ಹರಿದು ಬರುತ್ತಿದೆ ದೇಣಿಗೆಯ ಮಹಾಪೂರ!
ದೇಶಾದ್ಯಂತ ವಿವಿಧ ಸಂಸ್ಥೆಗಳಿಂದ ಕೊಡುಗೆ ಸಲ್ಲಿಕೆ; ಚಿನ್ನ ನೀಡಿದ ಹೈದರಾಬಾದ್ ಮಳಿಗೆ
Team Udayavani, Aug 5, 2020, 9:45 AM IST
ಹೊಸದಿಲ್ಲಿಯಲ್ಲಿ ಬಿಜೆಪಿ ಸಂಸದ ಪರ್ವೇಶ್ ವರ್ಮಾ ಸಾರ್ವಜನಿಕರಿಗೆ ಹಣತೆ ವಿತರಿಸಿದರು.
ಹೊಸದಿಲ್ಲಿ: ಅಯೋಧ್ಯೆಯಲ್ಲಿ ನಿರ್ಮಾಣಗೊಳ್ಳಲಿರುವ ಭವ್ಯ ರಾಮ ಮಂದಿರಕ್ಕಾಗಿ ದೇಣಿಗೆಯ ಮಹಾಪೂರವೇ ಹರಿದುಬರುತ್ತಿದೆ. ಸಂತರು, ರಾಜಕಾರಣಿಗಳು, ಉದ್ಯಮಿಗಳು ಮತ್ತು ಭಕ್ತರು ತಮ್ಮ ಕೈಲಾದ ಕೊಡುಗೆಯನ್ನು ನೀಡುತ್ತಿದ್ದಾರೆ.
ಮಧ್ಯಪ್ರದೇಶದ ಚಿತ್ರಕೂಟದಲ್ಲಿ ಆಶ್ರಮ ವನ್ನು ಹೊಂದಿರುವ, ರಾಮಚರಿತಮಾ ನಸದ ಹೆಸರಾಂತ ಕಥಾವಾಚಕರಾದ ಮೊರಾರಿ ಬಾಪು ಅವರು ತಮ್ಮ ವ್ಯಾಸಪೀಠದಿಂದ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ 5 ಕೋ. ರೂ.ಗಳ ದೇಣಿಗೆಯನ್ನು ಘೋಷಿಸಿದ್ದಾರೆ. ಮೊಘಲ್ ವಂಶಸ್ಥನೆಂದು ಘೋಷಿಸಿಕೊಂಡಿ ರುವ ಪ್ರಿನ್ಸ್ ಯಾಕೂಬ್ ಹಬೀಬುದ್ದೀನ್ ತುಸೀ ಒಂದು ಕೆ.ಜಿ. ಭಾರದ ಚಿನ್ನದ ಗಟ್ಟಿಯನ್ನು ನೀಡುವುದಾಗಿ ಘೋಷಿಸಿದ್ದಾರೆ. ಇದಲ್ಲದೆ
ಟ್ರಸ್ಟ್‌ನ ಅಧ್ಯಕ್ಷ ಮಹಾಂತ ನೃತ್ಯ ಗೋಪಾಲ ದಾಸ್ ಅವರಿಗೆ 40 ಕೆ.ಜಿ. ತೂಕವಿರುವ ಬೆಳ್ಳಿಯ ಇಟ್ಟಿಗೆಯನ್ನು ಹಸ್ತಾಂತರಿಸಲಾಗಿದ್ದು ಆ. 5ರಂದು ನಡೆಯಲಿರುವ ಭೂಮಿಪೂಜೆ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು ಈ ಇಟ್ಟಿಗೆಯನ್ನು ಇರಿಸಿ ಮಂದಿರಕ್ಕೆ ಶಿಲಾನ್ಯಾಸ ನೆರವೇರಿಸಲಿರುವರು.
ರಾಜಕಾರಣಿಗಳೂ ಶ್ರೀರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ದೇಣಿಗೆಯನ್ನು ನೀಡಲಾ ರಂಭಿಸಿದ್ದಾರೆ. ಉತ್ತರಪ್ರದೇಶದ ಉಪಮುಖ್ಯ ಮಂತ್ರಿ ಕೇಶವಪ್ರಸಾದ್ ಮೌರ್ಯ ಅವರು ಇತ್ತೀ ಚೆಗೆ ಅಯೋಧ್ಯೆಗೆ ಭೇಟಿ ನೀಡಿದ್ದ ವೇಳೆ 6.60ಲಕ್ಷ ರೂ. ಗಳ ದೇಣಿಗೆಯನ್ನು ಹಸ್ತಾಂತರಿಸಿದರು.
