ಯಾದಗಿರಿ: 102 ಮಂದಿಗೆ ಸೋಂಕು
Team Udayavani, Aug 12, 2020, 2:44 PM IST
ಯಾದಗಿರಿ: ಜಿಲ್ಲೆಯಲ್ಲಿ ಕೋವಿಡ್ ಮಹಾಮಾರಿ ಮತ್ತೆ ಒಂದೇ ದಿನ ಶತಕ ಬಾರಿಸಿದ್ದು, 102 ಜನರು ಸೋಂಕಿಗೆ ತುತ್ತಾಗಿದ್ದಾರೆ. ಸೋಂಕಿತರ ಸಂಖ್ಯೆ 3,231ಕ್ಕೆ ಏರಿಕೆಯಾಗಿದೆ.
ಯಾದಗಿರಿ ನಗರ ಮತ್ತು ಗ್ರಾಮೀಣ ತಾಲೂಕು ಗುರುಮಠಕಲ್ ಸೇರಿ 41 ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಶಹಾಪುರ ವ್ಯಾಪ್ತಿಯ 19 ಹಾಗೂ ಸುರಪುರ ವ್ಯಾಪ್ತಿಯ ಮುದನೂರ ಕೆ. ಗ್ರಾಮದ 17 ಜನ ಸೇರಿ ಒಟ್ಟು 42 ಜನರಿಗೆ ಸೋಂಕು ತಗುಲಿದೆ. ಜಿಲ್ಲೆಯಲ್ಲಿ ಮಂಗಳವಾರ ಸೋಂಕಿತರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ 345 ಜನರನ್ನು ಪತ್ತೆ ಹಚ್ಚಲಾಗಿದೆ. ದ್ವಿತೀಯ ಸಂಪರ್ಕದಲ್ಲಿದ್ದ 394 ಜನರು ಪತ್ತೆಯಾಗಿದ್ದು ಒಟ್ಟು 13006 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ.
ಆರೋಗ್ಯ ಇಲಾಖೆ ಮಂಗಳವಾರ 349 ಜನರ ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಕಳಿಸಿದೆ. 231 ಜನರ ವರದಿ ನೆಗೆಟಿವ್ ಬಂದಿವೆ. ಜಿಲ್ಲೆಯಲ್ಲಿ 281 ಕಂಟೇನ್ಮೆಂಟ್ ಝೋನ್‌ಗಳನ್ನು ರಚಿಸಲಾಗಿದೆ. ಹೊಸ ಜಿಲ್ಲಾಸ್ಪತ್ರೆಯಲ್ಲಿ 147 ಜನರನ್ನು ಪತ್ಯೇಕವಾಗಿರಿಸಲಾಗಿದೆ. ಶಹಾಪುರ 61, ಸುರಪುರ 110 ಜನ ಹಾಗೂ ಬಂದಳ್ಳಿ ಏಕಲವ್ಯ ಕೋವಿಡ್ ಕೇರ್ ಸೆಂಟರ್ ನಲ್ಲಿ 84 ಜನರನ್ನು ಅವಲೋಕನೆಗಾಗಿ ಇರಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.