ನೆರೆ ಪರಿಹಾರ ದೂರದೃಷ್ಟಿ ಬೇಕಿದೆ

Team Udayavani, Aug 11, 2020, 6:30 AM IST

ನೆರೆ ಪರಿಹಾರ ದೂರದೃಷ್ಟಿ ಬೇಕಿದೆ

ಸಾಂದರ್ಭಿಕ ಚಿತ್ರ

ಸತತ ಮೂರನೇ ವರ್ಷ ರಾಜ್ಯ ನೆರೆಗೆ ತುತ್ತಾಗಿದೆ. ಆದರೆ ಈ ಬಾರಿ ಕೋವಿಡ್ ವೈರಸ್‌ ಹಾವಳಿ ಹಾಗೂ ಅದು ತಂದೊಡ್ಡಿದ ಆರ್ಥಿಕ ಸಂಕಷ್ಟದಂತಹ ಸವಾಲುಗಳ ಜತೆಗೆ ಮುಖ್ಯಮಂತ್ರಿಯಾದಿಯಾಗಿ ಹಲವು ಸಚಿವರ ಅನುಪಸ್ಥಿತಿಯಲ್ಲಿ ಇದನ್ನು ಎದುರಿಸಬೇಕಾಗಿದೆ. ಕೇವಲ ವಾರದ ಅಂತರದಲ್ಲಿ ಸುಮಾರು 32 ಸಾವಿರ ಹೆಕ್ಟೇರ್‌ ಕೃಷಿ ನಾಶವಾಗಿದ್ದು ನಾಲ್ಕು ಸಾವಿರ ಕೋಟಿ ರೂ. ಗೂ ಅಧಿಕ ನಷ್ಟವಾಗಿದೆ.

ಸಮಸ್ಯೆಯ ತೀವ್ರತೆ ಅರಿತ ಸರಕಾರ, ಮುಂಗಡ ಅನುದಾನಕ್ಕೆ ಮೊರೆ ಇಟ್ಟಿದೆ. ತಕ್ಷಣದ ಪರಿಹಾರ ಮತ್ತು ಪುನರ್‌ವಸತಿ ಕಾರ್ಯಗಳಿಗೆ ರಾಜ್ಯ ವಿಪತ್ತು ನಿರ್ವಹಣಾ ಪಡೆ ಮೊದಲ ಕಂತು 395 ಕೋ. ರೂ. ತುರ್ತು ಬಿಡುಗಡೆ, ಹೆಚ್ಚುವರಿಯಾಗಿ ನಾಲ್ಕು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಗಳನ್ನು ಕಳುಹಿಸುವಂತೆಯೂ ಕೋರಿದೆ. ಈ ಮಧ್ಯೆ ದೀರ್ಘಾವಧಿಯ ಪರಿಹಾರವಾಗಿ ಕಾವೇರಿ ಮತ್ತು ಕೃಷ್ಣಾ ನದಿ ಪಾತ್ರಗಳಲ್ಲಿ, ಪಶ್ಚಿಮ ಘಟ್ಟಗಳು ವ್ಯಾಪಿಸಿರುವ ನೆರೆ ರಾಜ್ಯಗಳಲ್ಲಿ ಭೂಕುಸಿತ ಸಂಬಂಧ ಮ್ಯಾಪಿಂಗ್‌ ಮತ್ತು ಮುನ್ಸೂಚನಾ ವ್ಯವಸ್ಥೆ ಸ್ಥಾಪಿಸುವ ಸಂಬಂಧ ಕೇಂದ್ರ ಭೂವಿಜ್ಞಾನ ಸರ್ವೇಕ್ಷಣಾ ಇಲಾಖೆಯಿಂದ ಅಧ್ಯಯನ ಕೈಗೊಳ್ಳಲು ಮನವಿ ಮಾಡಲಾಗಿದೆ.

ಆದರೆ ಇದು ಶಾಶ್ವತ ಪರಿಹಾರಕ್ಕೆ ನಾಂದಿ ಹಾಡಬಲ್ಲದೇ? ಅನುಭವಗಳ ಹಿನ್ನೆಲೆಯಲ್ಲಿ ಹೇಳುವುದಾದರೆ, ಖಂಡಿತ ಇಲ್ಲ. ಪ್ರತಿ ಸಲ ನಿರ್ದಿಷ್ಟ ಪ್ರದೇಶಗಳಲ್ಲೇ ನೆರೆ ಉಕ್ಕಿ ಹರಿಯುತ್ತಿದೆ. ಈ ಸಂದರ್ಭದಲ್ಲಿ ನೆರವಿನ ಸಹಾಯಹಸ್ತಗಳು, ತಾತ್ಕಾಲಿಕ ಕಾಳಜಿ ಕೇಂದ್ರಗಳು, ಪರಿಹಾರಕ್ಕಾಗಿ ಮನವಿಯಿಂದ ಆಚೆಗೆ ನಾವು ಯೋಚಿಸಿದಂತೆ ಕಾಣುವುದಿಲ್ಲ. ಯಾಕೆಂದರೆ 2009ರಲ್ಲೂ ನೆರೆ ಹಾವಳಿ ಉಂಟಾಗಿತ್ತು. ಉತ್ತರ ಕರ್ನಾಟಕದ ನೂರಾರು ಹಳ್ಳಿಗಳನ್ನೇ ಸ್ಥಳಾಂತರಿಸಬೇಕಾಯಿತು.

