ಅರಣ್ಯ ಇಲಾಖೆಯಿಂದ ವೃಕ್ಷಾ ಬಂಧನ ಕಾರ್ಯಕ್ರಮ
Team Udayavani, Aug 4, 2020, 12:16 PM IST
ಧಾರವಾಡ: ಸಸ್ಯ ಸಂರಕ್ಷಣೆಯ ಮಹತ್ವವನ್ನು ಮನಗಾಣಿಸಲು ಧಾರವಾಡ ಅರಣ್ಯ ವಿಭಾಗದ ವತಿಯಿಂದ “ವೃಕ್ಷಾ ಬಂಧನ’ ಎಂಬ ವಿನೂತನ ಕಾರ್ಯಕ್ರಮ ಆಚರಿಸಲಾಗುತ್ತಿದೆ.
ಪ್ರತಿವರ್ಷ ವಿಶ್ವ ಪರಿಸರ ದಿನ ಸಂದರ್ಭದಲ್ಲಿ ಸಹಸ್ರಾರು ಸಸಿ ನೆಡಲಾಗುತ್ತದೆ. ನಂತರದ ದಿನಗಳಲ್ಲಿ ಅವುಗಳ ರಕ್ಷಣೆ, ಪೋಷಣೆಗೆ ಜನರ ಪಾಲ್ಗೊಳ್ಳುವಿಕೆ ಉತ್ತೇಜಿಸಲು ಧಾರವಾಡ ಅರಣ್ಯ ವಿಭಾಗದ ಅಧಿಕಾರಿಗಳು ಟ್ವಿಟರ್, ಫೇಸ್‌ಬುಕ್, ಇನ್ಸ್ಟಾ ಗ್ರಾಂ , ರೇಡಿಯೋ ಮತ್ತಿತರ ಮಾಧ್ಯಮಗಳ ಮೂಲಕ ರಕ್ಷಾ ಬಂಧನ ದಿನದಂದು ವೃಕ್ಷಾ ಬಂಧನ ಆಚರಿಸಲು ಮನವಿ ಮಾಡಿದ್ದರು. ಈ ಮನವಿಗೆ ಸ್ಪಂದಿಸಿದ ಅನೇಕರು ಇಂದು ಹಲವೆಡೆ ವೃಕ್ಷಾ ಬಂಧನ ಆಚರಿಸಿ ಸಹಮತ ವ್ಯಕ್ತಪಡಿಸಿದ್ದಾರೆ.
ಕಳೆದ ಜೂ.5ರಂದು ವಿಶ್ವ ಪರಿಸರ ದಿನ ಸಂದರ್ಭದಲ್ಲಿ ಸಸಿಗಳೊಂದಿಗೆ ಸೆಲ್ಫಿ ಕಾರ್ಯಕ್ರಮಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಸಸಿ ನೆಡುವುದಷ್ಟೇ ಅಲ್ಲ ಅದರ ರಕ್ಷಣೆ, ಪೋಷಣೆ ಅದಕ್ಕಿಂತ ಮುಖ್ಯ ಎಂಬುದನ್ನು ಪ್ರಚುರಪಡಿಸಲು ವೃûಾ ಬಂಧನ ಸಹಕಾರಿಯಾಗಿದೆ ಎಂದು ಧಾರವಾಡ ಉಪ ಅರಣ್ಯ ಸಂರಕ್ಷಣಾಧಿಕಾರಿ ಯಶಪಾಲ್ ಕ್ಷೀರಸಾಗರ ಹೇಳಿದರು. ಸಾರ್ವಜನಿಕರಲ್ಲಿ ಗಿಡ ಮರಗಳೊಂದಿಗೆ ,ಪರಿಸರದೊಂದಿಗೆ ಭಾವನಾತ್ಮಕ ಸಂಬಂಧ ಬೆಸೆಯಲು ವೃಕ್ಷಾ ಬಂಧನ ಒಂದು ವಿನೂತನ ಮಾರ್ಗವೆನಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.