ತಾಲೂಕಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ
Team Udayavani, Aug 15, 2020, 1:39 PM IST
ಚನ್ನರಾಯಪಟ್ಟಣ: ತಾಲೂಕಿನಲ್ಲಿ ಕಳೆದೊಂದು ತಿಂಗಳಲ್ಲಿ ಮೂರ್‍ನಾಲ್ಕು ಕೊಲೆ ಗಳು ನಡೆದಿರುವುದು ಗಮನಿಸಿದರೆ ತಾಲೂಕು ಆಡಳಿತ ಹಾಗೂ ಪೊಲೀಸ್ ಇಲಾಖೆ ವೈಫಲ್ಯ ಎದ್ದು ಕಾಣುತ್ತಿದ್ದು ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ ಎಂದು ತಾಪಂ ಅಧ್ಯಕ್ಷ ಶ್ಯಾಮಲಾ ಆರೋಪಿಸಿದರು.
ಪಟ್ಟಣದ ತಾಪಂ ಸಭಾಂಗಣದಲ್ಲಿ ನಡೆದ ತುರ್ತು ಸಭೆಯಲ್ಲಿ ಮಾತನಾಡಿ, ಡಾಬಾಗಳ ಬಳಿ ಎರಡು ಕೊಲೆ ನಡೆದಿರುವುದಲ್ಲದೆ ಓರ್ವ ನಿಷ್ಠಾವಂತ ಪೊಲೀಸ್ ಅಧಿಕಾರಿ ನೇಣಿಗೆ ಶರಣಾಗಿರುವುದರ ಹಿಂದಿನ ಮರ್ಮ ಸಾರ್ವಜನಿ ಕರಿಗೆ ತಿಳಿದಿದೆ, ಈ ಬಗ್ಗೆ ತನಿಖೆ ನಡೆಸಿ ಸಾರ್ವಜನಿಕರಿಗೆ ತಳಿಸಲು ಸರ್ಕಾರ ಹಾಗೂ ಜಿಲ್ಲಾಡಳಿತ ಮುಂದಾಗಬೇಕು ಎಂದು ಆಗ್ರಹಿಸಿದರು.
ಕೆಲ ಪುಡಿ ರೌಡಿಗಳು ಬಾರ್, ಕ್ಲಬ್, ಚಿನ್ನಬೆಳ್ಳಿ ಅಂಗಡಿ ಹಾಗೂ ಬಟ್ಟೆ ಅಂಗಡಿ ಸೇರಿದಂತೆ ವಿವಿಧ ಉದ್ಯಮಿ, ವರ್ತಕ ರಿಂದ ಮಾಮೂಲಿ ವಸೂಲಿ ಮಾಡುವ ಬಗ್ಗೆ ದೂರುಗಳು ಕೇಳಿ ಬರುತ್ತಿವೆ, ಈ ಬಗ್ಗೆ ನಿಗಾ ವಹಿಸಬೇಕಾಗಿರುವ ಪೊಲೀಸ್ ಇಲಾಖೆ ಕಣ್ಣು ಮುಚ್ಚಿ ಕುಳಿತಿರಲು ಕಾರಣವೇನು? ಇನ್ನು ತಾಲೂಕು ಆಡಳಿತ ಯಾವ ಮಟ್ಟಿಗೆ ಜನರಿಗೆ ಸೇವೆ ನೀಡುತ್ತಿದೆ ಎನ್ನುವುದು ತಿಳಿಯುತ್ತಿದೆ ಎಂದರು.
ಉಪಾಧ್ಯಕ್ಷ ರಾಮಕೃಷ್ಣೇಗೌಡ ಮಾತನಾಡಿ, ಕಳೆದ ಏಳೆಂಟು ತಿಂಗಳಲ್ಲಿ ನಡೆದಿರುವ ಹತ್ತಾರು ಹತ್ಯಾ ಪ್ರಕರಣಗಳು ಸೇರಿದಂತೆ ದಕ್ಷ ಪೊಲೀಸ್ ಅಧಿಕಾರಿ ಕಿರಣ್ ಕುಮಾರ್ ಆತ್ಮಹತ್ಯೆ ಗಮನಿಸಿದರೆ ತಾಲೂಕು ರಕ್ತಸಿಕ್ತವಾಗಿ ಪರಿಣಮಿ ಸುತ್ತಿರುವ ಲಕ್ಷಣ ಕಂಡುಬರುತ್ತಿದೆ, ಮಹಿಳೆಯರು ಹಾಗೂ ಯುವತಿಯರು ರಸ್ತೆಯಲ್ಲಿ ಒಂಟಿಯಾಗಿ ಸಂಚಾರ ಮಾಡುವುದು ಕಷ್ಟವಾಗುತ್ತಿದೆ, ಒಂದು ರೀತಿಯಲ್ಲಿ ಉತ್ತರ ಭಾರತದ ವಾತಾ ವರಣ ತಾಲೂಕಿನಲ್ಲಿ ಸೃಷ್ಟಿಯಾಗುತ್ತಿದೆ ಎಂದರು. ತಾಪಂ ಸದಸ್ಯರಾದ ಗಿರೀಶ್, ಇಂದಿರಾ, ರಂಜಿತಾ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
ದ್ವೇಷದ ರಾಜಕಾರಣ ಸುಡುವ ಕಾಲ ಸನ್ನಿಹಿತ: ಸೂರಜ್ ರೇವಣ್ಣ
ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ದಿಢೀರ್ ಕಾಣಿಸಿಕೊಂಡ ಬೆಂಕಿ; ತಪ್ಪಿದ ಭಾರಿ ಅನಾಹುತ
Hasana: ಕರೆಯನ್ನು ಸ್ವೀಕರಿಸದ ಪ್ರಿಯಕರಗೆ ಚಾಕು ಇರಿದು ಪ್ರಿಯತಮೆ ಪರಾರಿ
Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.