ಬದಲಾಗುತ್ತಿರುವ ಶಿಕ್ಷಣ ವ್ಯವಸ್ಥೆ; ಯುವ ಸಮುದಾಯ


Team Udayavani, Aug 15, 2020, 11:00 AM IST

Time for change

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಭಾರತದಲ್ಲಿ ಶಿಕ್ಷಣ ವ್ಯವಸ್ಥೆಯ ಕಾಲ ಕಾಲಕ್ಕೆ ಬದಲಾವಣೆಯನ್ನು ಅನುಸರಿಸಿಕೊಂಡು ಬಂದಿದೆ.

ಹಿಂದಿನ ಕಾಲದಲ್ಲಿ ಗುರುಕುಲ ಶಿಕ್ಷಣ ಪದ್ಧತಿಯನ್ನು ನಾವು ಕಾಣಬಹುದಾಗಿತ್ತು.

ಗುರುಕುಲ ಶಿಕ್ಷಣದಲ್ಲಿ ಶಾಸ್ತ್ರಗಳ ಅಭ್ಯಾಸದ ಜತಗೆ ಜೀವನಕ್ರಮದ ಬಗ್ಗೆ ಶಿಕ್ಷಣ ನೀಡಲಾಗುತ್ತಿತ್ತು.

ಇದೊಂದು ಅನೌಪಚಾರಿಕ ಶಿಕ್ಷಣ ಪದ್ಧತಿಯಾಗಿತ್ತು. ಇಲ್ಲಿ ಯಾವುದೇ ಸೀಮಿತ ಅಂದರೆ ಅಕಾಡೆಮಿಕ್‌ ಶಿಕ್ಷಣ ಇರಲಿಲ್ಲ.

ಬಳಿಕ ಕಾಲ ಬದಲಾದಂತೆ ಜಗತ್ತು ಆಧುನಿಕರಣವಾದಾಗ ಜೌಪಚಾರಿಕ ಶಿಕ್ಷಣ ಪದ್ಧತಿಯನ್ನು ಅಳವಡಿಸಿಕೊಳ್ಳಬೇಕಾಯಿತು.

ಇದರನ್ವಯ ತರಗತಿ, ತರಗತಿಗನುಗಣವಾಗಿ ಪಠ್ಯಗಳನ್ನು ಕೂಡ ಅಳವಡಿಸಲಾಯಿತು. ಪಠ್ಯದಲ್ಲಿರುವ ಪಾಠಗಳನ್ನು ಅಭ್ಯಸಿಸಿ ಅದಕ್ಕೆ ಪರೀಕ್ಷೆಗಳನ್ನು ಏರ್ಪಡಿಸಲಾಗುತ್ತಿತ್ತು. ಇದು ಲಾರ್ಡ್‌ ಮೆಕಾಲೆ ಶಿಕ್ಷಣದ ಒಂದು ಭಾಗವಾಗಿದೆ ಎಂದು ಹೇಳಬಹುದು. ತರುವಾಯ ಸದ್ಯ ಭಾರತದಲ್ಲಿ ನೂತನ ಶಿಕ್ಷಣ ಪದ್ಧತಿ-2020 ಎಂಬ ಕ್ರಮವನ್ನು ಘೋಷಿಸಲಾಗಿದೆ. ಇದು ಭಾರತದಲ್ಲಿ ಶಿಕ್ಷಣ ಕ್ರಾಂತಿಗೆ ಪೂರಕವಾಗಲಿದೆ ಎಂದು ತಜ್ಞರು ತಿಳಿಸಿದ್ದಾರೆ. ಹೀಗೆ ದೇಶದ ಶಿಕ್ಷಣವೂ ಕಾಲ ಕಾಲಕ್ಕೆ ಬದಲಾವಣೆ ಕಂಡಿದೆ.

ಶಿಕ್ಷಣವೂ ವ್ಯಕ್ತಿಯೋರ್ವನಿಗೆ ಸಿಗಬೇಕಾದ ಮೂಲಹಕ್ಕುಗಳಲ್ಲಿ ಒಂದು. ಇದರಿಂದ ಆತನ ಜೀವನಕ್ಕೆ ಉದ್ಯೋಗ ನೀಡುವಷ್ಟೇ ಅಲ್ಲ, ಜೀವನ ಬೆಳಗಲೂ ಪ್ರೇರಣೆಯಾಗಬೇಕು. ಜ್ಞಾನ ವೃದ್ಧಿಗೆ ಶಿಕ್ಷಣ ಅತ್ಯಗತ್ಯ. ಈ ಹಿಂದೆ ಗುರುಕುಲ ಶಿಕ್ಷಣ ಪದ್ಧತಿಯೂ ಬಾಯಿಪಾಠದ ಶಿಕ್ಷಣಕ್ಕಿಂತ ವ್ಯಕ್ತಿತ್ವ, ಮೌಲ್ಯ ಶಿಕ್ಷಣಕ್ಕೆ ಒತ್ತು ನೀಡುತ್ತಿತ್ತು. ಇಲ್ಲಿ ಶಿಕ್ಷಣ ಪಡೆದ ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ರೂಢಿಸಿಕೊಂಡಿರುತ್ತಿದ್ದ. ಹಿರಿಯ-ಕಿರಿಯರಿಗೆ ಗೌರವಾಧರಗಳನ್ನು ನೀಡುವುದನ್ನು ಕಲಿತಿರುತ್ತಿದ್ದ. ಸಮಾಜದಲ್ಲಿ ಸ್ವಾವಲಂಬಿಯಾಗಿ ಜೀವನ ನಡೆಸುತ್ತಿದ್ದ ಎಂದು ಓದಿ ಕೇಳಿದ್ದೇವೆ. ಆಗಂಥ ಈಗಿನ ಆಧುನಿಕ ಶಿಕ್ಷಣ ಮೌಲ್ಯ ಶಿಕ್ಷಣ ನೀಡುವುದನ್ನು ಕಲಿಸಲಿಲ್ಲವೇ ಎಂದರೆ ತಪ್ಪಾಗುತ್ತದೆ. ಆಧುನಿಕ ಶಿಕ್ಷಣ ಪದ್ಧತಿ ಮೌಲ್ಯ ಶಿಕ್ಷಣಕ್ಕೂ ಒತ್ತು ನೀಡಿದೆ ಆದರೆ ಕೆಲವೊಂದು ಬದಲಾವಣೆ ಅತ್ಯಾವಶ್ಯಕ ಅಗತ್ಯವಿದೆ ಎಂಬ ಬಲವಾದ ವಾದಗಳು ಆಗಾಗ ಕೇಳಿಬರುತ್ತಿದ್ದವು. ಇದಕ್ಕೆ ಕೇವಲ ಶಿಕ್ಷಣ ಪದ್ಧತಿ ಹೊಣೆಗೇಡಿಯಾಗಬೇಕಿಲ್ಲ. ಬದಲಾಗಿ ಇಡೀ ವ್ಯವಸ್ಥೆ ಹೊಣೆಯಾಗಬೇಕಿದೆ.

