ಸೋಂಕಿತರ ಬೀದಿ ಸೀಲ್ಡೌನ್
Team Udayavani, Aug 11, 2020, 9:05 AM IST
ಬರಗೂರು: ಶಿರಾ ತಾಲೂಕುಹುಲಿಕುಂಟೆ ಹೋಬಳಿಯ ದೊಡ್ಡ ಬಾಣಗೆರೆ ಗ್ರಾಪಂ ವ್ಯಾಪ್ತಿಯ ಕುರುಬರ ರಾಮಹಳ್ಳಿ ಹಾಗೂ ಬರಗೂರು ಗ್ರಾಪಂ ವ್ಯಾಪ್ತಿಯ ರಂಗಾಪುರ ಗ್ರಾಮಗಳಲ್ಲಿ ಭಾನುವಾರ ಕೋವಿಡ್ ಪಾಸಿಟೀವ್ ಕಂಡುಬಂದ ಹಿನ್ನೆಲೆಯಲ್ಲಿ ಸೋಂಕಿತರ ಬೀದಿಗಳನ್ನು ಸೀಲ್ ಡೌನ್ ಮಾಡಲಾಗಿದೆ.
ತಾಲೂಕಿನ ದೊಡ್ಡಬಾಣಗೆರೆ ಗ್ರಾಪಂನ ಕುರುಬರರಾಮನಹಳ್ಳಿಯ ಯುವತಿ ಹಾಗೂ ಇಬ್ಬರು ಯುವಕರಿಗೆ ಕೋವಿಡ್ ಪಾಸಿಟಿವ್ ಬಂದಿದೆ. ರಂಗಾಪುರ ಗ್ರಾಮದ ಓರ್ವ ಮಹಿಳೆಗೆ ಕೋವಿಡ್ ಪಾಸಿಟಿವ್ ಕಂಡು ಬಂದಿದ್ದು ಇವರು ಚಿತ್ರದುರ್ಗ ಜಿಲ್ಲೆ ಹಿರಿಯೂರಿನ ಸಂಬಂಧಿಕರ ಮನೆಗೆ ಹೋಗಿ ಬಂದಿದ್ದರು. ಬರಗೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪರೀಕ್ಷಿಸಿ ಸ್ವಾಬ್ ಟೆಸ್ಟ್ ಮಾಡಿಸಿದಾಗ ಕೋವಿಡ್ ಪಾಸಿಟಿವ್ ಕಂಡು ಬಂದಿದ್ದು ಸೋಂಕಿತರ ಬೀದಿಯನ್ನು ಸೀಲ್ಡೌನ್ ಮಾಡಲಾಗಿದೆ. ರಂಗಾಪುರ ಗ್ರಾಮದ ಸೋಕಿತೆಯ ಸಂಪರ್ಕದಲ್ಲಿದ್ದ 49 ಮಂದಿಯನ್ನು ಸ್ವಾಬ್ ಟೆಸ್ಟ್ ಮಾಡಿ ಹೋಂ ಕ್ವಾರಂಟೈನ್ ಮಾಡಲಾಗಿದೆ. ಗ್ರಾಪಂ ಅಭಿವೃದ್ಧಿ ಅಧಿಕಾರಿ ಅನಿತಾ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ರಮೇಶ್, ಗ್ರಾಪಂ ಬಿಲ್ ಕಲೆಕ್ಟರ್ ಲಕ್ಷ್ಮಣ, ಹಿರಿಯ ಆರೋಗ್ಯ ಮಹಿಳಾ ಸಹಾಯಕಿ ಲತಾ, ಆರೋಗ್ಯ ಸಿಬ್ಬಂದಿ ಪುಟ್ಟರಾಜು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್ಗೆ 10 ದಿನ ನ್ಯಾಯಾಂಗ ಬಂಧನ
Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು
ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.