ಕೋವಿಡ್ ಕಳವಳ-ಆಗಸ್ಟ್ 14: 7908 ಹೊಸ ಪ್ರಕರಣ ; 6940 ಡಿಸ್ಚಾರ್ಜ್ ; 104 ಸಾವು

Team Udayavani, Aug 14, 2020, 9:25 PM IST

ಕೋವಿಡ್ ಕಳವಳ-ಆಗಸ್ಟ್ 14: 7908 ಹೊಸ ಪ್ರಕರಣ ; 6940 ಡಿಸ್ಚಾರ್ಜ್ ; 104 ಸಾವು

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೆಂಗಳೂರು: ಗುರುವಾರ ಸಾಯಂಕಾಲದಿಂದ ಶುಕ್ರವಾರ ಸಾಯಂಕಾಲದವರೆಗಿನ ಕೋವಿಡ್ 19 ಸೋಂಕು ಪ್ರಕರಣಗಳ ವರದಿಯ ಪ್ರಕಾರ, ಈ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 7908 ಕೋವಿಡ್ 19 ಸೋಂಕು ಪ್ರಕರಣಗಳು ವರದಿಯಾಗಿವೆ.

ಈ ನಿರ್ಧಿಷ್ಟ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 6940 ಸೋಂಕಿತರು ಗುಣಮುಖರಾಗಿದ್ದಾರೆ. ಮತ್ತು ಈ ಅವಧಿಯಲ್ಲಿ 104 ಸೋಂಕಿತರು ಮೃತಪಟ್ಟಿದ್ದಾರೆ.

ಇದೀಗ ರಾಜ್ಯದಲ್ಲಿ ಒಟ್ಟು ಕೋವಿಡ್ 19 ಸೋಂಕಿತರ ಸಂಖ್ಯೆ 2ಲಕ್ಷದ ಗಡಿ ದಾಟಿದ್ದು, ನಮ್ಮಲ್ಲಿ ಒಟ್ಟು 2,11,108 ಸೋಂಕು ಪ್ರಕರಣಗಳು ದಾಖಲಾಗಿವೆ. ಈ ನಡುವೆ ಸೋಂಕಿತರ ಚೇತರಿಕೆ ಸಂಖ್ಯೆಯೂ ಲಕ್ಷದ ಗಡಿಯನ್ನು ದಾಟಿರುವುದು ಆಶಾದಾಯಕ ವಿಷಯವಾಗಿದೆ. 1,28,182 ಸೊಂಕಿತರು ಇದೀಗ ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಇದೀಗ ಒಟ್ಟು 79,201 ಸಕ್ರಿಯ ಕೋವಿಡ್ 19 ಸೋಂಕು ಪ್ರಕರಣಗಳಿವೆ.

ಹಾಗೂ ರಾಜ್ಯದಲ್ಲಿ ಕೋವಿಡ್ 19 ಸೊಂಕು ಸಂಬಂಧಿ 3717 ಸಾವಿನ ಪ್ರಕರಣಗಳು ದಾಖಲಾಗಿವೆ ಹಾಗೂ 08 ಜನ ಕೋವಿಡ್ 19 ಸೋಂಕಿತರು ಅನ್ಯ ಕಾರಣದಿಂದ ಮೃತಪಟ್ಟಿದ್ದಾರೆ. 747 ಸೋಂಕಿತರು ತುರ್ತು ನಿಗಾ ಘಟಕದಲ್ಲಿ ದಾಖಲುಗೊಂಡು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

ಈ ಅವಧಿಯಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ 2452 ಕೋವಿಡ್ 19 ಸೊಂಕು ಪ್ರಕರಣಗಳು ವರದಿಯಾಗುವ ಮೂಲಕ ಸೋಂಕು ಪ್ರಕರಣಗಳಲ್ಲಿ ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ. ಆ ಬಳಿಕದ ಸ್ಥಾನಗಳಲ್ಲಿ ಬಳ್ಳಾರಿ (608), ಶಿವಮೊಗ್ಗ (413), ದಾವಣಗೆರೆ (351), ಬೆಳಗಾವಿ (334), ಉಡುಪಿ (322), ದಕ್ಷಿಣ ಕನ್ನಡ (307), ಮೈಸೂರು (291), ಕಲಬುರಗಿ (229), ರಾಯಚೂರು (220), ಧಾರವಾಡ (219), ಗದಗ (190), ತುಮಕೂರು (185), ಬಾಗಲಕೋಟೆ (171), ಮಂಡ್ಯ (163), ಕೊಪ್ಪಳ (162), ಹಾಸನ (158), ವಿಜಯಪುರ (144), ಹಾವೇರಿ (138), ಯಾದಗಿರಿ (116) ಮತ್ತು ಚಿಕ್ಕಮಗಳೂರು (104) ಜಿಲ್ಲೆಗಳಿವೆ.