ಮಾ.25ರಂದು ರಾಮ ಲಲ್ಲಾ ವಿಗ್ರಹವನ್ನು ತಾತ್ಕಾಲಿಕವಾಗಿ ಬೇರೆಡೆಗೆ ಸ್ಥಳಾಂತರಿಸುವ ಸಂದರ್ಭದಲ್ಲಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು 11ಲ.ರೂ.ಗಳ ವೈಯಕ್ತಿಕ ದೇಣಿಗೆಯನ್ನು ಹಸ್ತಾಂತರಿಸಿದ್ದರು.
ಪಟ್ನಾದ ಮಹಾವೀರ ಮಂದಿರ ಟ್ರಸ್ಟ್ ಶ್ರೀರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ಒಟ್ಟು 5 ಕಂತುಗಳಲ್ಲಿ 10 ಕೋ. ರೂ.ಗಳ ದೇಣಿಗೆಯನ್ನು ನೀಡುವುದಾಗಿ ಘೋಷಿಸಿದ್ದು ಈ ಪೈಕಿ 2 ಕೋ. ರೂ.ಗಳ ಮೊದಲ ಕಂತನ್ನು ಈಗಾಗಲೇ ಹಸ್ತಾಂತರಿಸಿದೆ. ಉಳಿದ ಕಂತುಗಳನ್ನು ಮುಂದಿನ ವರ್ಷಗಳಲ್ಲಿ ಶ್ರೀರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಬೇಡಿಕೆಗೆ ತಕ್ಕಂತೆ ನೀಡುವುದಾಗಿ ತಿಳಿಸಿದೆ.
ಭಕ್ತರು ನಗದು ರೂಪದಲ್ಲಿ ಮಾತ್ರವಲ್ಲದೆ ಚಿನ್ನಾಭರಣಗಳನ್ನೂ ದೇಣಿಗೆಯಾಗಿ ನೀಡಿದ್ದಾರೆ. ಹೈದರಾಬಾದ್ ಮೂಲದ ಜುವೆಲ್ಲರ್ ಕೆ. ಶ್ರೀನಿವಾಸ್ ಅವರು ಒಂದು ಕೆ.ಜಿ. ಭಾರದ ಚಿನ್ನದ ಇಟ್ಟಿಗೆ ಮತ್ತು 5ಕೆ.ಜಿ. ಭಾರದ ಬೆಳ್ಳಿಯ ಇಟ್ಟಿಗೆಯನ್ನು ಟ್ರಸ್ಟ್‌ಗೆ ದೇಣಿಗೆ ನೀಡಿದ್ದಾರೆ. ಚಿನ್ನ-ಬೆಳ್ಳಿ ವ್ಯಾಪಾರಿಗಳ ಸಂಘದ ಉತ್ತರ ಪ್ರದೇಶ ಘಟಕದ ವತಿಯಿಂದ 33ಕೆ.ಜಿ.ತೂಕದ ಬೆಳ್ಳಿ ಇಟ್ಟಿಗೆಯನ್ನು ಟ್ರಸ್ಟ್‌ಗೆ ಹಸ್ತಾಂತರಿಸಲಾಗಿದೆ.
ಏತನ್ಮಧ್ಯೆ ವಿಶ್ವ ಹಿಂದೂ ಪರಿಷತ್ ದೇಶಾದ್ಯಂತದ 10 ಕೋಟಿ ಕುಟುಂಬಗಳನ್ನು ಸಂಪರ್ಕಿಸಿ ಒಂದು ರೂ.ನಿಂದ 10 ರೂ.ಗಳವರೆಗೆ ದೇಣಿಗೆ ಸಂಗ್ರಹಿಸುವ ಸಂಕಲ್ಪ ತೊಟ್ಟಿದೆ. ಕಳೆದ ನಾಲ್ಕು ತಿಂಗಳುಗಳ ಅವಧಿಯಲ್ಲಿ ಆನ್‌ಲೈನ್ ದೇಣಿಗೆ ಮೂಲಕ ಶ್ರೀರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ 6 ಕೋ. ರೂ.ಗಳನ್ನು ಸಂಗ್ರಹಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
MUST WATCH
ಹೊಸ ಸೇರ್ಪಡೆ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.