ಕಳೆದ ಮೂರು ವರ್ಷಗಳಲ್ಲಿ ಅತಿ ಹೆಚ್ಚು ಪ್ರವಾಹಕ್ಕೆ ತುತ್ತಾದ ಕೊಡಗು ಜಿಲ್ಲೆ ಯನ್ನೇ ತೆಗೆದುಕೊಂಡರೆ, ಇತ್ತೀಚಿನ ವರ್ಷಗಳಲ್ಲಿ ಸಣ್ಣಹಿಡುವಳಿ ನೆಪದಲ್ಲಿ ಯಥೇತ್ಛವಾಗಿ ಭೂಮಿ ಪರಭಾರೆ ನಡೆದಿದೆ. ಅಲ್ಲಿ ವಿಲ್ಲಾ, ಹೋಂಸ್ಟೇಗಳು, ಲೇ ಔಟ್‌ ತಲೆಯೆತ್ತಿವೆ. ನದಿಪಾತ್ರದ ಆಸುಪಾಸು ಬಫ‌ರ್‌ಝೋನ್‌ಗಳನ್ನು ಉಲ್ಲಂಘಿಸಿ ಅಭಿವೃದ್ಧಿ ಚಟುವಟಿಕೆಗಳು ನಡೆದಿವೆ. ಇದಕ್ಕೆ ಬ್ರೇಕ್‌ ಹಾಕುವ ಪ್ರಯತ್ನಗಳು ನಡೆ ಯುತ್ತಿಲ್ಲ. ಆನೆಗಳಂತೆಯೇ ನದಿ, ಹಳ್ಳ- ಕೊಳ್ಳಗಳಿಗೂ ತನ್ನದೇ ಆದ “ಕಾರಿಡಾರ್‌’ ಗಳಿರುತ್ತವೆ. ತಾತ್ಕಾಲಿಕವಾಗಿ ಮನುಷ್ಯ ಅದನ್ನು “ಅಭಿವೃದ್ಧಿ’ಯಿಂದ ಪಳಗಿ ಸಿದಂತೆ ಕಂಡರೂ, ಕಾಲಾನುಕ್ರಮದಲ್ಲಿ ಅದು ಮತ್ತೆ ತನ್ನ ಮೂಲ ಪಾತ್ರದಂತೆಯೇ ಹರಿದುಬರುತ್ತದೆ. ಆಗ ಅದು ನಮಗೆ ಪ್ರವಾಹವಾಗಿ ಪರಿಣಮಿಸುತ್ತದೆ.

