ಸಾಮಾಜಿಕ ಜಾಲತಾಣದಲ್ಲಿ ಪ್ರಚೋದಿತ ಪೋಸ್ಟ್ ಹಾಕುವವರಿಗೆ ಕಾದಿದೆ ಗಂಡಾಂತರ:ಬೊಮ್ಮಾಯಿ ಎಚ್ಚರಿಕೆ
Team Udayavani, Aug 16, 2020, 12:36 PM IST
ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದಿತ ಕಮೆಂಟ್, ಪೋಸ್ಟ್ ಮಾಡುವವರ ಮೇಲೆ ಹದ್ದಿನ ಕಣ್ಣಿಡಲು ಪೊಲೀಸ್ ಇಲಾಖೆ ತೀರ್ಮಾನಿಸಲಾಗಿದೆ. ಫೇಸ್ ಬುಕ್, ಇನ್ಟಾಗ್ರಾಂ, ವ್ಯಾಟ್ಸಪ್ ಸೇರಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದಿತ ಕಮೆಂಟ್ ಗಳನ್ನು ಪೋಸ್ಟ್ ಮಾಡುವವರಿಗೆ ಗಂಡಾಂತರ ಕಾದಿದೆ ಎಂದು ಗೃಹ ಸಚಿವ ಬಸವರಾಕ್ ಬೊಮ್ಮಾಯಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಫೇಸ್‌ಬುಕ್, ಇನ್ಸ್ಟಾ ಗ್ರಾಂನಲ್ಲಿ ಶಾಂತಿಭಂಗ, ಜನರ ಭಾವನೆಗಳಿಗೆ ಧಕ್ಕೆ ತರುವಂತ ಕೆಲಸ ಆಗ್ತಿದೆ. ಘಟನೆ ಆದ ಮೇಲೆ ಕ್ರಮ ತೆಗೆದುಕೊಳ್ಳೋದು ಒಂದು ಭಾಗ. ಘಟನೆ ಆಗುವ ಮುನ್ನವೇ ಯಾವ ರೀತಿ ಕ್ರಮ ತೆಗದುಕೊಳ್ಳಬಹುದು ಎಂದು ಚರ್ಚಿಸಲಾಗುತ್ತಿದೆ. ಮುಂದಿನ ವಾರದಲ್ಲಿ ಸೈಬರ್ ಕ್ರೈಮ್ ಪೊಲೀಸರ ಹಾಗೂ ಸಂಬಂಧಿಸಿದ ಅಧಿಕಾರಿಗಳ ಜೊತೆ ಸಭೆ ಮಾಡುತ್ತೇನೆ ಎಂದರು.
ಕೆ.ಜಿ ಹಳ್ಳಿ, ಡಿ.ಜೆ ಹಳ್ಳಿಯಲ್ಲಿ ಪರಿಸ್ಥಿತಿ ಶಾಂತಾವಾಗಿದೆ. ಆದರೂ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಮುಂದುವರೆಸಲಾಗಿದೆ. ಆಗಸ್ಟ್ 18ವರೆಗೂ ನಿಷೇಧಾಜ್ಞೆ ಇರಲಿದೆ. ಪ್ರಕರಣದ ಬಗ್ಗೆ ತನಿಖೆ ಮುಂದುವರೆಯಲಿದೆ ಎಂದು ಸಚಿವರು ಹೇಳಿದರು.
ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರು ಸೆಕ್ಯುರಿಟಿ ಇಲ್ಲ ಎಂದು ಹೇಳಿದ್ದಾರೆ. ಅವರಿಗೆ ಎಲ್ಲಾ ರೀತಿಯ ಭದ್ರತೆ ನೀಡುವಂತೆ ಪೊಲೀಸ್ ಆಯುಕ್ತರಿಗೆ ಸೂಚಿಸಿದ್ದೇನೆ. ಅದರ ಜೊತೆಗೆ ಅವರ ಮನೆ ಬಳಿಯೂ ಸೂಕ್ತ ಭದ್ರತೆ ನೀಡಲಾಗುತ್ತದೆ ಎಂದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.