ಬೆಂಗಳೂರು ಗಲಭೆ ಪ್ರಕರಣಕ್ಕೆ ಸರ್ಕಾರ ಧಿಟ್ಟ ನಿರ್ಧಾರ ಕೈಗೊಂಡಿದೆ : ನಳೀನ್ ಕುಮಾರ್ ಕಟೀಲ್


Team Udayavani, Aug 13, 2020, 12:56 PM IST

nalin kumar kateel

ಕೊಪ್ಪಳ: ಬೆಂಗಳೂರು ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣವು ಪೂರ್ವ ಯೋಜಿತ ಸಂಚು. ಈ ಬಗ್ಗೆ ಸರ್ಕಾರ ದಿಟ್ಟ ನಿರ್ಧಾರ ಕೈಗೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು ಹೇಳಿದರು.

ಕೊಪ್ಪಳದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಗಲಭೆಗೆ ಟ್ವಿಟ್ ಕಾರಣವಾಗಿದೆ. ಟ್ವಿಟ್ ಮಾಡಿದ್ದಕ್ಕೆ ನನ್ನ ವಿರೋಧ ಇದೆ. ಟ್ವಿಟ್ ಮಾಡಿದವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುತ್ತದೆ. ಟ್ವಿಟ್ ಮಾಡಿದ್ದರ ನೆಪದಲ್ಲಿ ಗಲಭೆ ಮಾಡಿದ್ದು ಎಷ್ಟರ ಮಟ್ಟಿಗೆ ಸರಿ ಎಂದರು.

ಠಾಣೆ ಮುಂದೆ ಏಕಾಏಕಿ ಜನರು ಹೇಗೆ ಸೇರಿದರು? ಪೆಟ್ರೋಲ್ ಬಾಂಬ್ ಗಳು, ಕಲ್ಲುಗಳು ಎಲ್ಲಿಂದ ಬಂದವು? ಇವೆಲ್ಲ ಪೂರ್ವ ನಿಯೋಜಿತ ಸಂಚಾಗಿದೆ. ಗಲಭೆ ಹಿಂದೆ ಘಾತುಕ ಶಕ್ತಿಗಳಿವೆ. ಈಗ ಯಡಿಯೂರಪ್ಪ ಅವರ ಸರಕಾರ ಅದ್ಭುತ ಕೆಲಸ ಮಾಡುತ್ತಿದೆ. ಅಭಿವೃದ್ಧಿ ಪರವಾದ ಕೆಲಸ ಮಾಡುತ್ತಿದೆ. ಅದನ್ನು ಸಹಿಸುತ್ತಿಲ್ಲ ಎಂದರು.

ಗಲಭೆಯಲ್ಲಿ ಎಸ್ ಡಿಪಿಐ, ಕೆಎಫ್ ಡಿ ಸಂಘಟನೆಯ ಕೈವಾಡ ಇದೆ ಎನ್ನುವ ಮಾತುಗಳಿವೆ. ಇವುಗಳ ನಿಷೇಧಕ್ಕೆ ಒತ್ತಾಯ ಮಾಡುತ್ತೇನೆ. ಇದರ ಹಿಂದೆ ಯಾರಾರು ಇದ್ದಾರೆ ತನಿಖೆ ಆಗಬೇಕು. ಸರಕಾರ ದೃಢವಾದ ನಿರ್ಧಾರ ತೆಗೆದುಕೊಂಡಿದೆ. ಸರಕಾರಕ್ಕೆ, ಸಿಎಂ, ಗೃಹ ಸಚಿವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಇದನ್ನೂ ಓದಿ: ಗೃಹ ಇಲಾಖೆ ಸಂಪೂರ್ಣ ವಿಫಲವಾಗಿದೆ, ಬೊಮ್ಮಾಯಿ ನಾಲಾಯಕ್ ಸಚಿವ: ಕಾಂಗ್ರೆಸ್ ನಾಯಕ ಮನೋಹರ್

ಈ ಹಿಂದೆ ಸಿದ್ದರಾಮಯ್ಯ  ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿ ಮಾತ್ರ ಇದ್ದರು. ಮುಖ್ಯಮಂತ್ರಿವಾಗಿ ವರ್ತನೆ ಮಾಡಲಿಲ್ಲ. ಅಧಿಕಾರದಲ್ಲಿ ಇದ್ದಾಗ ಗಲಭೆಗಳು ಆದಾಗ ಕಠಿಣ ಕ್ರಮ ತೆಗೆದುಕೊಂಡಿದ್ದರೆ ಇವತ್ತು ಇದು ನಡೆಯುತ್ತಿದ್ದಿಲ್ಲ.  21 ಹಿಂದೂ ಕಾರ್ಯಕರ್ತರ ಹತ್ಯೆ ಆದಾಗ ದುಷ್ಕರ್ಮಿಗಳ ಮೇಲೆ ಕ್ರಮ ತಗೆದುಕೊಳ್ಳಲಿಲ್ಲ.ಎಸ್ ಡಿಪಿಐ, ಸಿಮಿ ಸಂಘಟನೆಯವರ ಮೇಲಿನ ಕೇಸ್ ಗಳಿಗೆ ಬಿ ರಿಪೋರ್ಟ್ ಹಾಕಿದರು. ಇದರಿಂದ ಅವರಿಗೆ ಧೈರ್ಯ ಬಂತು ಆ ಧೈರ್ಯವೇ ಇವತ್ತು ಇಂತಹ ಕೃತ್ಯಗಳನ್ನು ಮಾಡಿಸುತ್ತಿದೆ ಎಂದರು.

