ಚಾಮರಾಜನಗರ: ನಿತ್ಯ ಸೋಂಕು ಪ್ರಕರಣಗಳು ಶತಕದ ಅಂಚಿಗೆ : ಒಟ್ಟು ಪ್ರಕರಣಗಳು ಸಾವಿರದಂಚಿನಲ್ಲಿ
Team Udayavani, Aug 6, 2020, 9:09 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಚಾಮರಾಜನಗರ: ಜಿಲ್ಲೆಯಲ್ಲಿ ಗುರುವಾರ ಕೋವಿಡ್ 19 ಪ್ರಕರಣಗಳು ಹಿಂದೆಂದಿಗಿಂತ ಅಧಿಕವಾಗಿ ವರದಿಯಾಗಿವೆ.
ದಿನದ ಪ್ರಕರಣಗಳ ಪ್ರಮಾಣ ಶತಕದ ಅಂಚಿಗೆ ಬಂದು ನಿಂತಿದ್ದು, ಒಟ್ಟು ಪ್ರಕರಣಗಳು ಸಾವಿರದ ಅಂಚಿಗೆ ಬಂದಿವೆ.
ಗುರುವಾರ 90 ಪ್ರಕರಣಗಳು ವರದಿಯಾಗಿದ್ದು, ಒಟ್ಟಾರೆ ಪ್ರಕರಣಗಳ ಸಂಖ್ಯೆ 990 ಆಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 381 ಕ್ಕೇರಿದೆ.
27 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದುವರೆಗೆ ಒಟ್ಟಾರೆ 595 ಮಂದಿ ಗುಣಮುಖರಾಗಿದ್ದಾರೆ.
ಗುರುವಾರ, ಆರ್ಟಿಪಿಸಿಆರ್ ಪ್ರಯೋಗಾಲಯದಲ್ಲಿ 81 ಹಾಗೂ ರ್ಯಾಪಿಡ್ ಆಂಟಿಜೆನ್ ಟೆಸ್ಟ್ ಮೂಲಕ 9 ಮಾದರಿಗಳು ಪಾಸಿಟಿವ್ ಬಂದಿವೆ. ಒಟ್ಟು 638 ಮಾದರಿಗಳನ್ನು ಪರೀಕ್ಷೆಗೊಳಪಡಿಸಲಾಗಿತ್ತು.
ಚಾಮರಾಜನಗರ ತಾಲೂಕಿನಿಂದ 34, ಕೊಳ್ಳೇಗಾಲ ತಾಲೂಕಿನಿಂದ 27, ಗುಂಡ್ಲುಪೇಟೆ ತಾಲೂಕಿನಿಂದ 15, ಯಳಂದೂರು ತಾಲೂಕಿನಿಂದ 13 ಹಾಗೂ ಹನೂರು ತಾಲೂಕಿನಿಂದ 01 ಪ್ರಕರಣಗಳು ವರದಿಯಾಗಿವೆ.
ಕೋವಿಡ್ನಿಂದ ಜಿಲ್ಲೆಯಲ್ಲಿ 12 ಮಂದಿ ಮೃತಪಟ್ಟಿದ್ದಾರೆ. 11 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.