ಇದೆಲ್ಲದಕ್ಕಿಂತ ಹೆಚ್ಚಾಗಿ ನಿರಂತರ ಬರಕ್ಕೂ ತುತ್ತಾಗುವ ನಾವು ಈ ನೆರೆಯನ್ನು ಸಕಾರಾತ್ಮಕ ದೃಷ್ಟಿಕೋನದಿಂದ ನೋಡುವ ಅವಶ್ಯಕತೆ ಇದೆ. ಆ ಭಾಗದ ಕೆಲವು ಪ್ರದೇಶಗಳು ನಿರಂತರವಾಗಿ ಬರಕ್ಕೆ ತುತ್ತಾಗುತ್ತವೆ. ಬೆಳಗಾವಿಯಂತಹ ಹಲವು ಪ್ರದೇಶಗಳು ನೆರೆಗೆ ತುತ್ತಾಗುತ್ತವೆ. ಈಗ ಆ ನೀರು ವ್ಯರ್ಥವಾಗಿ ಹೋಗದಂತೆ ತಡೆ ಯುವ ಅವಶ್ಯಕತೆ ಇದೆ. ಅದನ್ನು ಅಂತರ್ಜಲ ಮರುಪೂರಣ ಆಗುವಂತೆ ಮಾಡ ಬೇಕು. ಇದಕ್ಕಾಗಿ ಅಲ್ಲಲ್ಲಿ ಹಸುರೀಕರಣ ಮಾಡಿ, ಹರಿವಿನ ವೇಗಕ್ಕೆ ತಡೆಯೊಡ್ಡಬೇಕು. ಚೆಕ್‌ ಡ್ಯಾಂ ನಿರ್ಮಿಸಬೇಕು. ಗಟ್ಟಿಕಲ್ಲಿನ ಭಾಗದಲ್ಲಿ ರಬ್ಬರ್‌ ಡ್ಯಾಂ ನಿರ್ಮಿಸಿ, ನೀರು ತಡೆಹಿಡಿಯಬೇಕು. ಕಾಲುವೆ ನಿರ್ಮಿಸಿ ಹೆಚ್ಚು ಬರಕ್ಕೆ ತುತ್ತಾಗಿರುವ ಪ್ರದೇಶಗಳತ್ತ ತಿರುಗಿಸಬೇಕು. ಇದೆಲ್ಲದಕ್ಕೂ ಸರಕಾರದ ದೂರದೃಷ್ಟಿಯ ಅಗತ್ಯವಿದೆ. ಇತ್ತೀಚಿನ ದಿನಗಳಲ್ಲಿ ದೇಶದಲ್ಲಿ ಮುಂಗಾರಿನ ಪ್ರವೇಶ ವಿಳಂಬವಾಗುತ್ತಿದೆ. ವಾಡಿಕೆ ಮಳೆ ಯಾದರೂ, ಹಂಚಿಕೆ ಸಮಾನವಾಗಿ ಆಗುತ್ತಿಲ್ಲ. ಸಾಮಾನ್ಯವಾಗಿ ಬಂಗಾಲ ಕೊಲ್ಲಿ ಯಲ್ಲಿ ಕಂಡುಬರುತ್ತಿದ್ದ ಬೆಳವಣಿಗೆಗಳು ಅರಬಿ ಸಮುದ್ರದಲ್ಲೂ ಕಂಡು ಬರುತ್ತಿವೆ. ನಗರದ ನೆರೆ ಉಂಟಾಗಬಹುದಾದ ಪ್ರದೇಶಗಳ ಬಗ್ಗೆ ಮುನ್ಸೂಚನೆ ನೀಡುವ ತಂತ್ರಜ್ಞಾನ ನಮ್ಮ ಬಳಿ ಇದೆ. ಇದನ್ನು ನಾವು ಕೊಡಗು, ಬೆಳಗಾವಿ ಸೇರಿದಂತೆ ಪ್ರತಿ ವರ್ಷ ತುತ್ತಾಗುವ ಪ್ರದೇಶಗಳಲ್ಲಿ ಬಳಕೆ ಮಾಡಿಕೊಳ್ಳುವ ಅವಶ್ಯಕತೆ ಇದೆ.

ಟಾಪ್ ನ್ಯೂಸ್

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

15-crime

Bailhongal: ಅನೈತಿಕ ಸಂಬಂಧದ ಹಿನ್ನೆಲೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ; ಆರೋಪಿ ಪರಾರಿ

CT Ravi ಭದ್ರತೆ ವ್ಯವಸ್ಥೆ,ನ್ಯಾಯಾಂಗ ತನಿಖೆಗೆ ರಾಜ್ಯಪಾಲರಿಗೆ ಬಿಜೆಪಿ ಮನವಿ: ಆರ್.ಅಶೋಕ್

CT Ravi Case ನ್ಯಾಯಾಂಗ ತನಿಖೆಗೆ ಒಪ್ಪಿಸಲು ಗೌರ್ನರ್‌ಗೆ ಬಿಜೆಪಿ ದೂರು

Khel Ratna Award: ನನ್ನಿಂದಲೇ ತಪ್ಪಾಗಿರಬಹುದು: ಮನು ಭಾಕರ್‌

Khel Ratna Award: ನನ್ನಿಂದಲೇ ತಪ್ಪಾಗಿರಬಹುದು: ಮನು ಭಾಕರ್‌

13-

Holehonnur: ಎರಡು ಪ್ರತ್ಯೇಕ ರಸ್ತೆ ಅಪಘಾತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya_SAHITYA

ಮಂಡ್ಯ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

1-s-v

ಜನಪ್ರತಿನಿಧಿಗಳು ಆತ್ಮವಿಮರ್ಶೆ ಮಾಡಿಕೊಳ್ಳಲು ಇದು ಸಕಾಲ

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

ಹೈನುಗಾರರ ಅಳಲಿಗೆ ಸರಕಾರ ತತ್‌ಕ್ಷಣ ಸ್ಪಂದಿಸಲಿ

Karnataka Govt.,: ಹೈನುಗಾರರ ಅಳಲಿಗೆ ಸರಕಾರ ತತ್‌ಕ್ಷಣ ಸ್ಪಂದಿಸಲಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

15-crime

Bailhongal: ಅನೈತಿಕ ಸಂಬಂಧದ ಹಿನ್ನೆಲೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ; ಆರೋಪಿ ಪರಾರಿ

CT Ravi ಭದ್ರತೆ ವ್ಯವಸ್ಥೆ,ನ್ಯಾಯಾಂಗ ತನಿಖೆಗೆ ರಾಜ್ಯಪಾಲರಿಗೆ ಬಿಜೆಪಿ ಮನವಿ: ಆರ್.ಅಶೋಕ್

CT Ravi Case ನ್ಯಾಯಾಂಗ ತನಿಖೆಗೆ ಒಪ್ಪಿಸಲು ಗೌರ್ನರ್‌ಗೆ ಬಿಜೆಪಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.