14ರ ರಾತ್ರಿ ತಮಟೆ ಚಳವಳಿ, ಪಂಜಿನ ಮೆರವಣಿಗೆ


Team Udayavani, Aug 12, 2020, 10:27 AM IST

14ರ ರಾತ್ರಿ ತಮಟೆ ಚಳವಳಿ, ಪಂಜಿನ ಮೆರವಣಿಗೆ

ಮೈಸೂರು: ರಾಜ್ಯ ಸರ್ಕಾರದ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ವಿರುದ್ಧ ಹೋರಾಟ ಆರಂಭಿಸಿರುವ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಹೋರಾಟದ ಮುಂದುವರಿದ ಭಾಗವಾಗಿ ಆ.14ರಂದು ಮಧ್ಯರಾತ್ರಿ 12 ಗಂಟೆಗೆ ಬೆಂಗಳೂರಿನಲ್ಲಿ ತಮಟೆ ಚಳವಳಿ ಮತ್ತು ಪಂಜಿನ ಮೆರವಣಿಗೆ ನಡೆಸಲು ತೀರ್ಮಾನಿಸಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಹೇಳಿದರು.

ನಗರದ ಜಲದರ್ಶಿನಿ ಅತಿಥಿಗೃಹದಲ್ಲಿ ಮಂಗಳವಾರ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮತ್ತು ದಲಿತ ಸಂಘರ್ಷ ಸಮಿತಿಗಳ ಒಕ್ಕೂಟದಿಂದ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಭೂ ಸುಧಾರಣಾ ಕಾಯ್ದೆ ವಿರೋಧಿಸಿ ಈಗಾಗಲೇ ಆ.8ರಂದು ಭೂಮಿ ಮಾರಾಟಕ್ಕಿಲ್ಲ ಎಂದು ಶಪಥ ಮಾಡಿ ನಮ್ಮ ಭೂಮಿ ನಮ್ಮ ಹಕ್ಕು ಅನ್ಯರಿಗೆ ಮಾರಾಟವಿಲ್ಲ ಎಂಬ ನಾಮಫಲಕಗಳನ್ನು ಊರಿನ ಮುಂದೆ ಹಾಕುವ ಮೂಲಕ ನಮ್ಮೂರಿಗೆ ಬರಬೇಡಿ ತೊಲಗಿ ಎಂದು ಹೇಳುವ ಕಾರ್ಯಕ್ರಮ ಆರಂಭಿಸಲಾಗಿದೆ. ಈ ಹೋರಾಟದ ಮುಂದುವರಿದ ಭಾಗವಾಗಿ ಆ.14 ರಂದು ಮಧ್ಯರಾತ್ರಿ 12 ಗಂಟೆಗೆ ಬೆಂಗಳೂರಿನಲ್ಲಿ ತಮಟೆ ಚಳವಳಿ ಮತ್ತು ಪಂಜಿನ ಮೆರವಣಿಗೆ ನಡೆಸಲಾಗುವುದು ಎಂದು ಹೇಳಿದರು.

ರೈತರೊಂದಿಗೆ ವಿಚಾರ ಸಂಕಿರಣ: ಆ.29ರಂದು ರಾಜ್ಯದ ಆಯಾ ಜಿಲ್ಲೆಗಳ ಪದಾಧಿಕಾರಿಗಳು ರೈತರೊಂದಿಗೆ ವಿಚಾರ ಸಂಕಿರಣವನ್ನ ನಡೆಸಲಾಗುವುದು. ಜತೆಗೆ ಜಿಲ್ಲೆಯ ಪ್ರತಿ ತಾಲೂಕು ಕೇಂದ್ರಗಳಲ್ಲಿ ಜನ ಸಂಪರ್ಕ ಸಭೆಗಳನ್ನು ನಡೆಸಿ, ಸರ್ಕಾರದ ರೈತ ವಿರೋಧಿ ನೀತಿಗಳನ್ನು ರೈತರಲ್ಲಿ ತುಂಬಿ ತಮ್ಮ ಹೋರಾಟ ತೀವ್ರಗೊಳಿಸಲಾಗುವುದು ಎಂದರು.

ಜನವಿರೋಧಿ ಕಾಯ್ದೆ ಅನುಷ್ಠಾನ: ಸಂಘದ ಗೌರವಾಧ್ಯಕ್ಷ ಚಾಮರಸ ಮಾಲಿ ಪಾಟೀಲ್‌ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿವೆ. ಸುಗ್ರೀವಾಜ್ಞೆ ಹೊರಡಿಸುವ ಮೂಲಕ ಕಾಯ್ದೆಗಳನ್ನು ಜಾರಿಗೊಳಿಸಲಾಗುತ್ತಿದೆ. ಕೊರೊನಾ ಬಿಕ್ಕಟ್ಟಿನ ಸಮಯದಲ್ಲಿ ಇಂತಹ ಜನವಿರೋಧಿ ಕಾಯ್ದೆಗಳನ್ನು ಅನುಷ್ಠಾನಕ್ಕೆ ತರಲು ಮುಂದಾಗಿರುವುದು ಖಂಡನೀಯ. ಹೀಗಾಗಿ ಕೇಂದ್ರ, ರಾಜ್ಯ ಸರ್ಕಾರಗಳ ಜನ ವಿರೋಧಿ ನೀತಿಗಳ ವಿರುದ್ಧ ನಿರಂತರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಪ್ರತಿಭಟನೆಯಿಂದ ಹಿಂದೆ ಸರಿಯಲ್ಲ: ರಾಜ್ಯ ದಲಿತ ಸಂಘರ್ಷ ಸಮಿತಿ ಸಂಚಾಲಕ ಗುರುಪ್ರಸಾದ್‌ ಕೆರಗೋಡು ಮಾತನಾಡಿ, ರಾಜ್ಯ ಸರ್ಕಾರ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಮಾಡಿರುವುದು ಸಂಪೂರ್ಣ ಜನವಿರೋಧಿಯಾಗಿದೆ. ಸರ್ಕಾರಗಳಿಗೆ ರೈತರ ಬಗ್ಗೆ ಹಿಂದುಳಿದವರ ಬಗ್ಗೆ ಸ್ವಲ್ಪವೂ ಕರುಣೆಯಿಲ್ಲ, ತಮಗಿಷ್ಟ ಬಂದಹಾಗೆ ಕಾಯ್ದೆಗಳನ್ನು ತಿದ್ದುಪಡಿ ಮಾಡಿಕೊಂಡು, ಯಾರ ಒಪ್ಪಿಗೆಯನ್ನೂ ಒಪಡೆಯದೇ ಸುಗ್ರೀವಾಜ್ಞೆ ಮೂಲಕ ಜಾರಿಗೆ ತರುತ್ತಿದ್ದಾರೆ. ಇದರ ವಿರುದ್ಧ ಸಂಘಟಿತ ಹೋರಾಟ ಮಾಡುವುದರ ಜೊತೆಗೆ ನಮ್ಮ ಹೋರಾಟಕ್ಕೆ ಜಯ ಸಿಗುವವರೆಗೂ ಪ್ರತಿಭಟನೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಹೇಳಿದರು.

ಟಾಪ್ ನ್ಯೂಸ್

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

1

Sullia: ರಬ್ಬರ್‌ ಸ್ಮೋಕ್‌ ಹೌಸ್‌ಗೆ ಬೆಂಕಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.