ಸರ್ಕಾರದ ರೈತ ವಿರೋಧಿ ನೀತಿಗೆ ಆಕ್ರೋಶ
Team Udayavani, Aug 9, 2020, 3:59 PM IST
ಮಾಯಕೊಂಡ: ಸರ್ಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ರೈತ ಸಂಘ ಹಾಗೂ ಹಸಿರುಸೇನೆ ವತಿಯಿಂದ ಶನಿವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.
ರೈತ ಸಂಘದ ರಾಜ್ಯ ಕಾರ್ಯದರ್ಶಿ ಬಲ್ಲೂರು ರವಿಕುಮಾರ್ ಮಾತನಾಡಿ, ಎಪಿಎಂಸಿ ಕಾಯ್ದೆ, ಭೂಸುಧಾರಣಾ ಕಾಯ್ದೆ, ವಿದ್ಯುತ್ ಖಾಸಗೀಕರಣ ಬೀಜ ಕಾಯ್ದೆಗಳನ್ನು ತಿದ್ದುಪಡಿ ಮಾಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮುಂದಾಗಿವೆ. ಕೋವಿಡ್ ನೆಪವೊಡ್ಡಿ ದೇಶದಲ್ಲಿ 144ನೇ ಸೆಕ್ಷನ್ ಜಾರಿ ಮಾಡಲು ಹುನ್ನಾರ ನಡೆಸಿವೆ ಎಂದು ಆರೋಪಿಸಿದರು. ಅಗತ್ಯ ವಸ್ತುಗಳ ಕಾಯ್ದೆಯಡಿ ಖರೀದಿ ದಾಸ್ತಾನು ಮಾರಾಟ ದರಗಳ ಮೇಲಿನ ಸರ್ಕಾರದ ನಿಯಂತ್ರಣವನ್ನು ತೆಗೆದು ಹಾಕುವುದರಿಂದ ಡಿಮಾರ್ಟ್, ರಿಲಯನ್ಸ್, ಮೋರ್, ಬಿಗ್ ಬಾಸ್ಕೆಟ್ ಮುಂತಾದ ದೈತ್ಯ ಕಂಪನಿಗಳ ಹಿಡಿತಕ್ಕೆ ಅನೂಕೂಲ ಮಾಡಿಕೊಟ್ಟಂತಾಗುತ್ತದೆ. ಆದ್ದರಿಂದ ತಿದ್ದುಪಡಿಯನ್ನು ರದ್ದು ಮಾಡಬೇಕು ಹಾಗೂ ಕೃಷಿ ಸೇವೆಗಳ ರೈತರ ಒಪ್ಪಂದದ ಸುಗ್ರೀವಾಜ್ಞೆ ರದ್ದು ಮಾಡಿ ಸ್ವಾಮಿನಾಥನ್ ವರದಿ ಜಾರಿಗೊಳಿಸಬೇಕು ಎಂಬಿತ್ಯಾದಿ ಬೇಡಿಕೆ ಈಡೇರಿಸಬೇಕೆಂದು ಒತ್ತಾಯಿಸಿದರು.
ಮಾಯಕೊಂಡ ಠಾಣೆ ಪಿಎಸ್‌ಐ ಮೂಲಕ ಸರ್ಕಾರಕ್ಕೆ
ಮನವಿ ಸಲ್ಲಿಸಲಾಯಿತು. ರೈತ ಮುಖಂಡರಾದ ಚಿಕ್ಕನಹಳ್ಳಿ ರೇವಣ್ಣ, ಪ್ರಸಾದ್, ಪಾಮೇನಹಳ್ಳಿ ಲಿಂಗರಾಜು, ಅಣಬೇರು ಕುಮಾರಸ್ವಾಮಿ, ಆನಗೋಡು ಭೀಮಣ್ಣ, ಸಿ.ಟಿ. ನಿಂಗಪ್ಪ, ಪ್ರತಾಪ, ಗೌಡ್ರ ಅಶೋಕ, ರೇವಣ್ಣ, ಮುಂಡರಗಿ ರಾಮಣ್ಣ, ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪೂಜಾರ್ ಮೋಹನ್, ಮಾಜಿ ಅಧ್ಯಕ್ಷ ಪ್ರಕಾಶ್, ಮುಖಂಡರಾದ ಒಳಗಡ್ಡಿ ಲಕ್ಷ್ಮಣ್ಣ, ಪುಟ್ಟರಂಗಸ್ವಾಮಿ, ಗಂಗಾಧರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
Talk Fight: ಬಿ.ಎಸ್.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
Waqf Property: ಸಚಿವ ಜಮೀರ್ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ
ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ
Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ
MUST WATCH
ಹೊಸ ಸೇರ್ಪಡೆ
Ullala: ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!
BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?
Mike Tyson: ವಿದಾಯದ ಸುಳಿವು ನೀಡಿದ ಬಾಕ್ಸಿಂಗ್ ದಿಗ್ಗಜ ಮೈಕ್ ಟೈಸನ್
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Team India: ವಿರಾಟ್ ಕೊಹ್ಲಿ ದಾಖಲೆ ಮುರಿದ ತಿಲಕ್ ವರ್ಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.