ಸೋಂಕಿತರಿಗೆ ಆತ್ಮಸ್ಥೈರ್ಯ ತುಂಬಲು ಸಲಹೆ
Team Udayavani, Aug 9, 2020, 3:08 PM IST
ಲಿಂಗಸುಗೂರು: ಕೋವಿಡ್ ಸೋಂಕಿತರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಬೇಕಾಗಿದೆ ಎಂದು ಪುರಸಭೆ ಸಮುದಾಯದ ಅಧಿಕಾರಿ ರಾಜಶೇಖರ ಪಾಟೀಲ್ ಹೇಳಿದರು.
ಸ್ಥಳೀಯ ಪುರಸಭೆ ವ್ಯಾಪ್ತಿಯ ಕರಡಕಲ್ ಗ್ರಾಮದಲ್ಲಿ ಏರ್ಪಡಿಸಿದ್ದ ಕೋವಿಡ್-19 ವಾರ್ಡ್‌ಮಟ್ಟದ ಟಾಸ್ಕ್ ಫೋರ್ಸ್ ಹಾಗೂ ಬೂತ್‌ಮಟ್ಟದ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಆದರೆ ನಮ್ಮಲ್ಲಿ ಸಾವಿನ ಪ್ರಕರಣಗಳು ಕಡಿಮೆ ಇವೆ. ಪಾಸಿಟಿವ್ ಬಂದವರನ್ನು ಕೀಳರಿಮೆಯಿಂದ ಕಾಣುತ್ತಿದ್ದರಿಂದ ಅವರಲ್ಲಿ ಆತ್ಮಸ್ಥೈರ್ಯ ಕುಗ್ಗುವಂತಾಗಿದೆ. ಈ ಹಿನ್ನೆಲೆಯಲ್ಲಿ ಸೋಂಕಿತರಿಗೆ ಆತ್ಮಸ್ಥೈರ್ಯ ನೀಡುವ ಕೆಲಸ ಮಾಡಬೇಕಾಗಿದೆ. ಕೋವಿಡ್ ನಿಯಂತ್ರಣಕ್ಕಾಗಿ 23 ವಾರ್ಡ್‌ಗಳಲ್ಲಿ ಟಾಸ್ಕ್ಫೋರ್ಸ್ ಸಮಿತಿ ರಚಿಸಲಾಗಿದೆ. ಸಮಿತಿ ಸದಸ್ಯರಿಗೆ ಈಗಾಗಲೇ ತರಬೇತಿ ನೀಡಲಾಗಿದೆ. ಕೋವಿಡ್ ಬಗ್ಗೆ ವಾರ್ಡ್ ಜನತೆಗೆ ಸಾಕಷ್ಟು ಅರಿವು ಮೂಡಿಸಲಾಗುತ್ತಿದೆ ಎಂದರು.
ಪುರಸಭೆ ಸದಸ್ಯರಾದ ರುದ್ರಪ್ಪ ಬ್ಯಾಗಿ, ಸೋಮುನಗೌಡ, ಮುಖಂಡರಾದ ಶರಣಗೌಡ ಪಾಟೀಲ್, ಶರಣಪ್ಪ ಹಾಗೂ ಇನ್ನಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ
Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!
Bengaluru: ಕಾರಿನೊಳಗೆ ಬೆಂಕಿ ಹಚ್ಚಿಕೊಂಡು ಉದ್ಯಮಿ ಆತ್ಮಹತ್ಯೆ
AI ಆರೋಗ್ಯ ರಕ್ಷಣೆಯ ವ್ಯವಸ್ಥೆಯಲ್ಲಿ ಸ್ವೀಕಾರದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆಯೇ?
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.