ಅಭಿವೃದ್ಧಿ ಕಾರ್ಯ ಶೀಘ್ರ ಪೂರ್ಣಗೊಳಿಸಿ : ಅಧಿಕಾರಿಗಳಿಗೆ ಸಂಸದರ ಸೂಚನೆ
Team Udayavani, Aug 13, 2020, 11:38 AM IST
ಗದಗ: ನಗರಸಭೆ ವ್ಯಾಪ್ತಿಯಲ್ಲಿ ಕೈಗೊಂಡ ನೀರು ಸರಬರಾಜು ಹಾಗೂ ಒಳಚರಂಡಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಶೀಘ್ರದಲ್ಲೇ ಪೂರ್ಣಗೊಳಿಸಿ, ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕೆಂದು ಸಂಸದ ಶಿವಕುಮಾರ್ ಉದಾಸಿ
ಅಧಿಕಾರಿಗಳಿಗೆ ಸೂಚಿಸಿದರು.
ಗದಗ-ಬೆಟಗೇರಿ ನಗರಸಭೆ ಸಭಾಂಗಣದಲ್ಲಿ ಮಂಗಳವಾರ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಮೃತ್ ಯೋಜನೆಯಡಿ ಕೈಗೆತ್ತಿಕೊಳ್ಳಲಾಗಿರುವ ಒಳಚರಂಡಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಎಸ್‌ಟಿಪಿಯಲ್ಲಿ ಮಲೀನ ನೀರು ಸಂಗ್ರಹವಾಗದಂತೆ ಕ್ರಮ ಕೈಗೊಳ್ಳಬೇಕು. ಪಂಪಿಂಗ್ ಯಂತ್ರ ಸ್ಥಗಿತಗೊಳ್ಳದಂತೆ ನಿಗಾವಹಿಸಬೇಕು. ಸೀವೇಜ್‌ಗೆ ನೀರು ಸರಿಯಾಗಿ ಹರಿದು ಹೋಗುವಂತೆ ಚರಂಡಿಗಳ ಮುಖ್ಯ
ಕೊಳವೆ ಮಾರ್ಗಗಳನ್ನು ಪುನಶ್ಚೇತನಗೊಳಿಸಬೇಕು. ಈಗಿರುವ ಸೀವರ್ ನೆಟ್‌ವರ್ಕ್‌ನ್ನು ಪುನರುಜ್ಜೀವನಗೊಳಿಸಬೇಕು ಎಂದರು.
ನಿಗದಿತ ಅವ ಧಿಯೊಳಗೆ ಕಾಮಗಾರಿ ಪೂರ್ಣಗೊಳ್ಳದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಸಂಸದರು, ನಗರದಲ್ಲಿ ಪ್ರತಿ ಮನೆಗೂ ನೀರು ಮತ್ತು ಒಳಚರಂಡಿ ಸಂಪರ್ಕ ಕಲ್ಪಿಸಬೇಕು. ಇನ್ನುಳಿದ 25 ಕಿ.ಮೀ. ಪೈಪ್‌ಲೈನ್ ಕಾಮಗಾರಿಯನ್ನು ವಿಳಂಬ
ಮಾಡಬಾರದು ಎಂದು ಸೂಚಿಸಿದರು.
ನಗರಸಭೆ ಪೌರಾಯುಕ್ತ ಮನ್ಸೂರ್ ಅಲಿ ಮಾತನಾಡಿ, ಹಮ್ಮಿಗಿ ಬ್ಯಾರೆಜ್‌ನಿಂದ ಡಂಬಳವರೆಗೆ ಸುಮಾರು 100 ಕೋಟಿ ರೂ. ವೆಚ್ಚದಲ್ಲಿ ಸುಮಾರು 65 ಕಿ.ಮೀ.ವರೆಗೆ ಪೈಪ್‌ಲೈನ್ ಅಳವಡಿಸಲಾಗಿದೆ. ನಗರದ ಒಳಚರಂಡಿ ಯೋಜನೆಯ ಮೊದಲ ಹಂತದ ಸುಮಾರು 15 ಕೋಟಿ ರೂ. ವೆಚ್ಚದ ಕಾಮಗಾರಿ ಪೂರ್ಣಗೊಂಡಿದ್ದು, ಅಮೃತ್ ಯೋಜನೆಯಡಿ ಎರಡನೇ ಹಂತದ ಒಳಚರಂಡಿ
ಯೋಜನೆಯ ದುರಸ್ತಿ ಹಾಗೂ ನಿರ್ವಹಣೆಗಾಗಿ 158 ಕೋಟಿ ರೂ. ಮೀಸಲಿಡಲಾಗಿದ್ದು, ಕಾಮಗಾರಿ ಅಂತಿಮ ಹಂತದಲ್ಲಿದೆ. ಅಮೃತ್ ಯೋಜನೆಯ ಹೆಚ್ಚುವರಿ ಅನುದಾನದಡಿ ಹಾಲಿ ಸೀವರ್ ನೆಟ್ ವರ್ಕ್ ಪುನರುಜ್ಜೀವನಗೊಳಿಸಲು 2 ಕೋಟಿ ರೂ.
ಅನುದಾನದಲ್ಲಿ ಕಾಮಗಾರಿ ಪ್ರಾರಂಭಿಸಲಾಗಿದೆ ಎಂದರು.
2015-16ನೇ ಸಾಲಿನಿಂದ 2018-19ನೇ ಸಾಲಿನವರೆಗೆ ವಿವಿಧ ವಸತಿ ಯೋಜನೆಗಳಡಿ ಒಟ್ಟು 6,939 ಮನೆಗಳ ನಿರ್ಮಾಣ ಗುರಿ
ನಿಗದಿಪಡಿಸಲಾಗಿದ್ದು, ಅದರಲ್ಲಿ 944 ಮನೆಗಳು ಪೂರ್ಣಗೊಂಡಿವೆ. ಅದರಂತೆ, ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಗುಂಪು ವಸತಿ ಯೋಜನೆಯಡಿ 3,994 ಮನೆಗಳನ್ನು ನಿರ್ಮಿಸಲಾಗುತ್ತಿದೆ ಎಂದು ಪೌರಾಯುಕ್ತ ಮನ್ಸೂರ್ ಅಲಿ ತಿಳಿಸಿದರು.
ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾ ಧಿಕಾರದ ಅಧ್ಯಕ್ಷ ಸಂಗಮೇಶ ದುಂದೂರ, ಆಯುಕ್ತ ರಮೇಶ ಹಾಗೂ ವಿವಿಧ ಇಲಾಖೆಯ ಅಧಿ ಕಾರಿಗಳು ಸಭೆಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ
Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.