ಬಾಗಲಕೋಟೆ: ಕೋವಿಡ್‌ಗೆ ಮತ್ತೆ ಮೂವರು ಬಲಿ ; ಜಿಲ್ಲೆಯಲ್ಲಿ ಒಟ್ಟು 62 ಜನ ಸಾವು
Team Udayavani, Aug 8, 2020, 3:00 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬಾಗಲಕೋಟೆ: ಜಿಲ್ಲೆಯಲ್ಲಿ ಕೋವಿಡ್ 19 ಮರಣ ಮೃದಂಗ ಮುಂದುರೆದಿದೆ.
ಶುಕ್ರವಾರ ಒಂದೇ ದಿನ ಮೂವರು ಈ ಸೋಂಕಿನಿಂದ ಸಾವನ್ನಪ್ಪಿದ್ದಾರೆ.
ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್ 19 ಸಂಬಂಧಿತ ಸಾವಿನ ಸಂಖ್ಯೆ 59ಕ್ಕೆ ಏರಿಕೆಯಾಗಿದೆ.
ಬೇರೆ ಜಿಲ್ಲೆಯಲ್ಲಿ ಸಾವನ್ನಪ್ಪಿದ ಮೂವರು ಸಹಿತ ಒಟ್ಟು 62 ಜನರು ಕೋವಿಡ್ 19 ಸೋಂಕಿನಿಂದ ಮೃತಪಟ್ಟಿದ್ದಾರೆ.
ತೇರದಾಳದ 63 ವರ್ಷದ ಪುರುಷ ಕಳೆದ ಆ. 2ರಂದು ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ತೀವ್ರ ಉಸಿರಾಟದ ತೊಂದರೆಯಿಂದ ಶುಕ್ರವಾರ ಮೃತಪಟ್ಟಿದ್ದಾರೆ. ಬಾಗಲಕೋಟೆ ನಗರದ 58 ವರ್ಷದ ಪುರುಷ ಕಳೆದ ಆ.1ರಂದು ಖಾಸಗಿ ಕೋವಿಡ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಮಧುಮೇಹ, ರಕ್ತ ಹೀನತೆಯಿಂದ ಬಳಲುತ್ತಿದ್ದರು. ಚಿಕಿತ್ಸೆಗೆ ಸ್ಪಂದಿಸದೇ ಅವರೂ ಶುಕ್ರವಾರ ಸಾವನ್ನಪ್ಪಿದ್ದಾರೆ.
ಅಲ್ಲದೇ ಬಾದಾಮಿಯ 65 ವರ್ಷದ ಪುರುಷ ಕಳೆದ ಆ.2ರಂದು ಖಾಸಗಿ ಕೋವಿಡ್ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದರು. ಇವರಿಗೆ ಕೋವಿಡ್ ಜತೆಗೆ ನ್ಯೂಮೋನಿಯಾ ಮತ್ತು ತೀವ್ರ ಉಸಿರಾಟದ ಸಮಸ್ಯೆ ಇತ್ತು. ಇವರು ಶುಕ್ರವಾರ ಮೃತಪಟ್ಟಿದ್ದಾರೆ.
ಕೋವಿಡ್‌ನಿಂದ ಜಿಲ್ಲೆಯಲ್ಲಿ ಈ ವರೆಗೆ 59 ಜನ ಮೃತಪಟ್ಟಿದ್ದು, ಬೆಂಗಳೂರು, ವಿಜಯಪುರ ಹಾಗೂ ಗದಗನಲ್ಲಿ ತಲಾ ಒಬ್ಬರು ಸೇರಿ ಒಟ್ಟು 62 ಜನರು ಬಲಿಯಾಗಿದ್ದಾರೆ.
ಒಂದೇ ದಿನ 148 ಜನರಿಗೆ ಸೋಂಕು:
ಜಿಲ್ಲೆಯ ಸಕ್ಕರೆ ಕಾರ್ಖಾನೆಯೊಂದರ ನಾಲ್ವರು ಸಿಬ್ಬಂದಿ ಸಹಿತ ಶುಕ್ರವಾರ ಮತ್ತೆ 148 ಜನರಿಗೆ ಕೋವಿಡ್ 19 ಸೋಂಕು ದೃಢಪಟ್ಟಿದೆ. ಬಾಗಲಕೋಟೆ ತಾಲೂಕಿನಲ್ಲಿ 26, ಬಾದಾಮಿ 44, ಬೀಳಗಿ 4, ಹುನಗುಂದ 32, ಮುಧೋಳ 26, ಜಮಖಂಡಿ 16 ಹಾಗೂ ಬೇರೆ ಜಿಲ್ಲೆಯ ಒಬ್ಬರು ಸಹಿತ ಒಟ್ಟು 148 ಜನರಿಗೆ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ| ಕೆ. ರಾಜೇಂದ್ರ ತಿಳಿಸಿದ್ದಾರೆ.
ಶುಕ್ರವಾರ ಮತ್ತೆ 84 ಜನರು ಕೋವಿಡ್ 19 ಸೋಂಕು ಮುಕ್ತರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸೋಂಕಿತರ ಸಂಖ್ಯೆ ಒಟ್ಟು 2762ಕ್ಕೇ ಏರಿಕೆಯಾಗಿದ್ದು, 1238 ಜನರು ಕೋವಿಡ್ 19 ಸೋಂಕಿನಿಂದ ಗುಣಮುಖರಾಗಿದ್ದಾರೆ.
ಜಿಲ್ಲೆಯಿಂದ ಕಳುಹಿಸಿದ 157 ಜನರ ಗಂಟಲು ದ್ರವ ಮಾದರಿ ವರದಿ ಇನ್ನೂ ಬರಬೇಕಿದೆ. ಸಧ್ಯ ಜಿಲ್ಲೆಯಲ್ಲಿ 666 ಜನರು ಪ್ರತ್ಯೇಕವಾಗಿ ನಿಗಾದಲ್ಲಿದ್ದಾರೆ. ಈವರೆಗೆ 33,298 ಜನರ ಸ್ಯಾಂಪಲ್ ಪರೀಕ್ಷೆಗೆ ಕಳುಹಿಸಿದ್ದು, ಅದರಲ್ಲಿ 30,101 ಜನರ ವರದಿ ನೆಗೆಟಿವ್ ಬಂದಿದೆ. 2762 ಜನರಿಗೆ ಪಾಜಿಟಿವ್ ಬಂದಿದ್ದು, 1238 ಜನರು ಗುಣಮುಖರಾಗಿದ್ದಾರೆ. ಸಧ್ಯ 1389 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kulageri Cross: ಹೂಳು ತುಂಬಿದ ಕಾಲುವೆ…ಪೋಲಾಗುತ್ತಿದೆ ಮಲಪ್ರಭಾ ಎಡದಂಡೆ ಕಾಲುವೆ ನೀರು…
New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!
Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ
Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.