ವಜಾಗೊಂಡ ಶಿಕ್ಷಕರಿಗೆ ಜವಾನ ಹುದ್ದೆ: ಸಮ್ಮತಿ ಕೊಟ್ಟ ಸುಪ್ರೀಂ
Team Udayavani, Aug 8, 2020, 7:45 AM IST
ಹೊಸದಿಲ್ಲಿ: ತ್ರಿಪುರಾದಲ್ಲಿ ವಜಾಗೊಂಡಿರುವ ಶಿಕ್ಷಕರನ್ನು ಜವಾನ, ಗಾರ್ಡ್, ಅಡುಗೆ ಕೆಲಸಗಾರ, ಸಹಾಯಕ, ಗುಮಾಸ್ತ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳುವ ಪ್ರಸ್ತಾವನೆಗೆ ಸುಪ್ರೀಂ ಕೋರ್ಟ್ ಸಮ್ಮತಿ ಸೂಚಿಸಿದೆ.
ತ್ರಿಪುರಾ 2010 ಹಾಗೂ 2014ರಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದಿರುವ 10 ಸಾವಿರಕ್ಕೂ ಅಧಿಕ ಅಭ್ಯರ್ಥಿಗಳನ್ನು ಶಿಕ್ಷಕ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗಿತ್ತು. ನೇಮಕಾತಿ ಪ್ರಕ್ರಿಯೆಯಲ್ಲಿ ಲೋಪ ಕಂಡು ಬಂದ ಹಿನ್ನೆಲೆಯಲ್ಲಿ 2014ರಲ್ಲಿ ಈ ಶಿಕ್ಷಕರನ್ನು ಹೈಕೋರ್ಟ್ ವಜಾಗೊಳಿಸಿತ್ತು. ಅಲ್ಲದೆ, 2017ರಲ್ಲಿ ಸುಪ್ರೀಂ ಕೋರ್ಟ್ ಕೂಡ ಹೈಕೋರ್ಟ್ ಆದೇಶವನ್ನು ಎತ್ತಿಹಿಡಿದಿತ್ತು. ವಜಾಗೊಂಡಿರುವ ಶಿಕ್ಷಕರನ್ನು ಮತ್ತೆ ಶಿಕ್ಷಕ ಹುದ್ದೆಗಳಿಗೆ ಮರು ನೇಮಕ ಮಾಡಿಕೊಳ್ಳಲು ನ್ಯಾಯಾಲಯ ನಿರಾಕರಿಸಿತ್ತು. ಈ ಹಿನ್ನೆಲೆಯಲ್ಲಿ ವಜಾಗೊಂಡ ಶಿಕ್ಷಕರಿಗೆ ಪರ್ಯಾಯ ಉದ್ಯೋಗ ಕಲ್ಪಿಸಲು ಶಿಕ್ಷಕೇತರ ಜವಾನ, ಶಾಲೆ ಸಹಾಯಕ, ಗುಮಾಸ್ತ, ಕಾವಲುಗಾರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ಅನುಮತಿ ನೀಡುವಂತೆ ತ್ರಿಪುರಾ ಸರಕಾರವು, ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipur ಉದ್ವಿಗ್ನ: ಇಬ್ಬರು ಸಚಿವರು,ಐವರು ಶಾಸಕರ ಮನೆಗಳಿಗೆ ಬೆಂಕಿ!
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
MUST WATCH
ಹೊಸ ಸೇರ್ಪಡೆ
ಗಂಭೀರ್ ಅವರ ಯಾತನೆಯ ತರಬೇತಿ ಶೈಲಿ ಭಾರತಕ್ಕೆ ಹೊಂದಲ್ಲ: ಟಿಮ್ ಪೇನ್
Udupi: ಕಸ್ತೂರಿ ರಂಗನ್ ವರದಿ ಬಗ್ಗೆ ಯಾರೂ ಆತಂಕಪಡಬೇಕಿಲ್ಲ: ಕೋಟ ಶ್ರೀನಿವಾಸ ಪೂಜಾರಿ
Congress ಗ್ಯಾರಂಟಿ ಸುಳ್ಳು ಎಂದು ಸಾಬೀತು ಮಾಡಿ: ಮೋದಿಗೆ ಸಿದ್ದರಾಮಯ್ಯ ಸವಾಲು
BJP; ಈ ವಾರವೇ ವಕ್ಫ್ ಹೋರಾಟ: ಅಧಿವೇಶನಕ್ಕೂ ಬಿಸಿ…ಹೇಗಿರಲಿದೆ ಪ್ರತಿಭಟನೆ?
America; ಭಾರತಕ್ಕೆ 84.40 ಕೋ.ರೂ. ಮೌಲ್ಯದ 1,400 ಕಲಾಕೃತಿ ವಾಪಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.