ವೈದ್ಯ ವಿದ್ಯಾರ್ಥಿಗಳ ಸೇವೆ ಕಡ್ಡಾಯ ಮಾಡಿ


Team Udayavani, Aug 12, 2020, 6:20 AM IST

ವೈದ್ಯ ವಿದ್ಯಾರ್ಥಿಗಳ ಸೇವೆ ಕಡ್ಡಾಯ ಮಾಡಿ

ಬೆಂಗಳೂರು: ಪ್ರಧಾನಿ ಜತೆಗಿನ ಸಂವಾದದಲ್ಲಿ ಭಾಗವಹಿಸಿದ ಡಿಸಿಎಂ ಡಾ| ಅಶ್ವತ್ಥ ನಾರಾಯಣ ಮತ್ತು ವೈದ್ಯಕೀಯ ಶಿಕ್ಷಣ ಸಚಿವ
ಡಾ| ಸುಧಾಕರ್‌, ಕೋವಿಡ್ ನಿಯಂತ್ರಣಕ್ಕೆ ರಾಜ್ಯದಲ್ಲಿ ತೆಗೆದುಕೊಂಡ ಕ್ರಮಗಳ ಬಗ್ಗೆ ವಿವರಣೆ ನೀಡಿದರು.

ಮಾನವ ಸಂಪನ್ಮೂಲವನ್ನು ಸಮರ್ಥವಾಗಿ ಬಳಸಿಕೊಳ್ಳುವ ಸಲುವಾಗಿ ಪದವಿ ಮತ್ತು ಸ್ನಾತಕೋತ್ತರ ವೈದ್ಯ ವಿದ್ಯಾರ್ಥಿಗಳು ಕೋರ್ಸ್‌ ಬಳಿಕ ಕಡ್ಡಾಯವಾಗಿ ಸೇವೆ ಸಲ್ಲಿಸುವಂತೆ ಕೇಂದ್ರ ಸರಕಾರದಿಂದ ಆದೇಶ ಹೊರಡಿಸಬೇಕು ಎಂದು ಅವರು ಆಗ್ರಹಿಸಿದರು. ಕೋವಿಡ್‌ ಸಂಬಂಧಿ ಚಟುವಟಿಕೆಗಳಿಗೆ ಅಂತಿಮ ವರ್ಷದ ಅರೆ ವೈದ್ಯಕೀಯ ಮತ್ತು ವೈದ್ಯ ಪದವಿ ವಿದ್ಯಾರ್ಥಿಗಳನ್ನು ಬಳಸಿಕೊಳ್ಳಲು ಅವರಿಗೆ ತರಬೇತಿ ಆರಂಭಿಸಬೇಕು ಎಂದು ಸಚಿವ ಡಾ| ಸುಧಾಕರ್‌ ಮನವಿ ಮಾಡಿದರು.

ಲಿಕ್ವಿಡ್‌ ಆಕ್ಸಿಜನ್‌ ಘಟಕಗಳು ಸುಲಭವಾಗಿ ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕು. ಮೆಡಿಕಲ್‌ ಕಾಲೇಜುಗಳಲ್ಲಿ ಪ್ರತೀ ವರ್ಷ 10 ಸಾವಿರ ಪದವಿ ಮತ್ತು 2 ಸಾವಿರ ಸ್ನಾತಕೋತ್ತರ ಸೀಟುಗಳನ್ನು ಹೆಚ್ಚಿಸಲು ಅನುಮತಿ ನೀಡಬೇಕು ಎಂದು ಅವರು ಕೋರಿಕೊಂಡರು.

ಮೋದಿ ಜತೆಗೆ ನಡೆದ ಸಂವಾದದಲ್ಲಿ ರಾಜ್ಯ ಸರಕಾರವು ಕೊರೊನಾ ನಿಯಂತ್ರಣಕ್ಕಾಗಿ ಕೈಗೊಂಡ ಕ್ರಮಗಳ ಬಗ್ಗೆ ಡಿಸಿಎಂ ಡಾ| ಅಶ್ವತ್ಥ ನಾರಾಯಣ ಮತ್ತು ಸಚಿವ ಡಾ| ಸುಧಾಕರ್‌ ಮಾಹಿತಿ ನೀಡಿದರು.

