ಕಾಲಮಿತಿಯಲಿ ಕಾಮಗಾರಿ ಪೂರ್ಣಗೊಳಿಸಿ: ಅಶ್ವತ ನಾರಾಯಣ
Team Udayavani, Aug 14, 2020, 9:07 AM IST
ಬೆಂಗಳೂರು: ರಾಮನಗರ ಜಿಲ್ಲೆಯಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ವೇಗ ಹೆಚ್ಚಿಸುವ ಮೂಲಕ ಪೂರ್ವ ನಿಗದಿತ ಅವಧಿಯಲ್ಲಿ ಜನರಿಗೆ ಪ್ರಯೋಜನ ಸಿಗುವಂತಾಗಬೇಕು ಎಂದು ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಸೂಚನೆ ನೀಡಿದರು.
ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಂಬಂಧಪಟ್ಟಂತೆ ವಿಕಾಸಸೌಧದಲ್ಲಿ ಗುರುವಾರ ಸರಣಿ ಸಭೆ ನಡೆಸಿದ ಅವರು, ರಾಮನಗರದಲ್ಲಿ ನಿರ್ಮಾಣವಾಗುತ್ತಿರುವ 250 ಹಾಸಿಗೆಗಳ ಆಸ್ಪತ್ರೆಯನ್ನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸುವ ಕಾಮಗಾರಿ, ಜಿಲ್ಲೆಯ ಗ್ರಾಮೀಣ ಮತ್ತು ಪಟ್ಟಣ ಪ್ರದೇಶಗಳಿಗೆ ಕುಡಿಯುವ ನೀರು ಪೂರೈಕೆ, ಒಳಚರಂಡಿ ವ್ಯವಸ್ಥೆ ಸುಧಾರಣೆ ಕಾಮಗಾರಿ ಸೇರಿದಂತೆ ಪ್ರಗತಿಯಲ್ಲಿರುವ ಎಲ್ಲ ಯೋಜನೆ, ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಜಿಲ್ಲಾ ಕೇಂದ್ರದಲ್ಲಿ ಸದ್ಯ ನಿರ್ಮಾಣವಾಗುತ್ತಿರುವ 250 ಹಾಸಿಗೆಗಳ ಆಸ್ಪತ್ರೆಯನ್ನು ಜಾಗತಿಕ ಮಟ್ಟದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನಾಗಿ ಪರಿವರ್ತಿಸುವ ಕಾಮಗಾರಿಯ ಪ್ರಗತಿ ಕುರಿತು ಅಶ್ವತ್ಥ ನಾರಾಯಣ ಅವರು ಅಧಿಕಾರಿಗಳಿಂದ ಮಾಹಿತಿ ಪಡೆದರು. ಆಸ್ಪತ್ರೆಯಲ್ಲಿ ಕ್ಯಾನ್ಸರ್, ಹೃದ್ರೋಗ, ನರರೋಗ, ಎದೆ ಸಮಸ್ಯೆ ಸೇರಿದಂತೆ ಗಂಭೀರ ಕಾಯಿಲೆಗಳಿಗೂ ಚಿಕಿತ್ಸೆ ನೀಡುವ ವ್ಯವಸ್ಥೆ ಕಲ್ಪಿಸಬೇಕು. ಈಗಾಗಲೇ ಜಿಲ್ಲಾ ಕೇಂದ್ರದಲ್ಲಿರುವ 100 ಹಾಸಿಗೆಗಳ ಆಸ್ಪತ್ರೆಯನ್ನು ತಾಯಿ- ಮಕ್ಕಳ ಆಸ್ಪತ್ರೆಯಾಗಿ ಪರಿವರ್ತಿಸಬೇಕು. ಮಣಿಪಾಲ್ ಆಸ್ಪತ್ರೆಯ ತಜ್ಞ ವೈದ್ಯರು ಆಸ್ಪತ್ರೆಯ ನಿರ್ಮಾಣಕ್ಕೆ ಸೂಕ್ತ ಸಲಹೆ ನೀಡುತ್ತಿದ್ದು, ಜಾಗತಿಕ ದರ್ಜೆ ಗುಣಮಟ್ಟಕ್ಕೆ ಯಾವುದೇ ರೀತಿಯಲ್ಲೂ ಚ್ಯುತಿಯಾಗದಂತೆ ವ್ಯವಸ್ಥೆ ರೂಪಿಸಲಾಗುವುದು. ಮೂರು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದ್ದು, ಈ ಭಾಗದ ಜನರಿಗೆ ಗುಣಮಟ್ಟದ ಚಿಕಿತ್ಸಾ ವ್ಯವಸ್ಥೆ ಸಿಗಲಿದೆ. ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಇಂತಹ ಸುಸಜ್ಜಿತ ಆಸ್ಪತ್ರೆ ಅಗತ್ಯವಿತ್ತು ಎಂಬ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು.
