ಯಾದಗಿರಿ ಜಿಲ್ಲೆಯಲ್ಲಿ ಕೋವಿಡ್ ಸೋಂಕಿಗೆ ಇಬ್ಬರ ಸಾವು: 76 ಹೊಸ ಪ್ರಕರಣ ಪತ್ತೆ
Team Udayavani, Aug 6, 2020, 11:00 AM IST
ಯಾದಗಿರಿ: ಜಿಲ್ಲೆಯಲ್ಲಿ ಸೋಂಕಿನ ಮೂಲವೇ ಪತ್ತೆಯಾಗದವರಲ್ಲಿ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಸೋಂಕಿನಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಏರುತ್ತಿದ್ದು, ಬುಧವಾರ ಮತ್ತೆ ಇಬ್ಬರು ಸೋಂಕಿತರು ಸಾವನ್ನಪ್ಪಿರುವುದು ವರದಿಯಾಗಿದೆ.
ಆ.3ರಂದು ಯಾದಗಿರಿ ನಗರದ 65 ವರ್ಷದ ಮಹಿಳೆ ಪಿ-152717 ಮರಣ ನಂತರ ಆಸ್ಪತ್ರೆಗೆ ಕರೆತಂದ ವೇಳೆ ಸೋಂಕು ತಗುಲಿರುವುದು ದೃಢವಾಗಿದೆ. ಆ.5ರಂದು ಶಹಾಪುರಿನ ದೇವಿನಗರದ 70 ವರ್ಷದ ಮಹಿಳೆ ಪಿ-157879 ಮರಣ ನಂತರ ಆಸ್ಪತ್ರೆಗೆ ಕರೆತರಲಾಗಿದೆ ಎಂದು ರಾಜ್ಯ ಆರೋಗ್ಯ ಬುಲೆಟಿನ್‌ನಿಂದ ತಿಳಿದು ಬಂದಿದೆ. ಜಿಲ್ಲೆಯಲ್ಲಿ ಎರಡು ದಿನದಲ್ಲೇ ನಾಲ್ವರು ಸಾವನ್ನಪ್ಪಿದಂತಾಗಿದ್ದು, ಮರಣ ಹೊಂದಿದವರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ.
ಬುಧವಾರ ಮತ್ತೆ 76 ಜನರಲ್ಲಿ ವೈರಸ್ ಹೊಕ್ಕಿದೆ. ಸೋಂಕಿತರಲ್ಲಿ ಹೆಚ್ಚಿನವರು ಯಾದಗಿರಿಯ ಸ್ಟೇಷನ್ ಏರಿಯಾ ಮತ್ತು ಲಾಡಿಸ್ ಗಲ್ಲಿಯ ಒಟ್ಟು 18 ಜನರಿದ್ದು, ಯಾದಗಿರಿ ನಗರ ಮತ್ತು ಗ್ರಾಮೀಣ ಭಾಗದ 39, ಶಹಾಪುರ ವ್ಯಾಪ್ತಿಯ 26 ಹಾಗೂ 11 ಜನ ಸುರಪುರ ತಾಲೂಕಿನ ವಿವಿಧ ಗ್ರಾಮಗಳ ಜನರಿಗೆ ಸೋಂಕು ಹರಡಿದೆ. ಇಂದಿಗೆ 2663 ಜನರು ಸೋಂಕಿಗೆ ತುತ್ತಾಗಿದ್ದಾರೆ. ಬುಧವಾರ ಸೋಂಕಿತರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ 3261 ಜನರನ್ನು ಪತ್ತೆ ಹಚ್ಚಲಾಗಿದ್ದು, ಒಟ್ಟು 9163 ಜನ ಮತ್ತು ದ್ವಿತೀಯ ಸಂಪರ್ಕದಲ್ಲಿದ್ದ 3227 ಜನರು ಪತ್ತೆಯಾಗಿದ್ದು, ಒಟ್ಟು 11,005 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ.
ಆರೋಗ್ಯ ಇಲಾಖೆ 251 ಜನರ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಕಳಿಸಿದೆ. 165 ಜನರ ವರದಿ ನೆಗೆಟಿವ್ ಬಂದಿವೆ. ಜಿಲ್ಲೆಯಲ್ಲಿ 236 ಕಂಟೇನ್ಮೆಂಟ್ ಝೋನ್‌ಗಳನ್ನು ರಚಿಸಲಾಗಿದೆ. ಹೊಸ ಜಿಲ್ಲಾಸ್ಪತ್ರೆಯಲ್ಲಿ 178 ಜನರನ್ನು ಪತ್ಯೇಕವಾಗಿರಿಸಲಾಗಿದೆ. ಶಹಾಪುರ 67, ಸುರಪುರ 70 ಜನ ಹಾಗೂ ಬಂದಳ್ಳಿ ಏಕಲವ್ಯ ಕೊರೊನಾ ಕೇರ್ ಸೆಂಟರ್ ನಲ್ಲಿ 76 ಜನರನ್ನು ಅವಲೋಕನೆಗಾಗಿ ಇರಿಸಲಾಗಿದೆ ಎಂದು ಪ್ರಭಾರಿ ಅಪರ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್ ವಿಚಾರವಾಗಿ ವಾಗ್ವಾದ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.