=ಕೊರೊನಾ ರೋಗಿಯ ಸಂಪರ್ಕಿತ ವ್ಯಕ್ತಿಗಳ ಪತ್ತೆಗೆ ಬೂತ್‌ ಮಟ್ಟದಲ್ಲಿ ಅಧಿಕಾರಿ ಗಳು ಮತ್ತು ಸ್ವಯಂಸೇವಕರ ತಂಡ ರಚಿಸಲಾಗಿದೆ. ರೋಗಿಯ ಸರಾಸರಿ ಸಂಪರ್ಕ ಪತ್ತೆ ಪ್ರಮಾಣ ಜುಲೈಯಲ್ಲಿ 3.5 ಇದ್ದುದು ಆಗಸ್ಟ್‌ನಲ್ಲಿ 4.5ಕ್ಕೆ ಏರಿದೆ.

=ದೈನಿಕ ಕೊರೊನಾ ಪರೀಕ್ಷೆಯನ್ನು 20 ಸಾವಿರದಿಂದ 50 ಸಾವಿರಕ್ಕೆ ಏರಿಸಲಾಗಿದೆ. ಒಟ್ಟು 100 ಪ್ರಯೋಗಾಲಯಗಳನ್ನು ಸ್ಥಾಪಿಸಲಾಗಿದೆ.

= ಕಂಟೈನ್ಮೆಂಟ್‌ ಮತ್ತು ಬಫರ್‌ ವಲಯಗಳಲ್ಲಿ ಪರೀಕ್ಷೆಗೆ 1,300 ಮೊಬೈಲ್‌ ಲ್ಯಾಬ್‌ಗಳನ್ನು ನಿಯೋಜಿಸಲಾಗಿದೆ.

= ಲಕ್ಷಣ ರಹಿತ ಮತ್ತು ಕಡಿಮೆ ಲಕ್ಷಣ ಹೊಂದಿರುವವರಿಗೆ ಸೌಲಭ್ಯವಿದ್ದರೆ ಮನೆಯಲ್ಲೇ ಆರೈಕೆ ನೀಡಲಾಗುತ್ತಿದೆ. ಮನೆ ಭೇಟಿ ಮತ್ತು ಟೆಲಿ ಮಾನಿಟರಿಂಗ್‌ ಮೂಲಕ ಅವರ ಆರೋಗ್ಯದ ಮೇಲೆ ನಿಗಾ ಇರಿಸಲಾಗುತ್ತಿದೆ.

= 43 ಖಾಸಗಿ, 17 ಸರಕಾರಿ ಮೆಡಿಕಲ್‌ ಕಾಲೇಜುಗಳಲ್ಲಿ ಸೇವೆ ಕಲ್ಪಿಸಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಶೇ.50ರಷ್ಟು ಹಾಸಿಗೆಗಳನ್ನು ಕೊರೊನಾ ಚಿಕಿತ್ಸೆಗೆ ಮೀಸಲಿಡಲಾಗಿದೆ.

= ಶಿಫಾರಸು ಮೇರೆಗೆ ಖಾಸಗಿ ಆಸ್ಪತ್ರೆಗೆ ದಾಖಲಾಗುವ ಕೊರೊನಾ ರೋಗಿಗಳ ಶುಲ್ಕವನ್ನು ರಾಜ್ಯ ಸರಕಾರ ಪಾವತಿಸುತ್ತಿದೆ. ಪ್ಲಾಸ್ಮಾ ಬ್ಯಾಂಕ್‌ ಆರಂಭಿಸಲಾಗಿದೆ.

= ಬೆಂಗಳೂರು ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ 10,100 ಹಾಸಿಗೆಗಳ ಸಾಮರ್ಥ್ಯದ ಕೋವಿಡ್‌ ಆರೈಕೆ ಕೇಂದ್ರ ಆರಂಭಿಸಲಾಗಿದೆ. ಬೇರೆ ಕೇಂದ್ರಗಳಲ್ಲಿ 1,04,000 ಹಾಸಿಗೆಗಳಿವೆ.

= ಸರಕಾರಿ ಆರೋಗ್ಯ ಸಂಸ್ಥೆಗಳಲ್ಲಿ 5,500 ಆಕ್ಸಿಜನ್‌ ಸಹಿತ ಹಾಸಿಗೆಗಳಿದ್ದು, ಹೆಚ್ಚುವರಿಯಾಗಿ 1,600 ಆಕ್ಸಿಜನ್‌ ಹಾಸಿಗೆಗಳನ್ನು ನೀಡಲಾಗಿದೆ. ಸೆಪ್ಟಂಬರ್‌ ಅಂತ್ಯಕ್ಕೆ 20 ಸಾವಿರಕ್ಕೂ ಅಧಿಕ ಆಕ್ಸಿಜನ್‌ ಹಾಸಿಗೆಗಳು ಲಭ್ಯವಾಗಲಿವೆ.

