ಕೋವಿಡ್ ಕಳವಳ-ಆಗಸ್ಟ್ 04: 6259 ಹೊಸ ಪ್ರಕರಣಗಳು ; 6777 ಡಿಸ್ಚಾರ್ಜ್ ; 110 ಸಾವು
ಬೆಂಗಳೂರು ನಗರ 2035, ಮೈಸೂರು 662, ಕಲಬುರಗಿ 285 ಬಳ್ಳಾರಿ 284, ಬೆಳಗಾವಿ 263, ದಕ್ಷಿಣ ಕನ್ನಡ 225, ಉಡುಪಿ 170
Team Udayavani, Aug 4, 2020, 7:15 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೆಂಗಳೂರು: ಸೋಮವಾರ ಸಾಯಂಕಾಲದಿಂದ ಮಂಗಳವಾರ ಸಾಯಂಕಾಲದವರೆಗಿನ ಕೋವಿಡ್ 19 ಸೋಂಕು ಪ್ರಕರಣಗಳ ವರದಿಯ ಪ್ರಕಾರ, ಈ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 6259 ಕೋವಿಡ್ 19 ಸೋಂಕು ಪ್ರಕರಣಗಳು ವರದಿಯಾಗಿವೆ.
ಈ ನಿರ್ಧಿಷ್ಟ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 6777 ಸೋಂಕಿತರು ಗುಣಮುಖರಾಗಿರುವುದು ಆಶಾದಾಯಕ ವಿಚಾರವಾಗಿದೆ. ಮತ್ತು ಈ ಅವಧಿಯಲ್ಲಿ 110 ಸೋಂಕಿತರು ಮೃತಪಟ್ಟಿದ್ದಾರೆ.
ಇದೀಗ ರಾಜ್ಯದಲ್ಲಿ ಒಟ್ಟು ಕೋವಿಡ್ 19 ಸೋಂಕಿತರ ಸಂಖ್ಯೆ 1,45,830 ಆಗಿದೆ. 69,272 ಸೊಂಕಿತರು ಚೇತರಿಸಿಕೊಂಡಿದ್ದಾರೆ ಹಾಗೂ ರಾಜ್ಯದಲ್ಲಿ ಕೋವಿಡ್ 19 ಸೊಂಕು ಸಂಬಂಧಿ 2704 ಸಾವಿನ ಪ್ರಕರಣಗಳು ದಾಖಲಾಗಿವೆ ಹಾಗೂ 08 ಜನ ಕೋವಿಡ್ 19 ಸೋಂಕಿತರು ಅನ್ಯ ಕಾರಣದಿಂದ ಮೃತಪಟ್ಟಿದ್ದಾರೆ. 634 ಸೋಂಕಿತರು ತುರ್ತು ನಿಗಾ ಘಟಕದಲ್ಲಿ ದಾಖಲುಗೊಂಡು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ರಾಜ್ಯದಲ್ಲಿ ಇದೀಗ ಒಟ್ಟು 74469 ಸಕ್ರಿಯ ಕೋವಿಡ್ 19 ಸೋಂಕು ಪ್ರಕರಣಗಳಿವೆ.
ಇಂದು ರಾಜ್ಯದಲ್ಲಿ ಒಟ್ಟು 29,488 Rapid ಆ್ಯಂಟಿಜೆನ್ ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದೆ ಹಾಗೂ RT PCR ಮತ್ತು ಇನ್ನಿತರೇ ವಿಧಾನಗಳ ಮೂಲಕ 12,970 ಸೋಂಕು ಪತ್ತೆ ಪರೀಕ್ಷೆಗಳನ್ನು ಈ ಅವಧಿಯಲ್ಲಿ ನಡೆಸಲಾಗಿದೆ. ಈ ಮೂಲಕ ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ ಒಟ್ಟು 42,458 ಸೋಂಕು ಪತ್ತೆ ಪರಿಕ್ಷೆಗಳನ್ನು ನಡೆಸಲಾಗಿದೆ.
