ಸರಕಾರದೊಂದಿಗೆ ವ್ಯಕ್ತಿ ಹೆಸರು ಆಕ್ಷೇಪಿಸಿ ಹೈಕೋರ್ಟ್ಗೆ ಪಿಐಎಲ್ ಸಲ್ಲಿಕೆ
Team Udayavani, Aug 9, 2020, 10:20 AM IST
ಬೆಂಗಳೂರು: ಸಾಂವಿಧಾನಿಕ ರೀತಿಯಲ್ಲಿ ಜನರಿಂದ ಆಯ್ಕೆಯಾದ ಸರಕಾರಗಳನ್ನು ಪ್ರಧಾನಮಂತ್ರಿ ಹಾಗೂ ಮುಖ್ಯಮಂತ್ರಿ ಸ್ಥಾನದಲ್ಲಿರುವ ವ್ಯಕ್ತಿಗಳ ಹೆಸರಿನಿಂದ ಕರೆಯುವುದನ್ನು ಆಕ್ಷೇಪಿಸಿ ಹೈಕೋರ್ಟ್ಗೆ ಅರ್ಜಿ ಸಲ್ಲಿಕೆಯಾಗಿದೆ.
ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಚೇಳೂರು ಗ್ರಾಮದ ಎ. ಮಲ್ಲಿಕಾರ್ಜುನ ಅವರು ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯ, ಮಾಹಿತಿ ಮತ್ತು ಪ್ರಸಾರ ಸಚಿವಾಲಯ, ಪ್ರಸ್ ಇನ್ಫಾರ್ಮೇಶನ್ ಬ್ಯೂರೋ, ಪ್ರಸ್ ಕೌನ್ಸಿಲ್ ಆಫ್ ಇಂಡಿಯಾ, ರಾಜ್ಯ ಸರಕಾರದ ಕಾನೂನು ಇಲಾಖೆ, ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯನ್ನು ಪ್ರತಿವಾದಿಯನ್ನಾಗಿ ಮಾಡಲಾಗಿದೆ. ಅರ್ಜಿಯು ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.
ಸಾಂವಿಧಾನಿಕ ರೀತಿಯಲ್ಲಿ ಆಯ್ಕೆಯಾದ ಸರಕಾರಗಳನ್ನು ಪ್ರಧಾನಮಂತ್ರಿ ಅಥವಾ ಮುಖ್ಯಮಂತ್ರಿ ಸ್ಥಾನದಲ್ಲಿರುವ ವ್ಯಕ್ತಿಗಳ ಹೆಸರಿನಿಂದ ಕರೆಯುವುದು ಇಲ್ಲವೇ ಪ್ರಕಟಿಸುವುದು ಸಂವಿಧಾನದ ಮೂಲ ತತ್ವಗಳು ಮತ್ತು ಆಶಯಗಳಿಗೆ ವಿರುದ್ಧವಾಗಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
VAO ಹುದ್ದೆ: ಅಂತಿಮ ಕೀ ಉತ್ತರ ಪ್ರಕಟ
ವಾಲ್ಮೀಕಿ ನಿಗಮ ಅಕ್ರಮ ತನಿಖಾ ವರದಿ ಸಲ್ಲಿಸಲು ಸಿಬಿಐಗೆ ಹೈಕೋರ್ಟ್ ಸೂಚನೆ
Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.