ಕೆ.ಜಿ.ಹಳ್ಳಿ ಗಲಭೆ ಪ್ರಕರಣ: ಅಖಂಡ – ಡಿಕೆಶಿ ಭೇಟಿ ; ಘಟನೆಯ ಮಾಹಿತಿ ಪಡೆದ KPCC ಅಧ್ಯಕ್ಷರು
ಘಟನಾ ಸ್ಥಳಗಳಿಗೆ ಉಪಮುಖ್ಯಮಂತ್ರಿ ಅಶ್ವತ್ಥನಾರಾಯಣ, ಡಿ.ವಿ.ಎಸ್. ಭೇಟಿ : ಪರಿಶೀಲನೆ
Team Udayavani, Aug 12, 2020, 10:23 PM IST
ಬೆಂಗಳೂರು: ಇಲ್ಲಿನ ಕೆ.ಜಿ.ಹಳ್ಳಿ ಗಲಭೆ ಘಟನೆಗೆ ಸಂಬಂಧಿಸಿದಂತೆ ಪುಲಿಕೇಶಿ ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರು ಇಂದು ಸಂಜೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾದರು.
ಶ್ರೀನಿವಾಸಮೂರ್ತಿ ಅವರು ಡಿ.ಕೆ.ಶಿ ಅವರನ್ನು ಸದಾಶಿವನಗರ ನಿವಾಸದಲ್ಲಿ ಭೇಟಿ ಮಾಡಿ ಕೆ.ಜಿ.ಹಳ್ಳಿ ಗಲಭೆ, ದುಷ್ಕರ್ಮಿಗಳಿಂದ ತಮ್ಮ ನಿವಾಸದ ಮೇಲೆ ನಡೆದ ದಾಳಿ ಮತ್ತಿತರ ವಿಚಾರಗಳ ಬಗ್ಗೆ ಮಾಹಿತಿ ನೀಡಿ ಚರ್ಚಿಸಿದರು.
ಈ ಸಂದರ್ಭದಲ್ಲಿ ಘಟನೆಗೆ ಸಂಬಂಧಿಸಿದಂತೆ ಶಿವಕುಮಾರ್ ಅವರು ವಿಷಾದ ವ್ಯಕ್ತಪಡಿಸಿ ಆಖಂಡ ಶ್ರೀನಿವಾಸ ಮೂರ್ತಿ ಅವರಿಗೆ ಧೈರ್ಯ ತುಂಬಿದ್ದಾರೆ ಎಂದು ತಿಳಿದುಬಂದಿದೆ.
ಇನ್ನೊಂದೆಡೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ ವೇಣುಗೋಪಾಲ್ ಅವರು ಅಖಂಡ ಶ್ರೀನಿವಾಸ ಮೂರ್ತಿ ಅವರಿಗೆ ಕರೆ ಮಾಡಿ ಧೈರ್ಯ ತುಂಬಿದರು ಹಾಗೂ ಘಟನೆಯ ಬಗ್ಗೆ ವಿವರಣೆಯನ್ನು ಪಡೆದಿದ್ದಾರೆ.
ಘಟನಾ ಸ್ಥಳಗಳಿಗೆ ಅಶ್ವತ್ಥನಾರಾಯಣ, ಡಿ.ವಿ.ಎಸ್. ಭೇಟಿ : ಪರಿಶೀಲನೆ
ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿಯಲ್ಲಿ ನಿನ್ನೆ ರಾತ್ರಿ ನಡೆದ ಗಲಭೆ ಘಟನೆಗಳಿಗೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಂಸದ ಹಾಗೂ ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಅವರು ಘಟನಾ ಪ್ರದೇಶಗಳಿಗೆ ಬುಧವಾರ ಸಂಜೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದರು.
ಇದೇ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವರಿಬ್ಬರೂ ಘಟನೆಯಲ್ಲಿ ಸಂತ್ರಸ್ತರಾದವರ ಮನೆಗಳಿಗೆ ಭೇಟಿ ನೀಡಿ ಅವರಿಗೆ ದೈರ್ಯ ತುಂಬಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!
Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ
ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್ ಐಆರ್ ದಾಖಲು-HDK ಎ1
Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.