ಚಿಕಿತ್ಸೆಯಲ್ಲಿ ಲೋಪವಾಗದಂತೆ ಎಚ್ಚರ ವಹಿಸಿ
Team Udayavani, Aug 6, 2020, 2:13 PM IST
ಹಾವೇರಿ: ಶಿಗ್ಗಾವಿ ತಾಲೂಕು ಮೀಸಲು ಕೋವಿಡ್ ಹೆಲ್ತ್‌ಕೇರ್ ಸೆಂಟರ್‌ಗೆ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣನವರ ಬುಧವಾರ ಭೇಟಿ ನೀಡಿ ಆಕ್ಸಿಜನ್ ಪೂರೈಕೆ ಘಟಕ, ಹಾಸಿಗೆ ವ್ಯವಸ್ಥೆ ಕುರಿತು ಪರಿಶೀಲನೆ ನಡೆಸಿ ವೈದ್ಯರಿಂದ ಮಾಹಿತಿ ಪಡೆದರು.
ಈ ಸಂದರ್ಭದಲ್ಲಿ ಮಾತನಾಡಿ, ಕೋವಿಡ್ ಸೋಂಕಿತರ ಚಿಕಿತ್ಸೆಯಲ್ಲಿ ಯಾವುದೇ ಲೋಪ, ಕೊರತೆಗಳಾಗಬಾರದು. ವೈದ್ಯಕೀಯ
ವಿಭಾಗದಿಂದ ಯಾವುದೇ ದೂರು ಬರದಂತೆ ಎಲ್ಲ ಮುನ್ನೆಚ್ಚರಿಕೆ ವಹಿಸಬೇಕು. ಪ್ರಸರೈಸ್ ಆಕ್ಸಿಜನ್ ಪೂರೈಕೆಯಲ್ಲಿ ಯಾವುದೇ ಲೋಪವಾಗದಂತೆ ಗರಿಷ್ಠ ಎಚ್ಚರಿಕೆ ಇರಬೇಕು. ಯಾವುದೇ ತಾಂತ್ರಿಕ ತೊಂದರೆಗಳು ಯಂತ್ರದಲ್ಲಿ ಎದುರಾದರೂ ತಕ್ಷಣ
ದುರಸ್ತಿಗೆ ಕ್ರಮ ವಹಿಸಬೇಕು. ವೈದ್ಯಕೀಯ ಸಿಬ್ಬಂದಿ ಹಾಗೂ ಅರೆವೈದ್ಯಕೀಯ ಸಿಬ್ಬಂದಿ ಸಕಾಲದಲ್ಲಿ ರೋಗಿಗಳಿಗೆ ಸ್ಪಂದಿಸಬೇಕು ಎಂದು ಸೂಚನೆ ನೀಡಿದರು. ಜಿಪಂ ಸಿಇಒ ರಮೇಶ ದೇಸಾಯಿ, ಅಪರ ಜಿಲ್ಲಾಧಿಕಾರಿ ಎಸ್.ಯೋಗೇಶ್ವರ, ಶಿಗ್ಗಾವಿ
ತಹಶೀಲ್ದಾರರು ಉಪಸ್ಥಿತರಿದ್ದರು.
ಕೋವಿಡ್ ಚಿಕಿತ್ಸೆಗೆ ವ್ಯವಸ್ಥೆ: ಜಿಲ್ಲಾಸ್ಪತ್ರೆಯಲ್ಲಿ 78 ಹಾಸಿಗೆಗಳ ವ್ಯವಸ್ಥೆ ಮಾಡಲಾಗಿದ್ದು, 10 ಐಸಿಯು ಬೆಡ್‌ಗಳ ವ್ಯವಸ್ಥೆ ಮಾಡಲಾಗಿದೆ. 58 ಕೇಂದ್ರೀಕೃತ ಪ್ರಸರೈಸ್ ಆಕ್ಸಿಜನ್ ವ್ಯವಸ್ಥೆ ಮಾಡಲಾಗಿದೆ. 36 ವೆಂಟಿಲೇಟರ್ ಅಳವಡಿಸಲಾಗಿದೆ.
ಅವಶ್ಯಕತೆಗನುಗುಣವಾಗಿ ವೈದ್ಯಾ ಧಿಕಾರಿಗಳ ನೇಮಕಾತಿ ನಡೆಸಲಾಗಿದೆ. ಈಗಾಗಲೇ 55 ವೈದ್ಯಾಧಿಕಾರಿಗಳ ನೇಮಕಾತಿ ಮಾಡಿಕೊಳ್ಳಲಾಗಿದೆ. 20 ಶುಶ್ರೂಷಕರು, 25 ಲ್ಯಾಬ್‌ಟೆಕ್ನಿಷಿಯನ್‌ಗಳನ್ನು ನೇಮಕಾತಿ ಮಾಡಿಕೊಳ್ಳಲಾಗಿದೆ.
