ಸರ್ಕಾರ ಮೇಲೆ ಗೂಬೆ ಕೂಡಿಸುತ್ತಿದೆ ಕಾಂಗ್ರೆಸ್
Team Udayavani, Aug 16, 2020, 4:21 PM IST
ಗದಗ: ಭೂ ಸುಧಾರಣೆ ಕಾಯ್ದೆ ತಿದ್ದುಪಡಿಯಿಂದ ಯಾರು ಬೇಕಾದರೂ ಭೂಮಿಯನ್ನು ಕೊಂಡುಕೊಳ್ಳಬಹುದಾಗಿದ್ದು, ಅದು ರೈತರ ಪಾಲಿಗೆ ಮರಣ ಶಾಸನವಲ್ಲ. ಸರಕಾರದ ನೀಡಿರುವ ವಿಶೇಷ ಅಧಿಕಾರ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಸಿ.ಸಿ. ಪಾಟೀಲ ಅಭಿಪ್ರಾಯಪಟ್ಟರು.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನವರಿಗೆ ಬೇರೆ ಕೆಲಸವಿಲ್ಲದೇ, ಸರಕಾರದ ಮೇಲೆ ಗೂಬೆ ಕೂರಿಸುವ ಹೇಳಿಕೆ ನೀಡುತ್ತಿದ್ದಾರೆ. ಆದರೆ ಬೆಂಗಳೂರಿನ ಕೆಜಿ ಹಳ್ಳಿ ಮತ್ತು ಡಿಜಿ ಹಳ್ಳಿ ಘಟನೆ ಬಗ್ಗೆ ಚಕಾರವೆತ್ತುತ್ತಿಲ್ಲ. ಒಂದೇ ಒಂದು ವಾಟ್ಸ್‌ಆ್ಯಪ್ ಸಂದೇಶದ ಮೇರೆಗೆ ಸಾವಿರಾರೂ ಜನ ಸೇರುತ್ತಾರೆ. ಪೆಟ್ರೋಲ್ ಬಾಂಬ್, ಲಾಂಗು -ಮಚ್ಚುನೊಂದಿಗೆ ಜನ ಬರುತ್ತಾರೆ ಎಂಬುದು ಪೂರ್ವನಿಯೋಜಿತ ಸಂಚು ಎಂಬುದು ಸ್ಪಷ್ಟವಾಗುತ್ತದೆ.
ಹಿಂದೆ ಪಾದರಾಯನಪುರದಲ್ಲಿ ನಡೆದ ದಾಂಧಲೆ ನಡೆಸಿ, ಜಾಮೀನು ಪಡೆದು ಹೊರ ಬಂದವರಿಗೆ ಮಾಜಿ ಸಚಿವ ಜಮೀರ್ ಅಹ್ಮದ್ ಅವರು ಸನ್ಮಾನ ಮಾಡಿದ್ದಾರೆ. ಅದರ ಮುಂದುವರಿದ ಭಾಗವಾಗಿ ಇದೀಗ ಗಲಭೆಯಲ್ಲಿ ಪಾಲ್ಗೊಂಡವರಿಗೆ ಪರಿಹಾರ ನೀಡುವ ಮಾತನಾಡುತ್ತಿದ್ದಾರೆ. ಈ ರೀತಿಯ ಬೆಂಬಲದಿಂದ ಸಮಾಜದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ? ಅವರೇನು ದೇಶಕ್ಕಾಗಿ ಹೋರಾಡಿದ ಸ್ವಾತಂತ್ರ ಯೋಧರೇ, ದೇಶಕ್ಕಾಗಿ ಪ್ರಾಣ ಬಿಟ್ಟಿದ್ದಾರೆಯೇ ಎಂದು ಖಾರವಾಗಿ ಪ್ರಶ್ನಿಸಿದರು.
ತಮ್ಮದೇ ಪಕ್ಷದ ದಲಿತ ಶಾಸಕನ ಮನೆ ಧ್ವಂಸಗೊಂಡಿದ್ದರೂ, ಅವರಿಗೆ ಸಂತ್ವಾನ ಹೇಳಲು ಎಷ್ಟು ಮಂದಿ ಕಾಂಗ್ರೆಸ್ ನಾಯಕರು ಭೇಟಿ ನೀಡಿದ್ದಾರೆ ಎಂದು ಪ್ರಶ್ನಿಸಿದ ಅವರು, ಕೇವಲ ಮತ ಬ್ಯಾಂಕ್ ರಾಜಕಾರಣಕ್ಕಾಗಿ ಕಾಂಗ್ರೆಸ್ ಪಕ್ಷ ನಾಟಕವನ್ನಾಡುತ್ತಿದೆ ಎಂದು ಲೇವಡಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Viral Pics: ಡೇಟಿಂಗ್ ರೂಮರ್ಸ್ ನಡುವೆ ವಿಜಯ್ – ರಶ್ಮಿಕಾ ಸೀಕ್ರೆಟ್ ಲಂಚ್ ