ಹೆಚ್ಚುವರಿ ಶುಲ್ಕ ಪಡೆದರೆ ಕಠಿನ ಕ್ರಮ
Team Udayavani, Aug 15, 2020, 1:55 AM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಅನುದಾನಿತ ಪದವಿ ಕಾಲೇಜುಗಳು ವಿದ್ಯಾರ್ಥಿಗಳು ಗಳಿಸಿರುವ ಅಂಕದ ಆಧಾರದಲ್ಲಿ ಮೆರಿಟ್ ಪ್ರಕಾರ ರೊಸ್ಟರ್ ಪದ್ಧತಿಯಂತೆ ಪ್ರವೇಶ ಕಲ್ಪಿಸಬೇಕು ಮತ್ತು ಹೆಚ್ಚುವರಿ ಶುಲ್ಕ ಪಡೆಯದಂತೆ ಕಾಲೇಜು ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಕಾಲೇಜುಗಳ ಪ್ರವೇಶ, ಶುಲ್ಕ ಹಾಗೂ ಸೀಟು ಹಂಚಿಕೆ ಸಂಬಂಧಿಸಿದಂತೆ ಈಗಾಗಲೇ ಸ್ಪಷ್ಟ ನಿರ್ದೇಶನ ನೀಡಲಾಗಿದೆ. ಆದರೂ ಕೆಲವೊಂದು ಖಾಸಗಿ ಅನುದಾನಿತ ಕಾಲೇಜುಗಳು ಹಿಂದುಳಿದ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳನ್ನು ಮೆರಿಟ್ ಅಂಕದ ಅರ್ಹತೆಯಂತೆ ರೋಸ್ಟರ್ ಪದ್ಧತಿಯಲ್ಲಿ ಪ್ರವೇಶ ಮಾಡಿಕೊಳ್ಳುತ್ತಿಲ್ಲ ಎಂಬ ಆರೋಪ ಕೇಳಿಬರುತ್ತಿದೆ.
ಈ ಹಿನ್ನೆಲೆಯಲ್ಲಿ 2020-21ನೇ ಸಾಲಿಗೆ ಇಲಾಖಾ ವ್ಯಾಪ್ತಿಯ ಎಲ್ಲ ಖಾಸಗಿ ಅನುದಾನಿತ ಪದವಿ ಕಾಲೇಜುಗಳಲ್ಲಿ ಪ್ರವೇಶ ಬಯಸುವ ವಿದ್ಯಾರ್ಥಿನಿಯರಿಗೆ ಬೋಧನ ಮತ್ತು ಪ್ರಯೋಗಾಲಯ ಶುಲ್ಕ ವಿನಾಯತಿ ನೀಡಬೇಕು. ಈ ಹಣವನ್ನು ಸರಕಾರವೇ ಮರುಪಾವತಿ ಮಾಡಲಿದೆ. ವಿದ್ಯಾರ್ಥಿಗಳಿಂದ ಬೋಧನ ಮತ್ತು ಪ್ರಯೋಗಾಲಯ ಶುಲ್ಕ ಪಾವತಿಸಿಕೊಂಡು ಜಮೆ ಮಾಡುವ ಬಗ್ಗೆ ಸರಕಾರ ಈಗಾಗಲೇ ತಿಳಿಸಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ದಾಖಲಾತಿ ಸಂಬಂಧ ರೋಸ್ಟರ್ ನಿಯಮ ಪಾಲಿಸಬೇಕು. ಹಾಗೂ ಸರಕಾರ ಸೂಚಿಸಿರುವ ಶುಲ್ಕವನ್ನು ಮಾತ್ರ ಪಡೆಯಬೇಕು. ಶುಲ್ಕದ ವಿವರವನ್ನು ಕಾಲೇಜಿನ ಸೂಚನ ಫಲಕದಲ್ಲಿ ಅಳವಡಿಸಬೇಕು. ಹೆಚ್ಚುವರಿ ಶುಲ್ಕ ಪಡೆದಿರುವ ದೂರು ಬಂದಲ್ಲಿ ಪ್ರಾಂಶುಪಾಲರು ಅಥವಾ ಆಡಳಿತ ಮಂಡಳಿ ವಿರುದ್ಧ ಕಠಿನ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಕಾಲೇಜು ಶಿಕ್ಷಣ ಇಲಾಖೆ ಎಚ್ಚರಿಕೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿ ಮಗುಚಿ ಬಿದ್ದ ಕ್ರೇನ್; ತಪ್ಪಿದ ಅನಾಹುತ
Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ
Moodbidri: ಆಳ್ವಾಸ್ನಲ್ಲಿ ದೀಪಾವಳಿ ಸಂಭ್ರಮ; ಸಂಪ್ರದಾಯ , ಸಂಸ್ಕೃತಿಯ ಅನಾವರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.