ಇನ್ನುಳಿದಂತೆ, ಬೀದರ್ (97), ಉತ್ತರ ಕನ್ನಡ (87), ರಾಮನಗರ (87), ಕೋಲಾರ (81), ಚಿತ್ರದುರ್ಗ (77), ಚಾಮರಾಜನಗರ (61), ಕೊಡಗು (60), ಚಿಕ್ಕಬಳ್ಳಾಪುರ (42) ಮತ್ತು ಬೆಂಗಳೂರು ಗ್ರಾಮಾಂತರ (39), ಸೇರಿದಂತೆ ರಾಜ್ಯದ ಒಟ್ಟು 30 ಜಿಲ್ಲೆಗಳಲ್ಲಿ ಇಂದು ಮೂರಂಕಿ ಹಾಗೂ ಎರಡಂಕಿಯ ಕೋವಿಡ್ 19 ಸೋಂಕಿನ ಪ್ರಕರಣಗಳು ವರದಿಯಾಗಿವೆ.

ಇಂದು ರಾಜ್ಯದಲ್ಲಿ ಒಟ್ಟು 29,422 Rapid ಆ್ಯಂಟಿಜೆನ್ ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದೆ ಹಾಗೂ RT PCR ಮತ್ತು ಇನ್ನಿತರೇ ವಿಧಾನಗಳ ಮೂಲಕ 27,216 ಸೋಂಕು ಪತ್ತೆ ಪರೀಕ್ಷೆಗಳನ್ನು ಈ ಅವಧಿಯಲ್ಲಿ ನಡೆಸಲಾಗಿದೆ. ಈ ಮೂಲಕ ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ ಒಟ್ಟು 56,638 ಸೋಂಕು ಪತ್ತೆ ಪರಿಕ್ಷೆಗಳನ್ನು ನಡೆಸಲಾಗಿದೆ.

ರಾಜ್ಯದಲ್ಲಿ ಇದುವರೆಗೆ ಒಟ್ಟು 4,64,286 Rapid ಆ್ಯಂಟಿಜೆನ್ ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದೆ. ಇದನ್ನು ಹೊರತಾಗಿಸಿ ರಾಜ್ಯಾದ್ಯಂತ 14,74,668 ಜನರಿಗೆ RT PCR ಮತ್ತು ಇನ್ನಿತರೇ ವಿಧಾನಗಳ ಮೂಲಕ ಕೋವಿಡ್ 19 ಸೋಂಕು ಪತ್ತೆ ಪರೀಕ್ಷೆಯನ್ನು ನಡೆಸಲಾಗಿದೆ. ಈ ಎಲ್ಲಾ ವಿಧಾನಗಳ ಮೂಲಕ ರಾಜ್ಯದಲ್ಲಿ ಇಂದಿನವರೆಗೆ ಒಟ್ಟು 19,38,954 ಜನರಿಗೆ ಕೋವಿಡ್ 19 ಸೋಂಕು ಪತ್ತೆ ಪರೀಕ್ಷೆಯನ್ನು ನಡೆಸಲಾಗಿದೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ ಒಟ್ಟು ಕೋವಿಡ್ 19 ಸೋಂಕಿತ ಪ್ರಕರಣಗಳ ಸಂಖ್ಯೆ 84,185ಕ್ಕೆ ಏರಿಕೆಯಾಗಿದ್ದು, 49,392 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ ಹಾಗೂ ಸಕ್ರಿಯ ಪ್ರಕರಣಗಳ ಸಂಖ್ಯೆ 33,432ಕ್ಕೆ ಏರಿಕೆಯಾಗಿದೆ. ಇಲ್ಲಿ ಕೋವಿಡ್ ಸಂಬಂಧಿತ 1360 ಸಾವು ಸಂಭವಿಸಿದೆ.

ಬಳ್ಳಾರಿ ಜಿಲ್ಲೆಯಲ್ಲಿ ಒಟ್ಟು 13,048 ಕೋವಿಡ್ 19 ಸೋಂಕಿನ ಪ್ರಕರಣಗಳು ದಾಖಲಾಗಿದ್ದು 6948 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 5952 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 148 ಸಾವು ಸಂಭವಿಸಿದೆ.

ಮೈಸೂರು ಜಿಲ್ಲೆಯಲ್ಲಿ 9280 ಕೋವಿಡ್ ಸೋಂಕಿನ ಪ್ರಕರಣಗಳು ದಾಖಲಾಗಿದ್ದು 5830 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 3166 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 284 ಸಾವು ಸಂಭವಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಾಸಿಟಿವ್ ಪ್ರಕರಣಗಳ ಸಂಖ್ಯೆ 8373ಕ್ಕೆ ಏರಿಕೆಯಾಗಿದ್ದು ಇವರಲ್ಲಿ 6106 ಸೋಂಕಿತರು ಗುಣಮುಖರಾಗಿದ್ದಾರೆ. 2011 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ ಹಾಗೂ ಇಲ್ಲಿ ಕೋವಿಡ್ ಸಂಬಂಧಿತ 254 ಸಾವು ಸಂಭವಿಸಿದೆ. ಬೆಂಗಳೂರು ನಗರ (1360) ಹಾಗೂ ಮೈಸೂರು (284) ಜಿಲ್ಲೆಗಳ ಬಳಿಕ ಕೋವಿಡ್ 19 ಸಂಬಂಧಿ ಅತೀ ಹೆಚ್ಚಿನ ಸಾವು ಸಂಭವಿಸಿರುವ ಜಿಲ್ಲೆ ಇದಾಗಿದೆ.

