14 ತಿಂಗಳ ಬಳಿಕ ಅಮರಾವತಿಗೆ “ಶುಕ್ರದೆಸೆ’

ಅರ್ಧಕ್ಕೆ ನಿಂತ ಕಟ್ಟಡ ನಿರ್ಮಾಣ ಪೂರ್ಣಗೊಳಿಸಲು ಸೂಚನೆ; ಯಥಾಸ್ಥಿತಿಗೆ ಹೈಕೋರ್ಟ್‌ ಆದೇಶ

Team Udayavani, Aug 16, 2020, 6:15 AM IST

14 ತಿಂಗಳ ಬಳಿಕ ಅಮರಾವತಿಗೆ “ಶುಕ್ರದೆಸೆ’

ಅಮರಾವತಿ: ಬರೋಬ್ಬರಿ 14 ತಿಂಗಳ ಬಳಿಕ ಆಂಧ್ರ ಪ್ರದೇಶ ರಾಜಧಾನಿ ಅಮರಾವತಿಗೆ ಹಿಡಿದಿದ್ದ “ಗ್ರಹಣ’ ತೊಲಗಿ “ಶುಕ್ರದೆಸೆ’ ಶುರು ವಾಗಿದೆ. ಅಮರಾವತಿಯಲ್ಲಿ ಕಳೆದ 14 ತಿಂಗಳಿ ನಿಂದ ನನೆಗುದಿಗೆ ಬಿದ್ದಿರುವ ಕಟ್ಟಡ ನಿರ್ಮಾಣ ಕಾರ್ಯಗಳನ್ನು ಪೂರ್ಣಗೊಳಿಸಲು ಮುಖ್ಯಮಂತ್ರಿ ಜಗನ್‌ ಮೋಹನ್‌ ರೆಡ್ಡಿ ಸರಕಾರ ಇದೀಗ ನಿರ್ಧ ರಿಸಿದೆ. ಅಪೂರ್ಣಗೊಂಡಿರುವ ಎಲ್ಲ ಕಟ್ಟಡಗಳು, ರಸ್ತೆಗಳು, ಮೂಲಸೌಲಭ್ಯಗಳನ್ನು ಪೂರ್ಣಗೊಳಿ ಸಬೇಕು. ಈ ಸಂಬಂಧ ಯೋಜನೆ­ಯನ್ನು ರೂಪಿಸಿ ಎಂದು ಅಮರಾವತಿ ನಗರ ಅಭಿವೃದ್ಧಿ ಪ್ರಾಧಿ ಕಾರಕ್ಕೆ ಜಗನ್‌ ಸೂಚಿಸಿದ್ದಾರೆ.

ಈ ಕಟ್ಟಡ ಕಾಮಗಾರಿಗಳನ್ನು ಪೂರ್ಣ ಗೊಳಿ ಸಲು ಕನಿಷ್ಠ 15 ಸಾವಿರ ಕೋಟಿ ರೂ. ಅಗತ್ಯವಿದೆ ಎಂದು ಅಧಿಕಾರಿಗಳು ಜಗನ್‌ಗೆ ಮನವರಿಕೆ ಮಾಡಿಕೊಟ್ಟಿ­ದ್ದಾರೆ. ಹಣಕಾಸು ಇಲಾಖೆ ಜೊತೆ ಚರ್ಚಿಸಿ ಹೆಚ್ಚುವರಿ ಅನುದಾನವನ್ನು ಕ್ರೋಢೀ ಕರಿಸುವ ಮಾರ್ಗಗಳನ್ನು ಕಂಡುಕೊಂಡು ಕಾಮಗಾರಿಗಳನ್ನು ಪೂರ್ಣಗೊಳಿಸಿ ಎಂದು ಜಗನ್‌ ಹೇಳಿದ್ದಾರೆ ಎಂದು ತಿಳಿದು ಬಂದಿದೆ. ಚಂದ್ರಬಾಬು ನಾಯ್ಡು ಮುಖ್ಯಮಂತ್ರಿ­ಯಾಗಿದ್ದಾಗ ಅಮರಾವತಿಯನ್ನು ಆಂಧ್ರದ ರಾಜಧಾನಿ­­ಯನ್ನಾಗಿ ಘೋಷಿಸಿ, ಬೃಹತ್‌ ಪ್ರಮಾಣದಲ್ಲಿ ಕಟ್ಟಡ ನಿರ್ಮಿಸಲು ಯೋಜನೆ ರೂಪಿಸಿದ್ದರು. ಇದಕ್ಕಾಗಿ 30 ಸಾವಿರ ಎಕರೆ ಭೂಮಿಯನ್ನೂ ಸ್ವಾಧೀನಪಡಿಸಿಕೊಂಡಿದ್ದರು.

ಸಹಸ್ರಾರು ಕೋಟಿ ರೂ. ವೆಚ್ಚದಲ್ಲಿ ಹಲವು ಕಟ್ಟಡಗಳನ್ನು ನಿರ್ಮಿಸಲಾಗುತ್ತಿತ್ತು. 2019ರ ಮೇ ತಿಂಗಳಿನಲ್ಲಿ ಜಗನ್‌ ಮೋಹನ್‌ ರೆಡ್ಡಿ ಮುಖ್ಯಮಂತ್ರಿಯಾಗುತ್ತಿ ದ್ದಂತೆಯೇ ಅಮರಾ­ವತಿ­­ಯಲ್ಲಿ ನಡೆಯುತ್ತಿದ್ದ ಕೆಲಸ ಸ್ಥಗಿತಗೊಳಿಸಿದ್ದರು. ಅ ಈ ನಡುವೆ ಕಳೆದ ತಿಂಗಳು ಆಂಧ್ರಪ್ರದೇಶಕ್ಕೆ ಮೂರು ರಾಜ ಧಾನಿಗಳ ವಿಧೇಯಕ ಅಂಗೀಕರಿಸಿ, ಅಮರಾವತಿ, ವಿಶಾಖಪಟ್ಣಣ, ಕರ್ನೂಲು ಅನ್ನು ರಾಜಧಾನಿಯನ್ನಾಗಿ ರಚಿಸಿದ್ದರು.

