ಬುಡಕಟ್ಟು ಕಲಾವಿದರಿಗೆ ಆಸರೆ ದೊರೆಯಲಿ
Team Udayavani, Aug 7, 2020, 3:12 PM IST
ಕಲಬುರಗಿ: ತಲ-ತಲಾಂತರಗಳಿಂದ ತಮ್ಮದೇ ಆದ ವೇಷ-ಭೂಷಣ, ಕಲೆ, ಸಂಸ್ಕೃತಿ, ಪರಂಪರೆ, ವೃತ್ತಿಯನ್ನು ಉಳಿಸಿ, ಬೆಳೆಸಿಕೊಂಡು ಬಂದಿರುವ ಬುಡಕಟ್ಟು ಕಲಾವಿದರು ಪ್ರಸ್ತುತವಾಗಿ ತುಂಬಾ ಕಷ್ಟದ ಸ್ಥಿತಿಯಲ್ಲಿರುವುದರಿಂದ ಆಸರೆ ದೊರಕುವುದು ಅವಶ್ಯಕವಾಗಿದೆ ಎಂದು ಕನ್ನಡ ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ಎಂ.ಬಿ. ನಿಂಗಪ್ಪ ಹೇಳಿದರು.
ಬುಡಕಟ್ಟು ದಿನಾಚರಣೆ ಪ್ರಯುಕ್ತ ಕಜಾಪ ಜಿಲ್ಲಾ ಘಟಕದ ವತಿಯಿಂದ ನಗರದ ಸುಪರ್ ಮಾರ್ಕೆಟ್ ಪ್ರದೇಶದಲ್ಲಿ ವಾಸಿಸುತ್ತಿರುವ ಬುಡಕಟ್ಟು ಅಲೆಮಾರಿ ಜನಾಂಗದ ಕಲಾವಿದರಿಗೆ ಹಮ್ಮಿಕೊಂಡಿದ್ದ ಸತ್ಕಾರ ಕಾರ್ಯಕ್ರಮದಲ್ಲಿ ಕಲಾವಿದರಿಗೆ ಗೌರವಿಸಿ ಮಾತನಾಡಿದ ಅವರು, ಕೋವಿಡ್ ದಿಂದ ಬುಡಕಟ್ಟು ಕಲಾವಿದರ ಬದುಕು ಅತ್ಯಂತ ದುಸ್ತರವಾಗಿದೆ. ಅವರ ನೆರವಿಗೆ ಧಾವಿಸುವುದು ಅಗತ್ಯವಾಗಿದೆಯೆಂದು ನುಡಿದರು.
ಕಜಾಪ ಜಿಲ್ಲಾ ಕಾರ್ಯದರ್ಶಿ ಎಚ್.ಬಿ. ಪಾಟೀಲ ಮಾತನಾಡಿದರು. ಬುಡಕಟ್ಟು ಕಲಾವಿದರಾದ ಚುಡಾಮಣಿ ಬೈಲ್‌ಪತ್ತರ್, ನರಸಮ್ಮ ಬೈಲ್‌ಪತ್ತರ್ ಅವರಿಗೆ ಸನ್ಮಾನಿಸಿ, ಗೌರವಿಸಲಾಯಿತು. ಇದೇ ಸಂದರ್ಭದಲ್ಲಿ ಪ್ರಮುಖರಾದ ಬಸಯ್ಯಸ್ವಾಮಿ ಹೊದಲೂರ, ಬಸರಾಜ ಎಸ್.ಪುರಾಣೆ, ದೇವೇಂದ್ರಪ್ಪ ಗಣಮುಖೀ, ಅಮರ ಜಿ.ಬಂಗರಗಿ, ಬುಡಕಟ್ಟು ಜನಾಂಗದ ಅಮಣ್ಣ, ಶಾಂತಮ್ಮ ಸೇರಿದಂತೆ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ವಿದ್ಯುತ್ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ
Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.