ಕೋವಿಡ್ ನಿರ್ವಹಣೆ ತೃಪ್ತಿದಾಯಕ ; ಮೋದಿ ನಾಯಕತ್ವಕ್ಕೆ ಶೇ. 74 ಗ್ರಾಮೀಣ ಜನತೆ ಮೆಚ್ಚುಗೆ
Team Udayavani, Aug 11, 2020, 6:30 AM IST
ಸಾಂದರ್ಭಿಕ ಚಿತ್ರ
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಕೇಂದ್ರ ಸರಕಾರ, ಕೋವಿಡ್ ಪರಿಸ್ಥಿತಿಯನ್ನು ಯಶಸ್ವಿಯಾಗಿ ನಿಭಾಯಿಸಿದೆ ಎಂದು ಗ್ರಾಮೀಣ ಪ್ರದೇಶದ ಶೇ. 74ರಷ್ಟು ಜನರು ಅಭಿಪ್ರಾಯಪಟ್ಟಿದ್ದಾರೆ ಎಂದು ಸಮೀಕ್ಷೆಯೊಂದು ಹೇಳಿದೆ.
ಇದೇ ವರ್ಷದ ಮೇ 30ರಿಂದ ಜು. 16ರವರೆಗೆ ದೇಶದ 23 ರಾಜ್ಯಗಳ 179 ಜಿಲ್ಲೆಗಳಲ್ಲಿನ ಹಳ್ಳಿಗಳ 25,371 ಜನರನ್ನು ಮುಖತಃ ಮಾತನಾಡಿಸಿ ಅಭಿಪ್ರಾಯ ದಾಖಲಿಸಲಾಗಿದೆ. ಗ್ರಾಮೀಣ ಭಾಗದ ಶೇ. 74ರಷ್ಟು ಜನರು ಮೋದಿಯವರ ಕ್ರಮಗಳನ್ನು ಮೆಚ್ಚಿದ್ದರೂ, ಶೇ. 14ರಷ್ಟು ಜನರು ಮೋದಿಯವರ ಕ್ರಮಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ಸಮೀಕ್ಷೆಯಲ್ಲಿ ಹೇಳಲಾಗಿದೆ.
ಶೇ. 40ರಷ್ಟು ಜನರು ಲಾಕ್‌ಡೌನ್ ಅವಧಿಯಲ್ಲಿ ಜೀವನ ನಿರ್ವಹಣೆ ತುಂಬಾ ಕಷ್ಟಕರವಾಗಿತ್ತು ಎಂದಿದ್ದರೆ, ಶೇ. 38ರಷ್ಟು ಜನರು, ತುಸು ಕಷ್ಟಕರವಾಗಿತ್ತು ಎಂದಿದ್ದಾರೆ. ಶೇ. 11ರಷ್ಟು ಜನರು ಲಾಕ್‌ಡೌನ್‌ನಿಂದ ಯಾವುದೇ ಕಷ್ಟವಾಗಿಲ್ಲ ಎಂದರೆ, ಶೇ. 4ರಷ್ಟು ಜನರು ಲಾಕ್‌ಡೌನ್ ಜಾರಿಗೊಳಿಸಲೇಬಾರದಿತ್ತು ಎಂದಿದ್ದಾರೆ.
ವಿಚಿತ್ರವೆಂದರೆ, ಕೋವಿಡ್ ಸಂದರ್ಭಗಳನ್ನು ಮೆಚ್ಚಿಕೊಂಡವರಲ್ಲಿ ಬಿಜೆಪಿ ವಿರುದ್ಧ ಪಕ್ಷಗಳು ಆಡಳಿತ ನಡೆಸುತ್ತಿರುವ ರಾಜ್ಯಗಳಲ್ಲಿನ ಜನರೇ ಆಗಿದ್ದಾರೆ. ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಕೇಂದ್ರ ಸರ್ಕಾರ ಜಾರಿಗೊಳಿಸಿದ ಕೊರೊನಾ ಸಂಬಂಧಿ ಕ್ರಮಗಳ ಬಗ್ಗೆ ಅಷ್ಟಾಗಿ ಮೆಚ್ಚುಗೆ ವ್ಯಕ್ತವಾಗಿಲ್ಲ ಎಂದು ಸಮೀಕ್ಷೆಯಲ್ಲಿ ಪಾಲುದಾರ ಸಂಸ್ಥೆಯಾದ ಗಾವೋ ಕನೆಕ್ಷನ್ ಸಂಸ್ಥೆ ತಿಳಿಸಿದೆ.
ಜಂಟಿ ಸಹಯೋಗದಲ್ಲಿ ನಡೆದಿದ್ದ ಸಮೀಕ್ಷೆ
ರಾಜ್ಯಗಳಲ್ಲಿನ ಹಳ್ಳಿಗರು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿನ ಗ್ರಾಮೀಣ ಜನರನ್ನು ಸಂಪರ್ಕಿಸಲು ಗಾಂವೋ ಕನೆಕ್ಷನ್ ಇನ್‌ಸೈಟ್ಸ್ ಎಂಬ ಸಿಎಸ್‌ಡಿಎಸ್‌ನ ಅಂಗಸಂಸ್ಥೆ ವ್ಯವಸ್ಥೆ ಮಾಡಿತ್ತು ಎಂದು ವರದಿಯಲ್ಲಿ ಉಲ್ಲೇಖೀಸಲಾಗಿದೆ. ನವದೆಹಲಿ ಮೂಲದ ಸೆಂಟರ್ ಫಾರ್ ಸ್ಟಡಿ ಆಫ್ ಡೆವಲಪಿಂಗ್ ಸೊಸೈಟೀಸ್ (ಸಿಎಸ್‌ಡಿಎಸ್) ಸಂಸ್ಥೆಯು ಈ ಸಮೀಕ್ಷೆ ನಡೆಸಿದೆ. “ಲೋಕನೀತಿ ಪ್ರೋಗ್ರಾಂ ಫಾರ್ ಕಂಪಾರೇಟಿವ್ ಡೆಮಾಕ್ರಸಿ’ ಎಂಬ ಸಂಶೋಧನೆಯನ್ನು ಸಿಎಸ್‌ಡಿಎಸ್ ಕೈಗೊಂಡಿದ್ದು, ಅದರ ಅಡಿಯಲ್ಲಿ ಈ ಸಮೀಕ್ಷೆ ನಡೆಸಲಾಗಿದೆ. ಆ ಹಿನ್ನೆಲೆಯಲ್ಲಿ, ಸಿಎಸ್‌ಡಿಎಸ್ ರಚಿಸಿದ್ದ ಲೋಕನೀತಿ-ಸಿಎಸ್‌ಡಿಎಸ್ ಹೆಸರಿನ ತಂಡವೊಂದು ಸಮೀಕ್ಷಾ ಪ್ರಶ್ನೆಗಳನ್ನು ರೂಪಿಸಿತ್ತು. ಸಮೀಕ್ಷೆಯ ವೇಳೆ ದಾಖಲಾದ ಉತ್ತರಗಳನ್ನು ಇದೇ ತಂಡವೇ ವಿಶ್ಲೇಷಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್‌ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.