ಸುಶಾಂತ್ ಕೇಸ್: ಗೆಳತಿ ರಿಯಾ ಚಕ್ರವರ್ತಿಯನ್ನು ವಶಕ್ಕೆ ತೆಗೆದುಕೊಳ್ಳಿ; ಬಿಜೆಪಿ ನಾಯಕ
ಆತನಿಗೆ ಮಾನಸಿಕ ಕಿರುಕುಳ ನೀಡಲಾಗಿದೆ. ಇದರಿಂದಾಗಿ ಆತ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ದೂರಿನಲ್ಲಿ ಆರೋಪಿಸಿದ್ದರು.
Team Udayavani, Aug 10, 2020, 10:26 PM IST
ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಗೆಳತಿ ರಿಯಾ ಸಿಂಗ್ ಅವಳನ್ನು ವಶಕ್ಕೆ ಹಾಗೂ ಇತರರನ್ನು ರಕ್ಷಣಾತ್ಮಕ ಕಸ್ಟಡಿಗೆ ತೆಗೆದುಕೊಳ್ಳಬೇಕು ಎಂದು ಮುಂಬೈ ಬಿಜೆಪಿ ಮುಖಂಡ ಸಂಜಯ್ ಪಾಂಡೆ ಸೋಮವಾರ (ಆಗಸ್ಟ್ 10-2020) ಮುಂಬೈ ಪೊಲೀಸ್ ಕಮೀಷನರ್ ಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಉಲ್ಲೇಖಿಸಿದಂತೆ, ನಟ ಸುಶಾಂತ್ ಸಿಂಗ್ ಸಾವಿನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಪ್ರಕರಣದ ನಿಗೂಢತೆ ರಾಜಕಾರಣಿಗಳು, ಬಾಲಿವುಡ್ ಮತ್ತು ಭೂಗತಜಗತ್ತಿನ ಜತೆಗೆ ದೊಡ್ಡ ಮಟ್ಟದಲ್ಲಿಯೇ ತಳುಕು ಹಾಕಿಕೊಂಡಿದೆ. ಈ ಹಿನ್ನೆಲೆಯಲ್ಲಿ ನಾನು ಮುಂಬೈ ಪೊಲೀಸ್ ಕಮಿಷನರ್ ಪರಂ ಬೀರ್ ಸಿಂಗ್ ಅವರಲ್ಲಿ ವಿನಂತಿಸಿಕೊಳ್ಳುವುದು ಏನೆಂದರೆ ರಿಯಾ ಚಕ್ರವರ್ತಿ ಮತ್ತು ಇತರರನ್ನು ರಕ್ಷಣಾತ್ಮಕ ಕಸ್ಟಡಿಗೆ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಸುಶಾಂತ್ ಸಿಂಗ್ ಪ್ರಕರಣದಲ್ಲಿ ತಂದೆ ಕೆಕೆ ಸಿಂಗ್ ಅವರು ರಿಯಾ ಚಕ್ರವರ್ತಿ, ಇಂದ್ರಜಿತ್ ಚಕ್ರವರ್ತಿ, ಸಂಧ್ಯಾ ಚಕ್ರವರ್ತಿ, ಶೋವಿಕ್ ಚಕ್ರವರ್ತಿ, ಸ್ಯಾಮ್ಯುಯೆಲ್ ಮಿರಾಂಡಾ, ಶ್ರುತಿ ಮೋದಿ ಮತ್ತು ಇತರರ ವಿರುದ್ಧ ಪಾಟ್ನ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಿಸಿದ್ದರು.
ತನ್ನ ಮಗನ ಖಾತೆಯಿಂದ ಕೋಟ್ಯಂತರ ರೂಪಾಯಿ ಹಣವನ್ನು ವರ್ಗಾಯಿಸಿದ್ದಲ್ಲದೇ, ಆತನಿಗೆ ಮಾನಸಿಕ ಕಿರುಕುಳ ನೀಡಲಾಗಿದೆ. ಇದರಿಂದಾಗಿ ಆತ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ದೂರಿನಲ್ಲಿ ಆರೋಪಿಸಿದ್ದರು.
ಪ್ರಕರಣದ ತನಿಖೆ ವಿಚಾರದಲ್ಲಿ ಮುಂಬೈ ಮತ್ತು ಬಿಹಾರ ಪೊಲೀಸರ ನಡುವೆ ಜಟಾಪಟಿಗೆ ಕಾರಣವಾಗಿತ್ತು. ಅಷ್ಟೇ ಅಲ್ಲ ರಿಯಾ ಚಕ್ರವರ್ತಿ ಕೂಡಾ ಬಿಹಾರದ ಪ್ರಕರಣವನ್ನು ಮುಂಬೈ ಪೊಲೀಸರಿಗೆ ವರ್ಗಾಯಿಸಬೇಕೆಂದು ಕೋರಿ ಕೋರ್ಟ್ ಮೆಟ್ಟಿಲೇರಿದ್ದರು.
ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣದ ವಿಚಾರಣೆಯನ್ನು ಬಿಹಾರದಿಂದ ಮುಂಬೈಗೆ ವರ್ಗಾಯಿಸಬೇಕೆಂದು ಸುಶಾಂತ್ ತಂದೆ ಕೆಕೆ ಸಿಂಗ್ ದಾಖಲಿಸಿರುವ ದೂರಿನ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮಂಗಳವಾರ (ಆಗಸ್ಟ್ 11-2020)ದಂದು ನಡೆಸಲಿದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Hebri: ಎನ್‌ಕೌಂಟರ್ ತನಿಖೆ ನಡೆಸುವ ಹೆಬ್ರಿ ಪೊಲೀಸ್ ಠಾಣೆ ಇಲ್ಲಗಳ ಆಗರ!
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
MUST WATCH
ಹೊಸ ಸೇರ್ಪಡೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Hebri: ಎನ್‌ಕೌಂಟರ್ ತನಿಖೆ ನಡೆಸುವ ಹೆಬ್ರಿ ಪೊಲೀಸ್ ಠಾಣೆ ಇಲ್ಲಗಳ ಆಗರ!
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.