ಭೂ ಸುಧಾರಣಾ ನೀತಿ ಕೈಬಿಡಿ
Team Udayavani, Aug 14, 2020, 3:07 PM IST
ಸಂಡೂರು: ದಲಿತರಿಗೆ ಮಾರಕವಾದ ಕೇಂದ್ರದ ಭೂ ಸುಧಾರಣಾ ನೀತಿಯನ್ನು ತಕ್ಷಣ ಕೈಬಿಡಬೇಕು. ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ತಡೆಯಬೇಕು ಎಂದು ದಲಿತ ಹಕ್ಕುಗಳ ಸಮಿತಿ ಅಧ್ಯಕ್ಷ ಎ. ಸ್ವಾಮಿ ಒತ್ತಾಯಿಸಿದರು.
ಅವರು ಗುರುವಾರ ತಹಶೀಲ್ದಾರ್ ಕಚೇರಿ ಮುಂಭಾಗದಲ್ಲಿ ಕರ್ನಾಟಕ ದಲಿತ ಹಕ್ಕುಗಳ ಸಮಿತಿ ತಾಲೂಕು ಘಟಕದ ವತಿಯಿಂದ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಹಮ್ಮಿಕೊಂಡ ಪ್ರತಿಭಟನೆಯಲ್ಲಿ ಪಾಲ್ಗೊಂಡು ತಹಶೀಲ್ದಾರ್ ಎಚ್.ಜೆ. ರಶ್ಮಿಯವರಿಗೆ ಮನವಿ ಸಲ್ಲಿಸಿ ಮಾತನಾಡಿ, ಕೇಂದ್ರ ಸರ್ಕಾರ ಈ ಹಿಂದೆ ಇದ್ದ 1961 ಮತ್ತು 1974 ರಲ್ಲಿದ್ದು ಭೂ ಸುಧಾರಣೆ ಕಾಯಿದೆಯಿಂದ ಕೇವಲ 1.4 ಹೆಕ್ಟೇರ್ ಭೂಮಿಯೂ ಸಹ ದಲಿತ ಕುಟುಂಬಗಳಿಗೆ ದೊರೆಯುತ್ತಿಲ್ಲ, ಅದರೆ ಈಗ ಜಾರಿಗೆ ತಂದಿರುವ ನೀತಿಯಿಂದ ದಲಿತರಿಗೆ ಭೂಮಿಯೇ ಇಲ್ಲದಂಥ ಸ್ಥಿತಿ ಉಂಟಾಗುತ್ತದೆ. ಆದ್ದರಿಂದ ತಕ್ಷಣ ಇಂಥ ಭೂ ಸುಧಾರಣಾ ಕಾಯಿದೆ ಕೈಬಿಡಬೇಕು. ಪ್ರತಿ ಕುಟುಂಬಕ್ಕೆ 5 ಎಕರೆ ಜಮೀನಾದರೂ ನೀಡುವ ಮೂಲಕ ಅವರಿಗೆ ಭೂಮಿ ಹಕ್ಕನ್ನು ನೀಡಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ತಾಲೂಕು ಕರ್ನಾಟಕ ದಲಿತ ಹಕ್ಕುಗಳ ಸಮಿತಿಯ ಸದಸ್ಯರುಗಳಾದ ದುರುಗಮ್ಮ, ಮೈಲಮ್ಮ, ಕಲ್ಲಮ್ಮ, ಮಂಜು, ಅಧ್ಯಕ್ಷ ಎ. ಸ್ವಾಮಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್ ಶಾಸಕ
Kampli; ದರ ಕುಸಿತ: ಭತ್ತ ನೆಲಕ್ಕೆ ಚೆಲ್ಲಿ ರೈತರ ಪ್ರತಿಭಟನೆ
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ
MUST WATCH
ಹೊಸ ಸೇರ್ಪಡೆ
Tragedy: ಶಾಲಾ ಆವರಣದಲ್ಲೇ ಶಿಕ್ಷಕಿಯ ಬರ್ಬರ ಹತ್ಯೆ… ಮದುವೆ ನಿರಾಕರಿಸಿದ್ದೆ ಮುಳುವಾಯಿತು
Vikram Gowda ಎನ್‌ಕೌಂಟರ್; ತನಿಖೆ ಕರೆ ತಳ್ಳಿ ಹಾಕಿದ ಡಾ.ಜಿ. ಪರಮೇಶ್ವರ್
Doctor; ಖ್ಯಾತ ಹೃದ್ರೋಗ ತಜ್ಞ ಡಾ.ಎಸ್.ಜಿ.ಸರ್ವೋತ್ತಮ ಪ್ರಭು ವಿಧಿವಶ
Divorce: ಗಂಡನಿಂದ ವಿಚ್ಚೇದನ ಪಡೆದ ಎ.ಆರ್.ರೆಹಮಾನ್ ತಂಡದ ಸದಸ್ಯೆ ಮೋಹಿನಿ
Panaji: 55ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭಕ್ಕೆ ಕ್ಷಣಗಣನೆ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.