ಸುಶಾಂತ್ ಆತ್ಮಹತ್ಯೆ ಪ್ರಕರಣ: ರಿಯಾ ನಾಪತ್ತೆಯಾಗಿಲ್ಲ
Team Udayavani, Aug 4, 2020, 8:57 AM IST
ಮುಂಬಯಿ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಶಾಂತ್ ಗರ್ಲ್ ಫ್ರೆಂಡ್ ರಿಯಾ ಚಕ್ರವರ್ತಿ ನಾಪತ್ತೆಯಾಗಿದ್ದಾರೆ ಎಂಬ ಬಿಹಾರ ಪೊಲೀಸರ ಆರೋಪವನ್ನು ರಿಯಾ ವಕೀಲರು ತಳ್ಳಿಹಾಕಿದ್ದಾರೆ. ಆಕೆ ನಾಪತ್ತೆಯಾಗಿಲ್ಲ. ಪ್ರಕರಣಕ್ಕೆ ಸಂಬಂಧಿಸಿದ ಇದುವರೆಗೆ ಆಕೆಗೆ ಯಾವುದೇ ಸಮನ್ಸ್ ಬಂದಿಲ್ಲ ಎಂದು ವಕೀಲರು ಹೇಳಿದ್ದಾರೆ.
ಒತ್ತಾಯ ಪೂರ್ವಕವಾಗಿ ಕ್ವಾರಂಟೈನ್‌ನಲ್ಲಿ ಇಡಲಾಗಿದೆ ಎಂದು ಬಿಹಾರ ಡಿಜಿಪಿ ಗುಪ್ತೆಶ್ವರ ಪಾಂಡೆ ಆರೋಪಿಸಿದ್ದಾರೆ. ಆದರೆ, ಕೋವಿಡ್ ಮಾರ್ಗಸೂಚಿ ಪ್ರಕಾರವೇ ನಾವು ನಡೆದುಕೊಂಡಿದ್ದೇವೆ ಎಂದು ಬಿಎಂಸಿ ಹೇಳಿದೆ. ಇನ್ನೊಂದೆಡೆ, ಬಿಹಾರ ಸಿಎಂ ನಿತೀಶ್ ಕುಮಾರ್ ಕೂಡ ಈ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದು, ವಿನಯ್ ತಿವಾರಿಯವರನ್ನು ನಡೆಸಿಕೊಂಡ ರೀತಿ ಸರಿಯಿಲ್ಲ ಎಂದಿದ್ದಾರೆ. ಮುಂಬೈ ಕಾಂಗ್ರೆಸ್ ನಾಯಕ ಸಂಜಯ್ ನಿರುಪಮ್ ಅವರೂ ಬಿಎಂಸಿ ಅಧಿಕಾರಿಗಳ ವರ್ತನೆ ಬಗ್ಗೆ ಕಿಡಿಕಾರಿದ್ದಾರೆ. ಇದೇ ವೇಳೆ, ಸುಶಾಂತ್ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಬಿಹಾರದ ಎಲ್ಲ ರಾಜಕೀಯ ನಾಯಕರೂ ಪಕ್ಷಭೇದ ಮರೆತು ಒತ್ತಾಯಿಸಿದ್ದಾರೆ.
ಆರೋಪ ಸುಳ್ಳು: ಇದೇ ವೇಳೆ, ಬಿಹಾರ ಪೊಲೀಸರಿಗೆ ಸಹಕಾರ ನೀಡುತ್ತಿಲ್ಲ ಎಂಬ ಆರೋಪ ಸುಳ್ಳು ಎಂದು ಮುಂಬೈ ಪೊಲೀಸ್ ಮುಖ್ಯಸ್ಥ ಪರಂ ವೀರ್ ಸಿಂಗ್ ಸ್ಪಷ್ಟಪಡಿಸಿದ್ದಾರೆ. ಮುಂಬೈ ಪೊಲೀಸರು ನಡೆಸುತ್ತಿರುವ ತನಿಖೆ ಸರಿಯಾದ ದಿಕ್ಕಿನಲ್ಲೇ ಸಾಗಿದೆ. ಈವರೆಗೆ 56 ಮಂದಿಯ ಹೇಳಿಕೆಗಳನ್ನೂ ದಾಖಲಿಸಿದ್ದೇವೆ. ಬಿಹಾರ ಪೊಲೀಸ್ ತಂಡಕ್ಕೆ ಸಹಕಾರ ನೀಡದೇ ಇರುವ ಪ್ರಶ್ನೆಯೇ ಇಲ್ಲ ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ
24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್.ಕೆ. ಪಾಟೀಲ್
Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ
H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.