ಮುಂಬೈ ಕನಸು ನನಸಾಗಿಸಲು 45 ಸಾವಿರ ರೂ.ಗೆ ಮಗುವನ್ನೇ ಮಾರಿದ ತಾಯಿ!
Team Udayavani, Aug 13, 2020, 10:41 AM IST
ಹೈದರಾಬಾದ್: ಕನಸಿನ ನಗರಿ ಮುಂಬೈಗೆ ಹೋಗಬೇಕು, ಅಲ್ಲಿ ಬದುಕು ಕಟ್ಟಿಕೊಳ್ಳಬೇಕು ಎನ್ನುವುದು ಬಹಳಷ್ಟು ಮಂದಿಯ ಕನಸು. ಇದಕ್ಕಾಗಿ ಜನರು ಹಲವು ರೀತಿಯ ಕಷ್ಟ ಅನುಭವಿಸುತ್ತಾರೆ, ಅನೇಕ ರೀತಿಯ ತ್ಯಾಗಗಳನ್ನು ಮಾಡುತ್ತಾರೆ. ಆದರೆ ಇಲ್ಲೊಬ್ಬರು ಮಹಾತಾಯಿ ಮುಂಬೈ ಕನಸನ್ನು ನನಸು ಮಾಡುವ ಸಲುವಾಗಿ ತನ್ನ ಮಗುವನ್ನೇ ಮಾರಾಟ ಮಾಡಿದ್ದಾಳೆ.
ಹೈದರಾಬಾದ್ ನ ಹಬೀಬ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, 22 ವರ್ಷದ ಮಹಿಳೆ ತನ್ನ ಎರಡು ವರ್ಷದ ಗಂಡು ಮಗುವನ್ನು 45 ಸಾವಿರ ರೂಪಾಯಿಗೆ ಮಾರಾಟ ಮಾಡಿದ್ದಾಳೆ.
ಪ್ರಕರಣ ದಾಖಲಿಸಿರುವ ಪೊಲೀಸರು 24 ಗಂಟೆಯಲ್ಲಿ ಮಗುವನ್ನು ರಕ್ಷಿಸಿದ್ದು, ಮತ್ತು ತಾಯಿಯನ್ನು ಬಂಧಿಸಿದ್ದಾರೆ.
22 ವರ್ಷದ ಶೇಖ್ ಜೋಯಾ ಖಾನ್ ಎಂಬ ಮಹಿಳೆ ಗಂಡನೊಂದಿಗೆ ಜಗಳ ಮಾಡಿಕೊಂಡು ಒಬ್ಬಂಟಿಯಾಗಿ ಬದುಕುತ್ತಿದ್ದಳು. ಮುಂಬೈಗೆ ಹೋಗಬೇಕು ಎಂದು ಕನಸು ಕಾಣುತ್ತಿದ್ದ ಆಕೆಗೆ ಮಗುವನ್ನು ಸಾಕುವುದು ಕಷ್ಟವಾಗಿತ್ತು. ಹೀಗಾಗಿ ಮಗುವನ್ನು ಮಾರಾಟ ಮಗುವನ್ನು ಮಾರಾಟ ಮಾಡಲು ನಿರ್ಧರಿಸಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.
ಮಗುವನ್ನು ಮಾರಾಟ ಮಾಡಿರುವ ವಿಷಯ ತಿಳಿದ ಮಗುವಿನ ತಂದೆ ಅಬ್ದುಲ್ ಮುಜಾಹಿದ್ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ತಾಯಿಯನ್ನು ಮತ್ತು ಮಕ್ಕಳ ಮಾರಾಟ ಮಾಡುತ್ತಿದ್ದ ಮಧ್ಯವರ್ತಿ ಸೇರಿ ಐವರನ್ನು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
Super App: ರೈಲು ಬುಕಿಂಗ್, ಟ್ರ್ಯಾಕ್ಗೆ ‘’ಸೂಪರ್ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Jharkhand; ಇಂಡಿಯಾ ಒಕ್ಕೂಟದ “ಸಪ್ತ ಗ್ಯಾರಂಟಿ’!: ಮಹಿಳೆಯರಿಗೆ ಮಾಸಿಕ 2,500 ರೂ.
T-Shirt: ಫ್ಲಿಪ್ಕಾರ್ಟ್, ಮೀಶೋದಲ್ಲಿ ಲಾರೆನ್ಸ್ ಬಿಷ್ಣೋಯ್ ಟೀಶರ್ಟ್ ಮಾರಾಟ: ಆಕ್ರೋಶ
Supreme Court: ಬೇಕಾಬಿಟ್ಟಿ ಖಾಸಗಿ ಆಸ್ತಿ ಸ್ವಾಧೀನ ಸಲ್ಲ;ವಿಶೇಷ ಪ್ರಕರಣದಲ್ಲಷ್ಟೇ ಸ್ವಾಧೀನ
MUST WATCH
ಹೊಸ ಸೇರ್ಪಡೆ
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್.ಡಿ.ದೇವೇಗೌಡ ಗುಡುಗು
Super App: ರೈಲು ಬುಕಿಂಗ್, ಟ್ರ್ಯಾಕ್ಗೆ ‘’ಸೂಪರ್ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Kambala: ಪೆಟಾ ಪಿಐಎಲ್; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್
MUDA Case: ಕೇವಲ 14 ಸೈಟ್ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.