ಇಬ್ಬರು ಸೋದರರಿಗೆ ಸೋಂಕು ದೃಢ


Team Udayavani, Aug 7, 2020, 2:36 PM IST

ಇಬ್ಬರು ಸೋದರರಿಗೆ ಸೋಂಕು ದೃಢ

ದೋಟಿಹಾಳ: ಗ್ರಾಮದ 35 ವರ್ಷದ ಹಾಗೂ 33 ವರ್ಷದ ಅಣ್ಣತಮ್ಮಂದಿರಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು ಒಬ್ಬರು ಕೊಪ್ಪಳದ ಕೋವಿಡ್‌ ಕೇರ್‌ ಸೆಂಟರ್‌ ಹಾಗೂ ಇನ್ನೊಬ್ಬರು ಹೋಂ ಕ್ವಾರಂಟೈನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಗ್ರಾಮದ 33 ವರ್ಷದ ವ್ಯಕ್ತಿ ಕೊಪ್ಪಳದಲ್ಲಿ ಪೊಲೀಸ್‌ ಸಿಬ್ಬಂದಿಯಾದ ಕರ್ತವ್ಯ ನಿರ್ವಹಿಸುತ್ತಿದ್ದನು. ಸೋಮವಾರ ಈತನಿಗೆ ಸೋಂಕು ದೃಢಪಟ್ಟದೆ. ಶನಿವಾರ ಬಕ್ರೀದ್‌ ಹಬ್ಬಕ್ಕೆ ದೋಟಿಹಾಳ ಗ್ರಾಮಕ್ಕೆ ಬಂದಿದ್ದಾನೆ. ಹೀಗಾಗಿ ಈತನ ಕುಟುಂಬಸ್ಥರನ್ನು ಬುಧವಾರ ಕುಷ್ಟಗಿ ತಾಲೂಕು ಆಸ್ಪತ್ರೆಯಲ್ಲಿ ರ್ಯಾಪಿಡ್‌ ಟೆಸ್ಟ್‌ ಮಾಡಿದಾಗ 35 ವರ್ಷದ ಈತನ ಅಣ್ಣನಿಗೂ ಸೋಂಕು ತಗುಲಿರುವುದು ಪತ್ತೆಯಾಗಿದೆ.

ಅಣ್ಣ ರೋಣ ಕೆಎಸ್‌ಆರ್‌ಟಿಸಿ ಘಟಕದ ಸಿಬ್ಬಂದಿಯಾಗಿದ್ದು, ಇಬ್ಬರು ದೋಟಿಹಾಳದಲ್ಲಿ ಶನಿವಾರ ಬಕ್ರೀದ್‌ ಹಬ್ಬ ಆಚರಿಸಿದ್ದಾರೆ. ಕೆಎಸ್‌ಆರ್‌ಟಿಸಿ ಸಿಬ್ಬಂದಿ ಹಬ್ಬಕ್ಕೆ ರಜೆಗೆ ಬಂದಿದ್ದು, ಮರಳಿ ಕೆಲಸಕ್ಕೆ ಹೋಗಿಲ್ಲ. ಈತನ ಪ್ರಥಮ-10 ಹಾಗೂ ದ್ವಿತೀಯ ಸಂಪರ್ಕದಲ್ಲಿ 8 ಜನ ಇದ್ದಾರೆ. ಇನ್ನೂ ಅನೇಕರು ಬಕ್ರೀದ್‌ ಆಚರಣೆ ವೇಳೆ ಇವರ ಸಂಪರ್ಕಕ್ಕೆ ಬಂದಿದ್ದು ಎಲ್ಲರಿಗೂ ಆತಂಕ ಶುರುವಾಗಿದೆ.

