ಆರೋಗ್ಯದ ಬಗ್ಗೆ ಉದಾಸೀನ ಬೇಡ
Team Udayavani, Aug 5, 2020, 10:58 AM IST
ಚಾಮರಾಜನಗರ: ಜಿಲ್ಲೆಯ ಜನತೆ ಜ್ವರ, ಕೆಮ್ಮು, ಶೀತ, ಉಸಿರಾಟದಂತಹ ಲಕ್ಷಣಗಳು ಕಂಡುಬಂದಲ್ಲಿ ಉದಾಸೀನ ಮಾಡದೇ ತಕ್ಷಣವೇ ವೈದ್ಯರನ್ನು ಕಂಡು ಚಿಕಿತ್ಸೆ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಮನವಿ ಮಾಡಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ ಕೋವಿಡ್ ಸೋಂಕಿನಿಂದಾಗಿ 11 ಮಂದಿ ಮೃತಪಟ್ಟಿದ್ದಾರೆ. ಮೃತರಾದವರ ಪೈಕಿ 8 ಮಂದಿ ತೀವ್ರ ಉಸಿರಾಟ ತೊಂದರೆಯಿಂದ ಬಳಲುತ್ತಿದ್ದವರಾಗಿದ್ದರು. ಇವರಲ್ಲಿ 3 ಮಂದಿ ಉದಾಸೀನ ತೋರಿ ಆರೋಗ್ಯ ಪರಿಸ್ಥಿತಿ ತೀರ ಹದಗೆಟ್ಟಾಗ ತಡವಾಗಿ ಚಿಕಿತ್ಸೆಗೆ ದಾಖಲಾಗಿದ್ದರು. ಆಸ್ವತ್ರೆಗೆ ಬರುವ ವೇಳೆಗೆ ಪರಿಸ್ಥಿತಿ ಕೈ ಮೀರಿ ಹೋದ ಕಾರಣದಿಂದ ಸಕಾಲಕ್ಕೆ ಚಿಕಿತ್ಸೆ ಫಲಕಾರಿ ಯಾಗದೇ ನಿಧನ ಹೊಂದಿರುವುದು ವೈದ್ಯಕೀಯ ವಿಶ್ಲೇಷಣೆಯಿಂದ ತಿಳಿದುಬಂದಿದೆ.
ಚಿಕಿತ್ಸೆಗೆ ಸಲಹೆ ಪಡೆಯಿರಿ: ಪ್ರಸ್ತುತ ಮಳೆಗಾಲ ಆರಂಭವಾಗಿದೆ. ಈ ಸಮಯದಲ್ಲಿ ಜ್ವರ, ಶೀತ ಬಾಧಿಸುವುದು ಸಾಮಾನ್ಯವಾಗಿದೆ. ಇದನ್ನು ಉಪೇಕ್ಷೆ ಮಾಡದೆ ವೈದ್ಯರ ಬಳಿ ತೆರಳಿ ಚಿಕಿತ್ಸೆ ಸಲಹೆ ಪಡೆಯಬೇಕು. ಆರಂಭದಲ್ಲಿಯೇ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದರಿಂದ ಮುಂದೆ ಹೆಚ್ಚಿನ ಅನಾರೋಗ್ಯದಿಂದ ವಿಕೋಪ ಪರಿಸ್ಥಿತಿಗೆ ತಲುಪುವುದನ್ನು ತಪ್ಪಿಸಿಕೊಳ್ಳಬಹುದು ಎಂದು ಸಲಹೆ ನೀಡಿದ್ದಾರೆ.
ವಿಶೇಷ ಕಾಳಜಿ: ಕೋವಿಡ್ ಗೆ ಲಸಿಕೆ ಇಲ್ಲ. ಆದರೆ, ಔಷಧೋಪಚಾರದಿಂದ ಗುಣಮುಖರಾಗುತ್ತಿರುವವರ ಸಂಖ್ಯೆ ಜಿಲ್ಲೆಯಲ್ಲಿ ಹೆಚ್ಚಳವಾಗಿದೆ. ಜಿಲ್ಲಾಡಳಿತ ಸೋಂಕಿತರ ಆರೈಕೆಗೆ ವಿಶೇಷ ಕಾಳಜಿ ವಹಿಸಿ ಚಿಕಿತ್ಸಾ ಕ್ರಮಗಳಿಗೆ ಸಕಲ ವ್ಯವಸ್ಥೆ ಕೈಗೊಂಡಿದೆ. ಕೋವಿಡ್ ನಿಯಂತ್ರಣಕ್ಕೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯವಾಗಿದೆ. ಜ್ವರ, ಉಸಿರಾಟ ತೊಂದರೆ, ಶೀತ, ಕೆಮ್ಮು ಕಾಣಿಸಿಕೊಂಡಲ್ಲಿ ಅಂತಹವರನ್ನು ಗ್ರಾಮ, ವಾರ್ಡ್‌ವಾರು ಟಾಸ್ಕ್ ಫೋರ್ಸ್ ಸಮಿತಿಯವರು, ಸ್ವಯಂ ಸೇವಕರು ಗುರುತಿಸಿ ಕೂಡಲೆ ವೈದ್ಯರ ಬಳಿ ಆರೋಗ್ಯ ತಪಾಸಣೆಗೆ ಕಳುಹಿಸಿಕೊಡುವ ಮೂಲಕ ಸಹಕಾರ ನೀಡಬೇಕು ಎಂದು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
National Badminton: ರೋಣಕ್ ಚೌಹಾಣ್ ಸೆಮಿಗೆ
Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್ ಹಂತಕ್ಕೇರಿದರೆ?
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.