ಕಲಬುರಗಿಯಲ್ಲಿ ಒಟ್ಟು 8351 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ 6150 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. 2042 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ ಹಾಗೂ ಇಲ್ಲಿ 159 ಜನರು ಈ ಸೋಂಕಿಗೆ ಮೃತಪಟ್ಟಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ 7496 ಕೋವಿಡ್ 19 ಸೋಂಕಿನ ಪ್ರಕರಣಗಳು ದಾಖಲಾಗಿದ್ದು 4752 ಜನರು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ ಹಾಗೂ ಜಿಲ್ಲೆಯಲ್ಲಿ 2667 ಸಕ್ರಿಯ ಪ್ರಕರಣಗಳಿವೆ. ಇಲ್ಲಿ ಕೋವಿಡ್ 19 ಸೋಂಕು ಸಂಬಂಧಿ 77 ಸಾವಿನ ಪ್ರಕರಣಗಳು ದಾಖಲಾಗಿದೆ.

ಧಾರವಾಡ ಜಿಲ್ಲೆಯಲ್ಲಿ 7147 ಕೋವಿಡ್ ಸೋಂಕಿನ ಪ್ರಕರಣಗಳು ದಾಖಲಾಗಿದ್ದು 4524 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 2401 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 222 ಸಾವು ಸಂಭವಿಸಿದೆ.

ಬೆಳಗಾವಿ ಜಿಲ್ಲೆಯಲ್ಲಿ 6958 ಕೋವಿಡ್ ಸೋಂಕಿನ ಪ್ರಕರಣಗಳು ದಾಖಲಾಗಿದ್ದು 3063 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 3782 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 113 ಸಾವು ಸಂಭವಿಸಿದೆ.

ಟಾಪ್ ನ್ಯೂಸ್

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆDelhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

1-hebri

ಅನಾರೋಗ್ಯ; ಭಾಗವತ ಗಣೇಶ ಹೆಬ್ರಿ ಅವರ ಪುತ್ರ ನಿಧನ

Madhya Pradesh: ಕೈಗಾರಿಕ ತ್ಯಾಜ್ಯ ವಿಲೇವಾರಿ ಖಂಡಿಸಿ ಪ್ರತಿಭಟನೆ

Madhya Pradesh: ಕೈಗಾರಿಕ ತ್ಯಾಜ್ಯ ವಿಲೇವಾರಿ ಖಂಡಿಸಿ ಪ್ರತಿಭಟನೆ

Sheikh Hasina ಹಸ್ತಾಂತರಕ್ಕೆ ಬಾಂಗ್ಲಾದೇಶ ಮನವಿ ಸತ್ಯ: ಕೇಂದ್ರ ಸರಕಾರ‌

Sheikh Hasina ಹಸ್ತಾಂತರಕ್ಕೆ ಬಾಂಗ್ಲಾದೇಶ ಮನವಿ ಸತ್ಯ: ಕೇಂದ್ರ ಸರಕಾರ‌

ಚಾತುರ್ವರ್ಣ ವ್ಯವಸ್ಥೆಗೂ ಸನಾತನ ಧರ್ಮಕ್ಕೂ ನಂಟು ಇಲ್ಲ: ಶಿವಗಿರಿ ಸ್ವಾಮಿ

ಚಾತುರ್ವರ್ಣ ವ್ಯವಸ್ಥೆಗೂ ಸನಾತನ ಧರ್ಮಕ್ಕೂ ನಂಟು ಇಲ್ಲ: ಶಿವಗಿರಿ ಸ್ವಾಮಿ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆDelhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

1-hebri

ಅನಾರೋಗ್ಯ; ಭಾಗವತ ಗಣೇಶ ಹೆಬ್ರಿ ಅವರ ಪುತ್ರ ನಿಧನ

Madhya Pradesh: ಕೈಗಾರಿಕ ತ್ಯಾಜ್ಯ ವಿಲೇವಾರಿ ಖಂಡಿಸಿ ಪ್ರತಿಭಟನೆ

Madhya Pradesh: ಕೈಗಾರಿಕ ತ್ಯಾಜ್ಯ ವಿಲೇವಾರಿ ಖಂಡಿಸಿ ಪ್ರತಿಭಟನೆ

Sheikh Hasina ಹಸ್ತಾಂತರಕ್ಕೆ ಬಾಂಗ್ಲಾದೇಶ ಮನವಿ ಸತ್ಯ: ಕೇಂದ್ರ ಸರಕಾರ‌

Sheikh Hasina ಹಸ್ತಾಂತರಕ್ಕೆ ಬಾಂಗ್ಲಾದೇಶ ಮನವಿ ಸತ್ಯ: ಕೇಂದ್ರ ಸರಕಾರ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.