ಸಿದ್ದರಾಮಯ್ಯನವರಿಗೂ ಸೋಂಕು ದೃಢ: ಶೀಘ್ರ ಗುಣಮುಖರಾಗಲೆಂದು ಹಾರೈಸಿದ ರಾಜ್ಯ ನಾಯಕರು
Team Udayavani, Aug 4, 2020, 9:20 AM IST
ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿದೆ. ಈ ಹಿನ್ನಲೆಯಲ್ಲಿ ಅವರಿಗೆ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಸಿದ್ದರಾಮಯ್ಯ ಅವರಿಗೆ ಸೋಮವಾರ ಬೆಳಿಗ್ಗೆಯಿಂದ ಜ್ವರ ಬಂದಿದ್ದು, ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದರು. ಆ್ಯಂಟಿಜೆನ್ ಟೆಸ್ಟ್ ನಲ್ಲಿ ಅವರಿಗೆ ಕೋವಿಡ್ -19 ಸೋಂಕು ತಗುಲಿರುವುದು ದೃಢವಾಗಿತ್ತು. ಸದ್ಯ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೂ ಸೋಂಕು ದೃಢವಾಗಿದ್ದು, ಹಾಲಿ ಮತ್ತು ಮಾಜಿ ಮುಖ್ಯಮಂತ್ರಿಗಳಿಬ್ಬರೂ ಒಂದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೋಂಕು ದೃಢವಾದ ವಿಚಾರ ಕೇಳಿ ರಾಜ್ಯದ ವಿವಿಧ ಪಕ್ಷಗಳ ನಾಯಕರು ಅವರ ಶೀಘ್ರ ಚೇತರಿಕೆಗೆ ಹಾರೈಸಿದ್ದಾರೆ.
ಮಾಜಿ ಮುಖ್ಯಮಂತ್ರಿಗಳು ಹಾಗು ವಿರೋಧ ಪಕ್ಷದ ನಾಯಕರಾದ ಸನ್ಮಾನ್ಯ ಶ್ರೀ @siddaramaiah ನವರು ಕೊರೋನಾ ಸೋಂಕಿನಿಂದ ಶೀಘ್ರದಲ್ಲಿ ಗುಣಮುಖರಾಗಲಿ, ಉತ್ತಮ ಆರೋಗ್ಯದೊಂದಿಗೆ ಮತ್ತೆ ಎಂದಿನಂತೆ ತಮ್ಮ ಕೆಲಸಕಾರ್ಯಗಳಲ್ಲಿ ತೊಡಗಿಕೊಳ್ಳಲಿ ಎಂದು ಹಾರೈಸುತ್ತೇನೆ. https://t.co/VKMmEVXzgT
— B.S. Yediyurappa (@BSYBJP) August 4, 2020
ವಿರೋಧ ಪಕ್ಷದ ನಾಯಕ @siddaramaiah ಅವರಿಗೆ ಕೊರೋನಾ ಸೋಂಕು ತಗುಲಿರುವ ವಿಷಯ ಕೇಳಿ ಮನಸ್ಸಿಗೆ ಘಾಸಿಯಾಯಿತು. ಶೀಘ್ರ ಗುಣಮುಖರಾಗಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ.
ಸಾರ್ವಜನಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಜನಪ್ರತಿನಿಧಿಗಳು ಅತಿಹೆಚ್ಚಿನ ಮುಂಜಾಗ್ರತ ಕ್ರಮಗಳನ್ನು ಚಾಚೂತಪ್ಪದೆ ಪಾಲಿಸುವಂತೆ ಮನವಿ ಮಾಡುತ್ತೇನೆ.1/2— H D Kumaraswamy (@hd_kumaraswamy) August 4, 2020
ಮಾಜಿ ಮುಖ್ಯಮಂತ್ರಿಗಳು ಹಾಗು ವಿರೋಧ ಪಕ್ಷದ ನಾಯಕರಾದ ಸನ್ಮಾನ್ಯ ಶ್ರೀ @siddaramaiah ನವರು ಕೊರೋನಾ ಸೋಂಕಿನಿಂದ ಶೀಘ್ರದಲ್ಲಿ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. https://t.co/Xzh2HfSqoC
— Govind M Karjol (@GovindKarjol) August 4, 2020
ಬೇಗ ಗುಣಮುಖರಾಗಿ ಬನ್ನಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ . https://t.co/KItmlV2h8L
— Nalinkumar Kateel (@nalinkateel) August 4, 2020
ಶೀಘ್ರ ಗುಣಮುಖರಾಗಿ @siddaramaiah
ಅವರೇ.ನೀವು ಬೇಗನೆ ಚೇತರಿಸಿಕೊಳ್ಳುವಂತೆ ನನ್ನ ಪ್ರಾರ್ಥನೆ. Wish you a speedy recovery! https://t.co/LIo5nGIzEm
— Dr. Ashwathnarayan C. N. (@drashwathcn) August 4, 2020
ಮಣಿಪಾಲ ಆಸ್ಪತ್ರೆಯ ವೈದ್ಯರೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ. ಅವರ ಆರೋಗ್ಯದಲ್ಲಿ ಸ್ಥಿರವಾಗಿದೆ. ರಾಜ್ಯದ ಜನ ಆತಂಕ ಪಡುವ ಅಗತ್ಯವಿಲ್ಲ. ಸಿಎಂ ಬಿಎಸ್ವೈ ಮತ್ತು ಮಾಜಿ ಸಿಎಂ ಬೇಗ ಚೇತರಿಸಿಕೊಂಡು ಮತ್ತೆ ಎಂದಿನಂತೆ ಕರ್ತವ್ಯಕ್ಕೆ ಮರಳಲಿ ಎಂದು ಹಾರೈಸುತ್ತೇನೆ
— Dr Sudhakar K (@mla_sudhakar) August 4, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CID; ಸತತ 2 ಗಂಟೆಗಳ ಕಾಲ ಸಚಿನ್ ಕುಟುಂಬಸ್ಥರ ವಿಚಾರಣೆ
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.