ರಾಜ್ಯದಲ್ಲಿ ಇದುವರೆಗೆ ಒಟ್ಟು 2,34,409 Rapid ಆ್ಯಂಟಿಜೆನ್ ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದೆ. ಇದನ್ನು ಹೊರತಾಗಿಸಿ ರಾಜ್ಯಾದ್ಯಂತ 12,54,607 ಜನರಿಗೆ RT PCR ಮತ್ತು ಇನ್ನಿತರೇ ವಿಧಾನಗಳ ಮೂಲಕ ಕೋವಿಡ್ 19 ಸೋಂಕು ಪತ್ತೆ ಪರೀಕ್ಷೆಯನ್ನು ನಡೆಸಲಾಗಿದೆ. ಮತ್ತು ಈ ಎಲ್ಲಾ ವಿಧಾನಗಳ ಮೂಲಕ ರಾಜ್ಯದಲ್ಲಿ ಇಂದಿನವರೆಗೆ ಒಟ್ಟು 14,89,016 ಜನರಿಗೆ ಕೋವಿಡ್ 19 ಸೋಂಕು ಪತ್ತೆ ಪರೀಕ್ಷೆಯನ್ನು ನಡೆಸಲಾಗಿದೆ.
ಈ ಅವಧಿಯಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ 2035 ಕೋವಿಡ್ 19 ಸೊಂಕು ಪ್ರಕರಣಗಳು ವರದಿಯಾಗುವ ಮೂಲಕ ಸೋಂಕು ಪ್ರಕರಣಗಳಲ್ಲಿ ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ. ಆ ಬಳಿಕದ ಸ್ಥಾನಗಳಲ್ಲಿ ಮೈಸೂರು (662), ಕಲಬುರಗಿ (285), ಬಳ್ಳಾರಿ (284), ಬೆಳಗಾವಿ (263), ದಕ್ಷಿಣ ಕನ್ನಡ (225), ದಾವಣಗೆರೆ (191), ಧಾರವಾಡ (188), ಹಾಸನ (188), ಚಿಕ್ಕಬಳ್ಳಾಪುರ (171), ಉಡುಪಿ (170), ಕೊಪ್ಪಳ (163), ಹಾವೇರಿ (157), ರಾಯಚೂರು (144), ಬಾಗಲಕೋಟೆ (144), ಮಂಡ್ಯ (126) ಮತ್ತು ಬೀದರ್ (114) ಜಿಲ್ಲೆಗಳಿವೆ.
ಇನ್ನುಳಿದಂತೆ, ಗದಗ (96), ಬೆಂಗಳೂರು ಗ್ರಾಮಾಂತರ (82), ತುಮಕೂರು (78), ಯಾದಗಿರಿ (76), ವಿಜಯಪುರ (71), ರಾಮನಗರ (65), ಚಿಕ್ಕಮಗಳೂರು (63), ಉತ್ತರಕನ್ನಡ (57), ಚಾಮರಾಜನಗರ (57), ಕೋಲಾರ (46), ಕೊಡಗು (31), ಶಿವಮೊಗ್ಗ (15) ಮತ್ತು ಚಿತ್ರದುರ್ಗ (12), ಮತ್ತು ಸೇರಿದಂತೆ ರಾಜ್ಯದ ಒಟ್ಟು 30 ಜಿಲ್ಲೆಗಳಲ್ಲಿ ಇಂದು ಮೂರಂಕಿ ಹಾಗೂ ಎರಡಂಕಿಯ ಕೋವಿಡ್ 19 ಸೋಂಕಿನ ಪ್ರಕರಣಗಳು ವರದಿಯಾಗಿವೆ.
ಬೆಂಗಳೂರು ನಗರ ಜಿಲ್ಲೆಯಲ್ಲಿ ಒಟ್ಟು ಕೋವಿಡ್ 19 ಸೋಂಕಿತ ಪ್ರಕರಣಗಳ ಸಂಖ್ಯೆ 63033ಕ್ಕೆ ಏರಿಕೆಯಾಗಿದ್ದು, 27877 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ ಹಾಗೂ ಸಕ್ರಿಯ ಪ್ರಕರಣಗಳ ಸಂಖ್ಯೆ 34021ಕ್ಕೆ ಏರಿಕೆಯಾಗಿದೆ. ಇಲ್ಲಿ ಕೋವಿಡ್ ಸಂಬಂಧಿತ 1134 ಸಾವು ಸಂಭವಿಸಿದೆ.