ಜಿಲ್ಲಾಸ್ಪತ್ರೆಯಲ್ಲಿ 150 ಲಕ್ಷ ರೂ. ವೆಚ್ಚದಲ್ಲಿ ಕೋವಿಡ್ ಶಂಕಿತರ ಗಂಟಲು ದ್ರವ ಪರೀಕ್ಷೆಗಾಗಿ ಸುಸಜ್ಜಿತ ಪ್ರಯೋಗಾಲಯ ತೆರೆಯಲಾಗಿದೆ. 8000 ರ್ಯಾಪಿಡ್ ಆಂಟಿಜನ್ ಕಿಟ್‌ಗಳು ಜಿಲ್ಲೆಗೆ ಪೂರೈಕೆಯಾಗಿವೆ. ಅಗತ್ಯಕ್ಕೆ ತಕ್ಕಂತೆ ವೈದ್ಯಕೀಯ
ಸೌಲಭ್ಯಗಳ ಹೆಚ್ಚಳಕ್ಕೆ ಕ್ರಮ ವಹಿಸಲಾಗುತ್ತಿದೆ.
ಸವಣೂರು, ಶಿಗ್ಗಾವಿ, ರಾಣಿಬೆನ್ನೂರ ಹಾಗೂ ಹಿರೇಕೆರೂರಿನಲ್ಲಿ ತಲಾ 50 ಹಾಸಿಗೆಯ ಮೀಸಲು ಕೋವಿಡ್ ಹೆಲ್ತ್‌ಕೇರ್ ಸೆಂಟರ್‌ಗಳನ್ನು ತೆರೆದು ಸೌಲಭ್ಯ ಕಲ್ಪಿಸಲಾಗಿದೆ. ಬ್ಯಾಡಗಿ ಮತ್ತು ಹಾನಗಲ್ ತಾಲೂಕು ಆಸ್ಪತ್ರೆಗಳಲ್ಲಿ ಕೋವಿಡ್
ಹೆಲ್ತ್‌ಕೇರ್ ಸೆಂಟರ್ ಆರಂಭಿಸುವ ಕಾರ್ಯ ಪ್ರಗತಿಯಲ್ಲಿದೆ. ಬಸಾಪುರ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆ, ಕಲಕೇರಿ ಇಂದಿರಾಗಾಂಧಿ ವಸತಿ ಶಾಲೆ, ಹಲಗೇರಿ ಪರಿಶಿಷ್ಟ ವರ್ಗಗಳ ಬಾಲಕಿಯರ ಹಾಸ್ಟೆಲ್, ದೂದಿಹಳ್ಳಿ ಕಿತ್ತೂರು ರಾಣಿ ಚನ್ನಮ್ಮ
ವಸತಿ ಶಾಲೆ, ಬ್ಯಾಡಗಿ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ಕೋವಿಡ್ ಕೇರ್ ಸೆಂಟರ್ ಗಳನ್ನು ತೆರೆಯಲಾಗಿದೆ.
ಈಗಾಗಲೇ 400 ಹಾಸಿಗೆಗಳ ವ್ಯವಸ್ಥೆ ಮಾಡಲಾಗಿದೆ. ಅಕ್ಕಿಆಲೂರು ಹಾಗೂ ಬಾಡ ವಸತಿ ಶಾಲೆಯಲ್ಲಿ ಸೌಲಭ್ಯ ಕಲ್ಪಿಸುವ ಕಾರ್ಯ ಪ್ರಗತಿಯಲ್ಲಿದೆ. ವಾರದಲ್ಲಿ ಹೆಚ್ಚುವರಿಯಾಗಿ 485 ಹಾಸಿಗೆಗಳ ವ್ಯವಸ್ಥೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಹೆಚ್ಚುವರಿಯಾಗಿ ಒಟ್ಟಾರೆ 830 ಹಾಸಿಗೆಗಳ ವ್ಯವಸ್ಥೆ ಕಲ್ಪಿಸುವ ಕಾರ್ಯ ಪ್ರಗತಿಯಲ್ಲಿದೆ. ತಲಾ 50 ಹಾಸಿಗೆ ಸೌಲಭ್ಯಯುಳ್ಳ ಕೋವಿಡ್ ಕೇರ್ ಸೆಂಟರ್‌ಗಳನ್ನು ತೆರೆದು 400 ಹಾಸಿಗೆಗಳ ಸೌಲಭ್ಯ ಕಲ್ಪಿಸಲಾಗಿದೆ. ಜಿಲ್ಲೆಯಾದ್ಯಂತ 425 ಹಾಸಿಗೆಗಳಿಗೆ ಪ್ರಸರೈಸ್ ಆಕ್ಸಿಜನ್ ಪೂರೈಕೆ ಕಲ್ಪಿಸುವ ಕಾರ್ಯ ಪ್ರಗತಿಯಲ್ಲಿದೆ. ಈಗಾಗಲೇ 185 ಹಾಸಿಗೆಗಳಿಗೆ ವ್ಯವಸ್ಥೆ ಕಲ್ಪಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ
Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ
Adi Jambava Samavesha: ಅಂಬೇಡ್ಕರ್ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ
BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ
Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ
MUST WATCH
ಹೊಸ ಸೇರ್ಪಡೆ
Election Results: ಝಾರ್ಖಂಡ್, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?
Udupi: ಜಾಗ ಖರೀದಿಗೆ ಕರಾರು ಮಾಡಿಸಿ ವಂಚನೆ: ಪ್ರಕರಣ ದಾಖಲು
Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್?
Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್ ಹೊರತೆಗೆದ ವೈದ್ಯರು!
Snake; ಕಾಳಿಂಗದ ವೈಜ್ಞಾನಿಕ ಹೆಸರು ‘ಓಫಿಯೋಫೆಗಸ್ ಕಾಳಿಂಗ’:ಅಧಿಕೃತವಾಗಿ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.