ಆರೋಗ್ಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಕಾಲಮಿತಿಯಲ್ಲೇ ಆಸ್ಪತ್ರೆ ಜನರ ಸೇವೆಗೆ ಲಭ್ಯವಾಗುವಂತೆ ಕ್ರಮ ವಹಿಸಲಾಗುವುದು ಎಂದು ಹೇಳಿದರು. ರಾಮನಗರ ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಿರಂಜನ್, ಜಿಲ್ಲಾ ಸರ್ಜನ್ ಡಾ. ಶಶಿಧರ್, ಜಿಲ್ಲೆಯ ತಜ್ಞ ವೈದ್ಯೆ ಡಾ. ಪದ್ಮಾ ಹಾಗೂ ಮಣಿಪಾಲ್ ಆಸ್ಪತ್ರೆ ವೈದ್ಯರು ಪಾಲ್ಗೊಂಡಿದ್ದರು.
ಕುಡಿಯುವ ನೀರಿನ ಯೋಜನೆ: ಜಲ್ಲೆಯ ಗ್ರಾಮೀಣ ಪ್ರದೇಶಗಳಿಗೆ ಕುಡಿಯುವ ನೀರು ಒದಗಿಸಲು ಇಗ್ಗಲೂರು ಅಣೆಕಟ್ಟೆಯಿಂದ ಕಣ್ವ, ಮಂಚನಬೆಲೆ ಮತ್ತು ವೈ.ಜಿ. ಗುಡ್ಡ ಜಲಾಶಯಗಳಿಗೆ ನೀರು ತುಂಬಿಸುವ ಕಾಮಗಾರಿಯ ಪ್ರಗತಿಯನ್ನು ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಪರಿಶೀಲಿಸಿದರು. 540 ಕೋಟಿ ರೂ. ವೆಚ್ಚದ ಯೋಜನೆ ಡಿಸೆಂಬರ್ ಹೊತ್ತಿಗೆ ಪೂರ್ಣಗೊಳ್ಳಲಿದ್ದು, ಕಾವೇರಿ ನದಿಯಿಂದ ಜಿಲ್ಲೆಗೆ ನೀರು ತರಲಾಗುತ್ತಿದೆ ಎಂದು ಅವರು ತಿಳಿಸಿದರು.
ಜತೆಗೆ 1,800 ಕೋಟಿ ರೂ. ವೆಚ್ಚದಲ್ಲಿ ಮನೆ, ಮನೆಗೂ ಶುದ್ಧ ಕುಡಿಯುವ ನೀರನ್ನು ಒದಗಿಸುವ ಯೋಜನೆ ಹಾಕಿಕೊಳ್ಳಲಾಗಿದ್ದು, ಕೇಂದ್ರದ ಒಪ್ಪಿಗೆ ಪಡೆಯಬೇಕಿದೆ. 311 ಕೋಟಿ ರೂ. ವೆಚ್ಚದಲ್ಲಿ ಜಿಲ್ಲೆಯ ಒಟ್ಟು 2.8 ಲಕ್ಷ ಮನೆಗಳ ಪೈಕಿ ಮೊದಲ ಹಂತದಲ್ಲಿ 75,000 ಮನೆಗಳಿಗೆ ಶುದ್ಧ ನೀರು ಒದಗಿಸುವ ಯೋಜನೆ ಪ್ರಗತಿಯಲ್ಲಿದೆ. ಎಲ್ಲ ಯೋಜನೆಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಿದರು.
ರಾಮನಗರ, ಚನ್ನಪಟ್ಟಣ, ಬಿಡದಿ, ಮಾಗಡಿ, ಕನಕಪುರ ಪಟ್ಟಣಗಳಿಗೆ ಕುಡಿಯುವ ನೀರು ಮತ್ತು ಒಳಚರಂಡಿ ವ್ಯವಸ್ಥೆ ಕಲ್ಪಿಸುವ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದ ಅವರು, ರಾಮನಗರ ಪಟ್ಟಣಕ್ಕೆ 456 ಕೋಟಿ ರೂ. ಹಾಗೂ ಬಿಡದಿ ಪಟ್ಟಣಕ್ಕೆ 171 ಕೋಟಿ ರೂ. ವೆಚ್ಚದಲ್ಲಿ ನೀರು ಪೂರೈಕೆ ಯೋಜನೆಯ ಕಾಮಗಾರಿಯನ್ನು 2 ವರ್ಷದಲ್ಲೇ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು. ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಜಯರಾಂ, ಬೆಂಗಳೂರು ಜಲಮಂಡಳಿ ಮುಖ್ಯ ಎಂಜಿನಿಯರ್ ರಮೇಶ್, ನಗರ ನೀರು ಸರಬರಾಜು ಮಂಡಳಿ ಮುಖ್ಯ ಎಂಜಿನಿಯರ್ ದಿನೇಶ್, ಸಣ್ಣ ನೀರಾವರಿ ಇಲಾಖೆಯ ಮುಖ್ಯ ಎಂಜಿನಿಯರ್ ಶಂಕರೇಗೌಡ, ಗ್ರಾಮೀಣ ನೀರು ಸರಬರಾಜು ಇಲಾಖೆಯ ಮುಖ್ಯ ಎಂಜಿನಿಯರ್ ಬಸಪ್ಪ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.