ಈ ಕಾರಣಗಳಿಂದ ಸಿದ್ದರಾಮಯ್ಯ ಮೌನವಾಗಿದ್ದು, ಹಿಂದೆ ಅವರದ್ದೆ ಶಕ್ತಿ ಇದೆ. ಈ ಘಟನೆಗೆ ಸಿದ್ದರಾಮಯ್ಯ ನೇರ ಕಾರಣ ಎಂದು ನಾನು ಹೇಳಲ್ಲ. ಆದರೆ ಸಿದ್ದರಾಮಯ್ಯ ಸರಿಯಾಗಿ ಆಡಳಿತ ನೀಡದಿದ್ದರಿಂದ ಇಂಥ ಘಟನೆ ಜರುಗುತ್ತಿವೆ ಎಂದರು.

ಇದನ್ನೂ ಓದಿ: ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ: 17 ಮಂದಿಯ ಮೇಲೆ ಎಫ್ಐಆರ್, ನಾಲ್ವರ ಬಂಧನ

ಸಿದ್ದರಾಮಯ್ಯ ಅವರು ಮತಕ್ಕಾಗಿ ಓಲೈಕೆ ರಾಜಕಾರಣ ಮಾಡಿದೆ. ಕಾಂಗ್ರೆಸ್ ಸಹ ಓಲೈಕೆ ರಾಜಕಾರಣ ಮಾಡಿದೆ. ಪಾದರಾಯನಪುರ ಗಲಭೆ ಆದಾಗ ಜಮೀರ್ ಅಹಮ್ಮದ್ ಮೆರವಣಿಗೆ ಮಾಡಿದರು. ಡಿಜೆ ಹಳ್ಳಿ ಗಲಭೆಯಲ್ಲಿ ಸತ್ತವರನ್ನ ಅಮಾಯಕರು ಅಂತಾರೆ. ಡಿ ಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕರು, ನವೀನ್ ಯಾವ ಪಾರ್ಟಿಯವರು. ನವೀನ್ ಕಾಂಗ್ರೆಸ್ ಪಕ್ಷದವನು. ನಮ್ಮ ಬಳಿ ಪೂರ್ತಿಯಾದ ದಾಖಲೆಗಳಿವೆ. ಪೊಲೀಸ್ ಠಾಣೆ, ವಾಹನಗಳಿಗೆ ಬೆಂಕಿ ಹಾಕಿದವರು ಮಾಧ್ಯಮ ಪ್ರತಿನಿಧಿಗಳ ಮೇಲೂ ಹಲ್ಲೆ ಮಾಡಿದ್ದಾರೆ. ಭಯವನ್ನು ಸೃಷ್ಟಿ ಮಾಡುವವನು ಭಯೋತ್ಪಾದಕ. ಕಾಂಗ್ರೆಸ್ ಶಾಸಕ ದಲಿತರು. ನೀವು ದಲಿತರ ಪರ ನಿಲ್ತಿರಾ ಅಥವಾ ಭಯೋತ್ಪಾದಕರಿಗೆ ಬೆಂಗಾವಲಾಗಿ ನೀಲ್ತೀರಾ ಎಂದು ಕಾಂಗ್ರೆಸ್ ಗೆ ಪ್ರಶ್ನಿಸಿದರು.

ಟಾಪ್ ನ್ಯೂಸ್

1-kir

All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

Jarkahnad–CM-Soren

Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್‌ ಸೊರೇನ್‌ ನ.28ಕ್ಕೆ ಪದಗ್ರಹಣ

120

Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

IPL Mega Auction: Here is the auction information for the third set of players

IPL Mega Auction: ಮೂರನೇ ಸೆಟ್‌ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ

Supreme Court

Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

3-tavaragera

Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್

4-gangavathi

Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ

12-koppala

Koppala ಗವಿಮಠ ಜಾತ್ರೆಗೆ ನಟ ಅಮಿತಾಬ್‌ ಬಚ್ಚನ್‌?

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-kir

All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ

Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು

Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

Jarkahnad–CM-Soren

Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್‌ ಸೊರೇನ್‌ ನ.28ಕ್ಕೆ ಪದಗ್ರಹಣ

120

Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.