ಈ ನಿಟ್ಟಿನಲ್ಲಿ ಈಗಿನ ಜಾರಿಗೊಳಿಸಿರುವ ನೂತನ ಶಿಕ್ಷಣ ಪದ್ದತಿ ಅನುಕೂಲಿಯಾಗಲಿದೆ ಎಂದು ಹೇಳಲಾಗುತ್ತಿದೆ. ವಿದ್ಯಾರ್ಥಿಗಳ ಜ್ಞಾನಕ್ಕೆ ಪೂರಕವಾದ ಶಿಕ್ಷಣ ಬೇಕಿದೆ. ಅವರ ಆಸಕ್ತಿ, ಕೌಶಲ ವೃದ್ಧಿಗೆ ಪೂರಕವಾದ ಶಿಕ್ಷಣ ಮಾಧ್ಯಮ ಬೇಕಿದೆ. ಕೇವಲ ಉದ್ಯೋಗ ಸೃಷ್ಟಿಗೆ ಮಾತ್ರ ಶಿಕ್ಷಣ ಸೀಮಿತವಾಗದೇ ಇಡೀ ಮನುಷ್ಯನ ವ್ಯಕ್ತಿತ್ವ, ಸರ್ವತೋಮುಖ ಅಭಿವೃದ್ಧಿಯಾಗುವ ಶಿಕ್ಷಣ ಅಗತ್ಯವಿದೆ. ಇನ್ನು 2030ರ ವೇಳೆಗೆ ಭಾರತದಲ್ಲಿ ಶಿಕ್ಷಣ ಪದ್ಧತಿಯೂ ಮುಂದುವರಿದಿರುತ್ತದೆ. ಈಗಾಗಲೇ ವೃತ್ತಿ ಶಿಕ್ಷಣ, ಕೌಶಲ ವೃದ್ಧಿ, ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ಶಿಕ್ಷಣಕ್ಕೆ ಹೆಚ್ಚು ಒತ್ತು ಸಿಗುತ್ತಿದೆ. ತಂತ್ರಜ್ಞಾನವೂ ಅಭಿವೃದ್ಧಿಯಾಗಿದ್ದು ಶಿಕ್ಷಣದಲ್ಲಿ ಕೂಡ ಬಳಕೆಯಾಗುತ್ತಿದೆ. ವಿಧವಿಧವಾದ ಕೋರ್ಸ್‌ಗಳು ದೇಶಕ್ಕೆ ಪರಿಚಯವಾಗುತ್ತಿವೆ. ಇದು ಮುಂದುವರಿದ ಶಿಕ್ಷಣ ಭಾಗವಾಗಿದೆ. ಹೀಗಾಗಿ ನಾವು ಕೂಡ ಶಿಕ್ಷಣ ಪದ್ಧತಿಗೆ ಒಗ್ಗಿಕೊಳ್ಳಬೇಕಿದೆ.

 ನವ್ಯಶ್ರೀೆ, ರಾಮಕುಂಜೇಶ್ವರ ಕಾಲೇಜು ರಾಮಕುಂಜ

 

ಟಾಪ್ ನ್ಯೂಸ್

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-uv-fusion

UV Fusion: ಜೀವಂತಿಕೆ

19-uv-fusion

Garbage Disposal: ಕಸದ ಸೂಕ್ತ ವಿಲೇವಾರಿ ನಮ್ಮದೇ ಜವಾಬ್ದಾರಿ

18-uv-fusion

UV Fusion: ನಿಸ್ವಾರ್ಥ ಜೀವ

16-pongal

Pongal: ಹೀಗೊಂದು ಪೊಂಗಲ್‌ ಪ್ರಯೋಗ

15-uv-fusion

Pendulum Wall Clock: ನಮ್ಮ ಮನೆಯಲ್ಲಿ ಒಂದು ಅದ್ಭುತ ಇದೆ ಗೊತ್ತಾ?

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.