ಹೋಂ ಕ್ವಾರಂಟೈನ್‌ ಎಷ್ಟರ ಮಟ್ಟಿಗೆ ಸರಿ?: ಗ್ರಾಮದ 35 ವರ್ಷದ ವ್ಯಕ್ತಿಗೆ ಬುಧವಾರ ಸೋಂಕು ಪತ್ತೆಯಾಗಿದೆ. ಸೋಂಕಿತನನ್ನು ಆರೋಗ್ಯ ಇಲಾಖೆಯವರು ಕೋವಿಡ್‌ ಕೇರ್‌ ಸೆಂಟರ್‌ ಕಳಿಸದೇ ಹೋಂ ಕ್ವಾರಂಟೈನಲ್ಲಿಟ್ಟು ಚಿಕಿತ್ಸೆ ನೀಡುತ್ತಿರುವುದು ಗ್ರಾಮಸ್ಥರಲ್ಲಿ ಢವಢವ ಶುರುವಾಗಿದೆ. ಸೋಕಿತರ ಮನೆಯಲ್ಲಿ ಒಟ್ಟು 10 ಜನರಿದ್ದು, ಎಲ್ಲರೂ ಒಂದೇ ಶೌಚಾಲಯ, ಸ್ನಾನದ ಕೋಣೆ ಇದೆ. ಹೀಗಿರುವಾಗ ಆರೋಗ್ಯ ಇಲಾಖೆಯವರು ಸೋಂಕಿತನಿಗೆ ಮನೆಯಲ್ಲಿಯೇ ಚಿಕಿತ್ಸೆ ನೀಡುತ್ತಿರುವುದು ಎಷ್ಟರ ಮಟ್ಟಿಗೆ ಸರಿ? ಎನ್ನುವುದು ಸಾರ್ವಜನಿಕರ ಪ್ರಶ್ನೆ. ಕಂದಾಯ-ಆರೋಗ್ಯ ಇಲಾಖೆ ಮತ್ತು ಗ್ರಾಪಂನವರು ಸೇರಿ ಸೋಂಕಿತರ ಮನೆ ಸುತ್ತಮುತ್ತಲಿನ ಪ್ರದೇಶವನ್ನು ಕಂಟೇನ್ಮೆಂಟ್‌ ಜೋನ್‌ ಎಂದು ಪರಿಗಣಿಸಿ ಸೀಲ್‌ಡೌನ್‌ ಮಾಡಿದ್ದಾರು.

ಈ ವೇಳೆ ಡಾ| ನೇತ್ರಾವತಿ.ಬಿ.ಕೆ, ಪಿಡಿಒ ರಾಮಣ್ಣ ದಾಸರ, ಆರೋಗ್ಯ ಇಲಾಖೆ ಸಿಬ್ಬಂದಿಗಳಾದ ಬಸವರಾಜ ಚೌಕಾವಿ, ವೆಂಕಟೇಶ ರೆಡ್ಡಿ ಇತರರು ಇದ್ದರು.

ಟಾಪ್ ನ್ಯೂಸ್

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್

11

IPL ‌Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?

Iyer

IPL ‌Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಪಾಲಿಗೆ

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

19-uv-fusion

Garbage Disposal: ಕಸದ ಸೂಕ್ತ ವಿಲೇವಾರಿ ನಮ್ಮದೇ ಜವಾಬ್ದಾರಿ

1-abaz-matr-11

Maharashtra; ಇನ್‌ಸ್ಟಾದಲ್ಲಿ 56 ಲಕ್ಷ ಫಾಲೋವರ್ಸ್‌ ಇದ್ರು ಸಿಕ್ಕಿದ್ದು ಕೇವಲ 155 ಮತ!!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

3-tavaragera

Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್

4-gangavathi

Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ

12-koppala

Koppala ಗವಿಮಠ ಜಾತ್ರೆಗೆ ನಟ ಅಮಿತಾಬ್‌ ಬಚ್ಚನ್‌?

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್

11

IPL ‌Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?

Iyer

IPL ‌Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಪಾಲಿಗೆ

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

20-uv-fusion

UV Fusion: ಜೀವಂತಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.