ಆರೋಗ್ಯವಾಗಿರುವವನೇ ನಿಜವಾದ ಶ್ರೀಮಂತ

Team Udayavani, Aug 4, 2020, 11:23 AM IST

ಆರೋಗ್ಯವಾಗಿರುವವನೇ ನಿಜವಾದ ಶ್ರೀಮಂತ

ತುರುವೇಕೆರೆ: ತಾಲೂಕಿನ ಸಂಘ ಸಂಸ್ಥೆಗಳು ಹಾಗೂ ದಾನಿಗಳು ಕೋವಿಡ್  ವೇಳೆ ತಮ್ಮಗಳ ಆರೋಗ್ಯವನ್ನೂ ಲೆಕ್ಕಿಸದೆ ನಮ್ಮೊಂದಿಗೆ ಕೈಜೋಡಿಸಿ ಶ್ರಮಿಸಿದ ತಾಲೂಕಿನ ಜನತೆಗೆ ಅಭಿನಂದನೆ ಸಲ್ಲಿಸುವುದಾಗಿ ಶಾಸಕ ಮಸಾಲ ಜಯರಾಂ ಹೇಳಿದರು.

ಪಟ್ಟಣದ ಖಜಾನ ಲೇಔಟ್‌ನಲ್ಲಿ ರೋಟರಿ ಟ್ರಸ್ಟ್‌ವತಿಯಿಂದ ರೋಟರಿ ಸೇವಾ ಭವನದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿ, ತಾಲೂಕಿನಲ್ಲಿ ರೋಟರಿ ಸಂಸ್ಥೆ ಅನೇಕ ಉತ್ತಮ ಸೇವಾ ಕಾರ್ಯ ಮಾಡುವ ಮೂಲಕ ತಾಲೂಕಿನ ಜನತೆಗೆ ಅನುಕೂಲ ಕಲ್ಪಿಸಿದೆ ಎಂದರು.

ಆ ನಿಟ್ಟಿನಲ್ಲಿ ತಾಲೂಕಿನ ಯಾವುದೇ ಸೇವಾ ಸಂಸ್ಥೆಗಳೊಂದಿಗೆ ಕೈ ಜೋಡಿಸಿ ಸಹಕಾರ ನೀಡಲು ನಾನು ಸದಾ ಸಿದ್ಧ. ಸೇವಾ ಭವನಕ್ಕೆ 1 ಲಕ್ಷ ರೂ.ಗಳನ್ನು ದೇಣಿಗೆಯಾಗಿ ಸ್ಥಳದಲ್ಲಿಯೇ ನೀಡಿ, ಕೇವಲ ಅರ್ಧ ಅಡಿ ಜಾಗಕ್ಕಾಗಿ ಕಿತ್ತಾಡುವ ಇಂದಿನ ದಿನಗಳಲ್ಲಿ ಪ್ರದೀಪ್‌ ಗುಪ್ತಾ ಅವರು ಉಚಿತವಾಗಿ ನಿವೇಶನವನ್ನು ರೋಟರಿ ಸಂಸ್ಥೆಗೆ ನೀಡಿರುವುದು ಶ್ಲಾಘನೀಯ ಎಂದು ತಿಳಿಸಿದರು.

ಅಧ್ಯಕ್ಷ ಅವಧಿಯಲ್ಲಿಯೇ ರೋಟರಿ ಸೇವಾ ಭವನ ನಿರ್ಮಾಣ ಮಾಡಿದ್ದು ಅವರಿಗೆ ದೇವರು ಆಯುರಾರೋಗ್ಯ ದಯಪಾಲಿಸಲಿ. ತಾಲೂಕಿನಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ, ಜ್ವರ ಬಂದಲ್ಲಿ ಕೂಡಲೆ ಆರೋಗ್ಯ ಕೇಂದ್ರಕ್ಕೆ ತೆರಳಿ ಪರೀಕ್ಷಿಸಿಕೊಳ್ಳುವ ಮೂಲಕ ನಾಗರಿಕರು ಇದರ ಪ್ರಯೋಜನ ಪಡೆದು ಕೊಳ್ಳುವಂತೆ ಸಲಹೆ ನೀಡಿದರು.

ತಮ್ಮಡಿಹಳ್ಳಿ ಮಠದ ಡಾ.ಅಭಿನವ ಮಲ್ಲಿಕಾರ್ಜುನ ದೇಶಿಕೇಂದ್ರ ಸ್ವಾಮೀಜಿ ಮಾತನಾಡಿ, ಅಖಂಡ ವಿಶ್ವ ಎಲ್ಲೋ ಒಂದು ಕಡೆ ನೋವಲ್ಲಿದೆ. ದುಡ್ಡಿದ್ದವನು ಶ್ರೀಮಂತನಲ್ಲ. ಆರೋಗ್ಯವಾಗಿರುವವನು ಶ್ರೀಮಂತ. ಮಾನವನ ಆಸೆಗೆ ಕೊನೆಯಿಲ್ಲ. ಎಲ್ಲವೂ ಬೇಕೆಂಬ ಆಸೆ. ಯೋಗ ಎಲ್ಲರಿಗೂ ದೊರಕಬಹುದು ಆದರೆ ಯೋಗ್ಯತೆ ಎಲ್ಲರಿಗೂ ಬರಲಾಗದು. ಆ.5 ರಂದು ಅಖಂಡ ಭಾರತಕ್ಕೆ ಒಳ್ಳೆ ದಿನವಾಗಲಿದ್ದು, ಮಣ್ಣಲ್ಲಿ ಮಣ್ಣಾಗುವ ಈ ದೇಹ ಇದ್ದಷ್ಟು ದಿನ ಸಂಘ ಸಂಸ್ಥೆಗಳಲ್ಲಿ ತೊಡಗಿ ಸಮಾಜಕ್ಕಿಷ್ಟು ಕೆಲಸ ಮಾಡೋಣ ಎಂದರು.

ಜಿಲ್ಲಾ ಗವರ್ನರ್‌ ರೋ.ನಾಗೇಂದ್ರ ಪ್ರಸಾದ್‌ ನೂತನ ಅಧ್ಯಕ್ಷ ಎಸ್‌.ಎಲ್‌. ರಾಜಣ್ಣನವರಿಗೆ ಅಧಿಕಾರ ಹಸ್ತಾಂತರಿಸಿದರು. ಸ್ಥಾಪಕ ಅಧ್ಯಕ್ಷ ಎನ್‌.ಆರ್‌.ಜಯರಾಂ, ಪ್ರಕಾಶ್‌ ಗುಪ್ತಾ, ಬೆಂಗಳೂರಿನ ರೋಟರಿ ಲೆಪ್ಟಿನೆಂಟ್‌ ಕೆ.ಪಿ. ನಾಗೇಶ್‌, ರೋ.ಬಿಳಿಗೆರೆ ಶಿವಕುಮಾರ್‌ ಇದ್ದರು.

ಟಾಪ್ ನ್ಯೂಸ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು

Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

4-kunigal

Kunigal: ಕೆಂಪನಹಳ್ಳಿ ಗ್ರಾಮದಲ್ಲಿ ಸರಣಿ ಕಳ್ಳತನ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

7-dharmasthala

Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

6-siruguppa

Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.