ಟಾಪ್ ನ್ಯೂಸ್

siddanna-2

ಅಣ್ಣಾಮಲೈರಿಂದ ಬೇರೇನು ನಿರೀಕ್ಷಿಸಬಹುದು: ಸಿಎಂ ಪ್ರಶ್ನೆ

1-h-d-r

ಮಂಗಳೂರಿನಲ್ಲಿ ಇಂಧನ ಭದ್ರತಾ ಸಮಾವೇಶ ನಡೆಸಿ: ಸಚಿವ ಹರ್ದೀಪ್‌ ಸಿಂಗ್

Shrigeri-Mutt

Suvarna Bharathi Mahotsava: ಶೃಂಗೇರಿಯಲ್ಲಿ ದಾಖಲೆ ಬರೆದ ತ್ರಿವೇಣಿ ಸ್ತೋತ್ರ ಪಠಣ

1-tunel

ನಾಳೆ ಕಾಶ್ಮೀರದ ಸೋನಾ ಮಾರ್ಗ್‌ ಸುರಂಗ ಉದ್ಘಾಟನೆ

Basanagowda-Yatnal

ರಾಜ್ಯದಲ್ಲಿ ಹೊಂದಾಣಿಕೆ ರಾಜಕೀಯ ಮಾಡಿಕೊಳ್ಳದ 4-5 ಜನರೇ ಟಾರ್ಗೆಟ್: ಯತ್ನಾಳ್

BBK11: ಮಾನಸಿಕವಾಗಿ ತುಂಬಾ ಕುಗ್ಗಿ ಹೋಗಿದ್ದೇನೆ.. ಕಿಚ್ಚನ ಮುಂದೆ ಕಣ್ಣೀರಿಟ್ಟ ಭವ್ಯ

BBK11: ಮಾನಸಿಕವಾಗಿ ತುಂಬಾ ಕುಗ್ಗಿ ಹೋಗಿದ್ದೇನೆ.. ಕಿಚ್ಚನ ಮುಂದೆ ಕಣ್ಣೀರಿಟ್ಟ ಭವ್ಯ

GTD

JDS: 2028ಕ್ಕೆ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂಬುದು ಭ್ರಮೆ: ಜಿ.ಟಿ.ದೇವೇಗೌಡ ಟಾಂಗ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid 2

HMPV; ಗುಜರಾತ್‌, ಅಸ್ಸಾಂನಲ್ಲಿ ತಲಾ 1 ಕೇಸು ಪತ್ತೆ

1-tunel

ನಾಳೆ ಕಾಶ್ಮೀರದ ಸೋನಾ ಮಾರ್ಗ್‌ ಸುರಂಗ ಉದ್ಘಾಟನೆ

Kapil-Mishra

Delhi Polls: ಮಾಜಿ ಸಿಎಂ ಪುತ್ರ ಸೇರಿ 29 ಅಭ್ಯರ್ಥಿಗಳ ಬಿಜೆಪಿಯ 2ನೇ ಪಟ್ಟಿ ಬಿಡುಗಡೆ

Indi-Alliaince

Fight Alone: ಮಹಾರಾಷ್ಟ್ರದಲ್ಲೂ ಇಂಡಿಯಾ ಕೂಟದಲ್ಲಿ ಅಪಸ್ವರ; ಎಂವಿಎ ಮೈತ್ರಿ ಮುಕ್ತಾಯ?

1-ayodhya

Ayodhya; ರಾಮಮಂದಿರ ಪ್ರಾಣ ಪ್ರತಿಷ್ಠಾ ಮೊದಲ ವಾರ್ಷಿಕೋತ್ಸವ ಸಂಭ್ರಮ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

siddanna-2

ಅಣ್ಣಾಮಲೈರಿಂದ ಬೇರೇನು ನಿರೀಕ್ಷಿಸಬಹುದು: ಸಿಎಂ ಪ್ರಶ್ನೆ

1-h-d-r

ಮಂಗಳೂರಿನಲ್ಲಿ ಇಂಧನ ಭದ್ರತಾ ಸಮಾವೇಶ ನಡೆಸಿ: ಸಚಿವ ಹರ್ದೀಪ್‌ ಸಿಂಗ್

Shrigeri-Mutt

Suvarna Bharathi Mahotsava: ಶೃಂಗೇರಿಯಲ್ಲಿ ದಾಖಲೆ ಬರೆದ ತ್ರಿವೇಣಿ ಸ್ತೋತ್ರ ಪಠಣ

Covid 2

HMPV; ಗುಜರಾತ್‌, ಅಸ್ಸಾಂನಲ್ಲಿ ತಲಾ 1 ಕೇಸು ಪತ್ತೆ

1-bang

ಹವಾಮಾನ ಇಲಾಖೆಗೆ 150: ಕಾರ್ಯಕ್ರಮಕ್ಕೆ ಬರಲ್ಲ ಬಾಂಗ್ಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.