ಕೆಆರ್‌ಎಸ್ ಜಲಾಶಯ ಬಹುತೇಕ ಭರ್ತಿ
Team Udayavani, Aug 14, 2020, 10:10 AM IST
ಶ್ರೀರಂಗಪಟ್ಟಣ: ಕೊಡಗಿನಲ್ಲಿ ಮಳೆ ಪ್ರಮಾಣ ತಗ್ಗಿದ ಹಿನ್ನೆಲೆಯಲ್ಲಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಇಳಿಮುಖಗೊಂಡು ಪ್ರವಾಹದಂತೆ ಹರಿಸುತ್ತಿದ್ದ ನೀರನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿತ್ತು. ಆದರೆ, ಈಗ, ಜಲಾಶಯ ಬಹುತೇಕ ಭರ್ತಿಯಾದ ಹಿನ್ನೆಲೆ, ಮತ್ತೆ ಕಾವೇರಿ ನದಿಯಿಂದ ಯಾವ ಸಂದರ್ಭದಲ್ಲಾದರೂ ಹೆಚ್ಚುವರಿ ನೀರನ್ನು ಜಲಾಶಯದಿಂದ ಹೊರಬಿಡುವ ಸಾಧ್ಯತೆಯಿದೆ.
ಕಳೆದ ಒಂದು ವಾರದಿಂದ ಜಲಾಶಯಕ್ಕೆ ಒಂದು ಲಕ್ಷಕ್ಕೂ ಹೆಚ್ಚು ನೀರು ಒಳಹರಿವು ಬರುತ್ತಿತ್ತು. ಜಲಾಶಯದ ಪ್ರಮಾಣ ಎಷ್ಟು ಬೇಕೋ ಅದನ್ನು ಸಂಗ್ರಹಣೆ ಮಾಡಿ ಉಳಿದ ಹೆಚ್ಚುವರಿ ನೀರನ್ನು ಜಲಾಶಯದಿಂದ ಹೊರಬಿಡಲಾಗಿತ್ತು. ನದಿಯಲ್ಲಿ ಪ್ರವಾಹದಂತೆ ಹರಿದು ಜಮೀನು, ಪ್ರವಾಸಿ ತಾಣ, ದೇವಾಲಯಗಳು ಸ್ವಲ್ಪ ಮಟ್ಟಿಗೆ ಜಲಾವೃತವಾಗಿದ್ದವು.
ಕೊಡಗಿನಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದ್ದರಿಂದ ಜಲಾಶಯಕ್ಕೆ 16,180 ಕ್ಯೂಸೆಕ್ ನಷ್ಟು ಒಳಹರಿವು ಜಲಾಶಯಕ್ಕೆ ಬರುತ್ತಿದ್ದು, ಜಲಾಶಯದ ಮಟ್ಟ 124.00 ಅಡಿಗೆ ನಿಲ್ಲಿಸಲಾಗಿದೆ. ಜಲಾಶಯದ ಗರಿಷ್ಠ ಮಟ್ಟ 124.80 ಅಡಿ ಆಗಿದ್ದು ಶುಕ್ರವಾರದೊಳಗೆ ಸಂಪೂರ್ಣವಾಗಿ ಜಲಾಶಯ ಭರ್ತಿಯಾಗಲಿದೆ. ಉಳಿದ ನೀರನ್ನು ಹೊರ ಬಿಡಲಾಗುತ್ತದೆ ಎಂದು ನೀರಾವರಿ ಅಧಿಕಾರಿಗಳು ತಿಳಿಸಿದರು. ಪ್ರಸ್ತುತ ಜಲಾಶಯದ ನೀರಿನ ಮಟ್ಟ 124.00 ಅಡಿ ಆಗಿದ್ದು, ಒಳಹರಿವು 16,180 ಕ್ಯೂಸೆಕ್ ಇದೆ. ಜಲಾಶಯದಿಂದ ನಾಲೆಗಳಿಗೆ 3807 ಕ್ಯೂಸೆಕ್ ನೀರನ್ನು ನದಿ ಮೂಲಕ ಬಿಡಲಾಗಿದೆ. ಒಟ್ಟಾರೆ ಜಲಾಶಯದಲ್ಲಿ 48.090 ಟಿಎಂಸಿ ನೀರು ಸಂಗ್ರಹವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ
By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
MUST WATCH
ಹೊಸ ಸೇರ್ಪಡೆ
Udupi: ಟವರ್ ನಿರ್ಮಾಣ ಕಾಮಗಾರಿ ವಿಳಂಬವಾದರೆ ಕ್ರಿಮಿನಲ್ ದಾವೆ: ಸಂಸದ ಕೋಟ
Mangaluru: ಅಡಿಕೆ ಕ್ಯಾನ್ಸರ್ ಕಾರಕ ಎಂಬ ಡಬ್ಲ್ಯುಎಚ್‌ಒ ವಾದಕ್ಕೆ ಕ್ಯಾಂಪ್ಕೊ ಆಕ್ಷೇಪ
Winter Session: ಸಂಸತ್ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?
Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ
Election Results: ಝಾರ್ಖಂಡ್, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.