= ಕೋವಿಡ್‌ ರೋಗಿಗಳನ್ನು ಕರೆದೊಯ್ಯಲು ಆ್ಯಂಬುಲೆನ್ಸ್‌ಗಳನ್ನು 800ರಿಂದ 2 ಸಾವಿರಕ್ಕೆ ಹೆಚ್ಚಿಸಲಾಗಿದೆ.

= ಕೋವಿಡ್‌ ಸುರಕ್ಷಾ ನಿಯಮ ಉಲ್ಲಂ ಸಿದವರ ವಿರುದ್ಧ ಕ್ರಮ ಜರಗಿಸಲಾ ಗಿದೆ. 2,05,029 ಪ್ರಕರಣ ದಾಖಲಿಸಿದ್ದು, 6.65 ಕೋ. ರೂ. ದಂಡ ಸಂಗ್ರಹವಾಗಿದೆ.

=ಕ್ವಾರಂಟೈನ್‌ ನಿಯಮ ಉಲ್ಲಂ ಸಿದವರ ವಿರುದ್ಧ 5,821 ಎಫ್‌ಐಆರ್‌ ದಾಖಲಾಗಿದೆ. ಕ್ವಾರಂಟೈನ್‌ನಲ್ಲಿದ್ದ 5.7 ಲಕ್ಷ ಜನರಿಗೆ ಎಚ್ಚರಿಕೆ ನೀಡಲಾಗಿದೆ. 3,246 ಮಂದಿಯನ್ನು ಮನೆಯಿಂದ ಸಾಂಸ್ಥಿಕ ಕ್ವಾರಂಟೈನ್‌ಗೆ ಕಳುಹಿಸಲಾಗಿದೆ.

= ಮರಣ ಪ್ರಮಾಣ ಕಡಿಮೆ ಮಾಡಲು ಕೈಗೊಂಡ ಕ್ರಮಗಳಿಂದ ಜುಲೈಯಲ್ಲಿ 2.1 ಮರಣ ಪ್ರಮಾಣವು ಆಗಸ್ಟ್‌ನಲ್ಲಿ 1.8ಕ್ಕೆ ಇಳಿದಿದೆ.

ಕೋವಿಡ್‌ ನಿಯಂತ್ರಣಕ್ಕೆ ಪ್ರಧಾನಿ ಸೂಚನೆ
ದೇಶದ 6 ಲಕ್ಷ ಸಕ್ರಿಯ ಕೊರೊನಾ ಪ್ರಕರಣಗಳಲ್ಲಿ ಶೇ.80ರಷ್ಟು ಕರ್ನಾಟಕ ಮತ್ತು ಇತರ ಒಂಬತ್ತು ರಾಜ್ಯಗಳಲ್ಲಿ ಇವೆ. ಇಲ್ಲಿ ನಿಯಂತ್ರಣ ಸಾಧಿಸುವುದು ಇಡೀ ದೇಶಕ್ಕೆ ಮುಖ್ಯ ಎಂದು ಪ್ರಧಾನಿ ಹೇಳಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ| ಸುಧಾಕರ್‌ ಮಾಹಿತಿ ನೀಡಿದ್ದಾರೆ. 72 ತಾಸುಗಳ ಸೂತ್ರವನ್ನು ಪ್ರಧಾನಿ ತಿಳಿಸಿದ್ದಾರೆ. ಈ ಕುರಿತು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಸಭೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಮುಂದೆ ಯಾವುದೇ ಸಾಂಕ್ರಮಿಕ ರೋಗ ಬಂದಾಗಲೂ ಜನಸಂಖ್ಯೆಗೆ ಅನುಗುಣವಾಗಿ ವೈದ್ಯರ ಕೊರತೆ ನೀಗಿಸಬೇಕು ಎಂದು ಕೋರಲಾಗಿದೆ ಎಂದರು.

ಟಾಪ್ ನ್ಯೂಸ್

1-sssss

Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

3

Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ

arrested

16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನ ಮಂಜೂರು

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನ ಮಂಜೂರು

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-sssss

Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ

Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ

3

Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ

arrested

16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.