ಬಳ್ಳಾರಿ ಜಿಲ್ಲೆಯಲ್ಲಿ ಒಟ್ಟು 7638 ಕೋವಿಡ್ 19 ಸೋಂಕಿನ ಪ್ರಕರಣಗಳು ದಾಖಲಾಗಿದ್ದು 3724 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 3830 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 84 ಸಾವು ಸಂಭವಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಾಸಿಟಿವ್ ಪ್ರಕರಣಗಳ ಸಂಖ್ಯೆ 6388ಕ್ಕೆ ಏರಿಕೆಯಾಗಿದ್ದು ಇವರಲ್ಲಿ 2918 ಸೋಂಕಿತರು ಗುಣಮುಖರಾಗಿದ್ದಾರೆ. 3290 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ ಹಾಗೂ ಇಲ್ಲಿ ಕೋವಿಡ್ ಸಂಬಂಧಿತ 178 ಸಾವು ಸಂಭವಿಸಿದೆ. ಬೆಂಗಳೂರು ನಗರ (1134) ಹಾಗೂ ಮೈಸೂರು (183) ಜಿಲ್ಲೆಗಳ ಬಳಿಕ ಕೋವಿಡ್ 19 ಸಂಬಂಧಿ ಅತೀ ಹೆಚ್ಚಿನ ಸಾವು ಸಂಭವಿಸಿರುವ ಜಿಲ್ಲೆ ಇದಾಗಿದೆ.
ಕಲಬುರಗಿಯಲ್ಲಿ ಒಟ್ಟು 6222 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ 3470 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. 2639 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ ಹಾಗೂ ಇಲ್ಲಿ 113 ಜನರು ಈ ಸೋಂಕಿಗೆ ಮೃತಪಟ್ಟಿದ್ದಾರೆ.
ಮೈಸೂರು ಜಿಲ್ಲೆಯಲ್ಲಿ 5854 ಕೋವಿಡ್ ಸೋಂಕಿನ ಪ್ರಕರಣಗಳು ದಾಖಲಾಗಿದ್ದು 2230 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 3441 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 183 ಸಾವು ಸಂಭವಿಸಿದೆ.
ಉಡುಪಿ ಜಿಲ್ಲೆಯಲ್ಲಿ 4969 ಕೋವಿಡ್ 19 ಸೋಂಕಿನ ಪ್ರಕರಣಗಳು ದಾಖಲಾಗಿದ್ದು 2889 ಜನರು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ ಹಾಗೂ ಜಿಲ್ಲೆಯಲ್ಲಿ 2038 ಸಕ್ರಿಯ ಪ್ರಕರಣಗಳಿವೆ. ಇಲ್ಲಿ ಕೋವಿಡ್ 19 ಸೋಂಕು ಸಂಬಂಧಿ 42 ಸಾವಿನ ಪ್ರಕರಣಗಳು ದಾಖಲಾಗಿದೆ.
ಧಾರವಾಡ ಜಿಲ್ಲೆಯಲ್ಲಿ 4835 ಕೋವಿಡ್ ಸೋಂಕಿನ ಪ್ರಕರಣಗಳು ದಾಖಲಾಗಿದ್ದು 2226 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 2446 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 163 ಸಾವು ಸಂಭವಿಸಿದೆ.
ಬೆಳಗಾವಿ ಜಿಲ್ಲೆಯಲ್ಲಿ 3944 ಕೋವಿಡ್ ಸೋಂಕಿನ ಪ್ರಕರಣಗಳು ದಾಖಲಾಗಿದ್ದು 1082 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 2776 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 86 ಸಾವು ಸಂಭವಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ
Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.