ಅರ್ಹ ಫಲಾನುಭವಿಗಳ ಸಾಲ ಮನ್ನಾಕ್ಕೆ ಮನವಿ
Team Udayavani, Aug 4, 2020, 1:35 PM IST
ಕೂಡ್ಲಿಗಿ: ಸಾಲಮನ್ನಾವಾಗದೆ ಉಳಿದಿರುವ ಅರ್ಹ ಫಲಾನುಭವಿಗಳ ಸಾಲಮನ್ನಾ ಮಾಡಬೇಕು ಮತ್ತು ಸಾಲ ಮರು ವಿತರಿಸುವುದರ ಬಗ್ಗೆ ಪ್ರಾಥಮಿಕ ಕೃಷಿ
ಪತ್ತಿನ ಸಹಕಾರ ಸಂಘ(ನಿ) ಇವರಿಂದ ಪಟ್ಟಣದ ತಹಶೀಲ್ದಾರ ಮೂಲಕ ಸಹಕಾರಿ ಸಚಿವರಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ(ನಿ) ಅಧ್ಯಕ್ಷ ನಂದಿವಿರೂಪಾಕ್ಷಿ ಮಾತನಾಡಿ, ಈಗಾಗಲೇ 2018-19ನೇ ಸಾಲಿನಲ್ಲಿ ಸಹಕಾರಿ ಸಂಘ
ಹಾಗೂ ರಾಷ್ಟ್ರೀಕೃತ ಬ್ಯಾಂಕುಗಳ ಅಲ್ಪಾವಧಿ ಸಾಲ ಮನ್ನಾ ಎಂದು ತಿಳಿಸಿದ್ದರು. ಆದರೆ ಅಂದಿನ ಸರ್ಕಾರ ಪ್ರತಿ ಕುಟುಂಬದ ಸಹಾಕಾರಿ ಸಂಘದಿಂದ ಪಡೆದ ಸಾಲದ ಒಂದು ಲಕ್ಷದವರೆಗೆ ಹಾಗೂ ರಾಷ್ಟ್ರೀಕೃತ ಬ್ಯಾಂಕುಗಳ ಸಾಲದ ಎರಡು ಲಕ್ಷದವರೆಗೆ 2018 ಜುಲೈ 31ಕ್ಕೆ ಪುರ್ವನ್ವವಾಗುವಂತೆ ಸಾಲಮನ್ನಾ ಆದೇಶ ಪ್ರಕಟಗೊಂಡಿತ್ತು. ಆ ಹಿನ್ನೆಲೆಯಲ್ಲಿ ರೈತರು ಸಾಲ ಮನ್ನಾ ಸೌಲಭ್ಯ ಪಡೆದಿದ್ದರು. ಕೆಲವೊಂದು ಆರ್ಹ ಫಲಾನುಭವಿಗಳು ಸಹಕಾರಿ ಸಂಘದಿಂದ ಪಡೆದ ಸಾಲಗಳು ಮನ್ನಾ ಆಗಿರುವುದಿಲ್ಲ. ಕಾರಣ ಕೇಳಿದರೆ ಏನಾದರೂ ಒಂದು ಬೇಜವಾªಬಾರಿ ಉತ್ತರವೆಂಬತೆ ನೀಡುತ್ತಿದ್ದಾರೆ. ಇತ್ತ ಸಣ್ಣಪುಟ್ಟ ತಾಂತ್ರಿಕ ದೋಷಗಳು ಹಾಗೂ ಅಧಿಕಾರಿಗಳ ನಿರ್ಲಕ್ಷದಿಂದ ಸಾಲಮನ್ನಾ ಆಗಿರುವುದಿಲ್ಲ ಎಂಬುವುದು ರೈತರ ಅಳಲಾಗಿದೆ ಎಂದು ತಿಳಿಸಿದರು.
ನಂದಿ ನಂದೀಶ ಮಾತನಾಡಿ, ಮುಂಗಾರು ಜೀವನವನ್ನು ನಿಭಾಯಿಸಲು ಸಾಧ್ಯವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಆದ ಕಾರಣ ಸಹಕಾರ ಪತ್ತಿನ ಸಂಘ ಇನ್ನಿತರ ರಾಷ್ಟ್ರೀಕೃತ ಬ್ಯಾಂಕುಗಳ ಸುಗಮ ವ್ಯವಹಾರಕ್ಕೆ ತೊಂದರೆ ಆಗುತ್ತಿದೆ. ಕೂಡಲೇ ಸಾಲ ಪಡೆದ ಸಾಲಮನ್ನಾಗೆ ರೈತರ ಖಾತೆಗಳಿಗೆ ಸಾಲಮನ್ನಾ ಮೊತ್ತವನ್ನು ಜಮಾ ಮಾಡಿ ಮರು ಸಾಲ ವಿತರಿಸಿ ರೈತರ ಗೊಂದಲಗಳಿಗೆ ತೆರೆ ಎಳೆಯಬೇಕು ಎಂದರು. ಈ ಸಂದರ್ಭದಲ್ಲಿ ನಂದಿ ಸಿದ್ದೇಶ, ತುಕರಾಂ,
ನಾಗರಾಜ, ಹೂಲೆಪ್ಪ, ಮಂಜು ಬಸವರಾಜ, ಬಂಗಾರಪ್ಪ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.