಗಿದ್ದರು. ಅವರಿಂದ ವಿವರಣೆ ಪಡೆದ ಆಯೋಗ, ಆಸ್ಪತ್ರೆಗೆ ದಾಖಲಿಸಿಕೊಳ್ಳಲು ಹಾಗೂ ಚಿಕಿತ್ಸೆ ನೀಡಲು ನಿರಾಕರಿಸುವ ಖಾಸಗಿ ಆಸ್ಪತ್ರೆಗಳ ವೈದ್ಯರು ಹಾಗೂ ಸಿಇಒಗಳನ್ನು ಕಾನೂನು ರೀತಿ ಬಂಧಿಸಿ ಕ್ರಮ ಜರುಗಿಸಬೇಕು. ಅಂತ್ಯಕ್ರಿಯೆ ಶಿಷ್ಟಾಚಾರಗಳ ಬಗ್ಗೆ ವ್ಯಾಪಕ ಪ್ರಚಾರ ನೀಡಬೇಕು. ಸೋಂಕಿತರ ಶವಸಂಸ್ಕಾರ, ಚಿಕಿತ್ಸೆ ಮತ್ತಿತರ ವಿಚಾರಗಳಿಗೆ ಸಂಬಂಧಿಸಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸ ಬೇಕು. ಈ ಸಂಬಂದ ನಾಳೆಯಿಂದ (ಮಂಗಳವಾರ) ಯಾವುದೇ ದೂರುಗಳು ಬರ ದಂತೆ ನೋಡಿಕೊಳ್ಳಬೇಕು ಎಂದು ತಾಕೀತು ಮಾಡಿತು.

ಇದಕ್ಕೆ, ಆರೋಗ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಉತ್ತರಿಸಿ, ಅಂತ್ಯಕ್ರಿಯೆಯ ಶಿಷ್ಟಾಚಾರಗಳ ಬಗ್ಗೆ ಮಂಗಳವಾರ ಪ್ರಕಟಣೆ ಹೊರಡಿ ಸಲಾಗುವುದು. ಪಿಪಿಇ ಕಿಟ್‌ಗಳಿಗೆ ಸಂಬಂಧಿಸಿದ ವಿಚಾರ ಆ.10ರೊಳಗೆ ಬಗೆಹರಿಸಲಾಗುವುದು ಎಂದು ತಿಳಿಸಿದರು. ವಿಚಾರಣೆಯನ್ನು ಆ.7ಕ್ಕೆ ಮುಂದೂಡಲಾಯಿತು.

ಎಚ್‌.ಕೆ. ಪಾಟೀಲ್‌ ಕೋರಿಕೆ :  ಇದೇ ವೇಳೆ ಮಾನವ ಹಕ್ಕುಗಳ ಆಯೋಗದ ಮುಂದೆ ಹಾಜರಾದ ಮಾಜಿ ಸಚಿವ ಎಚ್‌.ಕೆ ಪಾಟೀಲ್‌ ಅವರು, ಸೋಂಕು ದೃಢಪಟ್ಟವರಿಗೆ ಅಸ್ಪತ್ರೆಗೆ ಸೇರಿಸಲು ಒಂದು ಗಂಟೆಯೊಳಗೆ ಆ್ಯಂಬುಲೆನ್ಸ್‌ ವ್ಯವಸ್ಥೆ ಮಾಡಬೇಕು. ಮೂರು ತಾಸಿನೊಳಗೆ ಆಸ್ಪತ್ರೆ ಅಥವಾ ಕೋವಿಡ್‌ ಕೇರ್‌ ಸೆಂಟರ್‌ಗೆ ಸೇರಿಸಬೇಕು. ಗುಣಮಟ್ಟದ ಚಿಕಿತ್ಸೆ ಹಾಗೂ ಉತ್ತಮ ಸೇವೆ ಒದಗಿಸಬೇಕು. ಶೌಚಾಲಯ ಇನ್ನಿತರ ಮೂಲಭೂತ ಅಗತ್ಯತೆಗಳನ್ನು ಸಮರ್ಪಕವಾಗಿ ಒದಗಿಸಬೇಕು. ವೈದ್ಯರು, ಆರೋಗ್ಯ ಕಾರ್ಯಕರ್ತರಿಗೆ ಅಗತ್ಯ ಪ್ರಮಾಣದಲ್ಲಿ ಕಾಲ ಕಾಲಕ್ಕೆ ಪಿಪಿಇ ಕಿಟ್‌ಗಳನ್ನು ಪೂರೈಸಬೇಕು. ಆಕ್ಸಿಜನ್‌, ವೆಂಟಿಲೇಟರ್‌, ಔಷಧಿಗಳನ್ನು ಸಮರ್ಪಕ ಪ್ರಮಾಣದಲ್ಲಿ ಲಭ್ಯಗೊಳಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಕೋರಿದರು. ರಾಜ್ಯ ಮಾನವ ಹಕ್ಕುಗಳ ಆಯೋಗ ಸರ್ಕಾರಕ್ಕೆ ಸೂಚಿಸಿದೆ.

ಟಾಪ್ ನ್ಯೂಸ್

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Mandya_SAHITYA

Priority: ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಅವಕಾಶ ವಂಚಿತ ಯಕ್ಷಗಾನ

Chalavadi2

Ambedkar Row: ಕಾಂಗ್ರೆಸ್‌ ಎಂದರೆ ಫೇಕ್‌ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ

police crime

Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!

ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ

ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ

Shabarimala

Sabarimala Railway: ಶಬರಿಮಲೆ ತೀರ್ಥಾಟನೆ: ಕೇರಳಕ್ಕೆ 10 ವಿಶೇಷ ರೈಲು

1-eng

Champions Trophy, ಭಾರತ ಪ್ರವಾಸಕ್ಕೆ ಇಂಗ್ಲೆಂಡ್‌ ತಂಡ ಪ್ರಕಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

4

Bengaluru: ಹಫ್ತಾ ನೀಡಲು ವ್ಯಾಪಾರಿಗೆ ಜೈಲಿನಿಂದಲೇ ಧಮ್ಕಿ!

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Mandya_SAHITYA

Priority: ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಅವಕಾಶ ವಂಚಿತ ಯಕ್ಷಗಾನ

Chalavadi2

Ambedkar Row: ಕಾಂಗ್ರೆಸ್‌ ಎಂದರೆ ಫೇಕ್‌ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ

police crime

Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!

ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ

ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.