ಇದೊಂದು ಪೂರ್ವ ನಿಯೋಜಿತ ಕೃತ್ಯ, ತನಿಖಾ ಸ್ವರೂಪ ಶೀಘ್ರ ನಿರ್ಧಾರ: ಗೃಹ ಸಚಿವ ಬೊಮ್ಮಾಯಿ
Team Udayavani, Aug 12, 2020, 12:57 PM IST
ಉಡುಪಿ: ಬೆಂಗಳೂರಿನ ಡಿ.ಜಿ.ಹಳ್ಳಿ ಮತ್ತು ಕೆ.ಜಿ.ಹಳ್ಳಿಯಲ್ಲಿ ಮಂಗಳವಾರ ನಡೆದ ಗೂಂಡಾಗಿರಿಗೆ ಸಂಬಂಧಿಸಿದಂತೆ 110 ಜನರನ್ನು ಬಂಧಿಸಲಾಗಿದೆ ಎಂದು ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬುಧವಾರ ಮಣಿಪಾಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದ್ದು ಮೂರು ಮಂದಿ ಗೋಲಿಬಾರಿಗೆ ಸಾವನ್ನಪ್ಪಿದ್ದಾರೆ. ಪ್ರಕರಣದ ತನಿಖೆ ಸ್ವರೂಪವನ್ನು ಸಿಎಂ, ಹಿರಿಯ ಅಧಿಕಾರಿಗಳ ಜತೆ ಚರ್ಚಿಸಿ ನಿರ್ಧರಿಸಲಾಗುವುದು ಎಂದರು.
ಘಟನೆ ನಡೆದ ಮೂರು ಗಂಟೆಗಳಲ್ಲಿ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದ್ದು, ಪೊಲೀಸರ ನೈತಿಕ ಸ್ಥೈರ್ಯ ಕೆಡಿಸಬೇಡಿ. ಪೊಲೀಸರ ಸಮಯೋಚಿತ ನಿರ್ಧಾರದಿಂದ ಪುಂಡರ ನಿಗ್ರಹ, ಪರಿಸ್ಥಿತಿ ಹತೋಟಿಗೆ ತೆಗೆದುಕೊಳ್ಳಲು ಸಾಧ್ಯವಾಯಿತು. ಮುಂಜಾಗೃತ ಕ್ರಮವಾಗಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.
ಕೇಂದ್ರ ಗೃಹ ಕಾರ್ಯದರ್ಶಿ ಜೊತೆ ಮಾತುಕತೆ ನಡೆಸಿದ್ದು ಹೈದರಾಬಾದ್, ಚೆನ್ನೈನಿಂದ ತಲಾ ಮೂರು ಸಿಆರ್ ಪಿಎಫ್ ರವಾನೆಯಾಗಲಿದೆ. ಶಾಂತಿ ಸುವ್ಯವಸ್ಥೆಗೆ ಮೊದಲ ಆದ್ಯತೆ ನೀಡಿದ್ದು ತ್ವರಿತ ಕಾರ್ಯ ಪಡೆ, ಗರುಡ ನಿಯೋಜಿಸಲಾಗಿದೆ. ಸಿಸಿಟಿವಿ ಸಹಿತ ದಾಖಲೆಗಳ ಆಧಾರದಲ್ಲಿ ಇನ್ನಷ್ಟು ಬಂಧನ ನಡೆಯಬೇಕಿದ್ದು ಪ್ರಕರಣ ಹಿಂದೆ ಯಾರಿದ್ದಾರೆ ಎನ್ನುವುದನ್ನು ಪತ್ತೆ ಹಚ್ಚಲಾಗುತ್ತಿದೆ. ಇದೊಂದು ಪೂರ್ವ ನಿಯೋಜಿತ ಕೃತ್ಯ. ಫೇಸ್ ಬುಕ್ ಪೋಸ್ಟ್, ಚರ್ಚೆ, ಹಿಂಸಾಚಾರಕ್ಕೆ ಕರೆ ನೀಡಿದ್ದು ಸಮಾಜ ಘಾತುಕ ಶಕ್ತಿಗಳ ಷಡ್ಯಂತ್ರ, ಕುಮ್ಮಕ್ಕು ಕಂಡುಬಂದಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ
Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ
Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!
Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ ಸಂಪುಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.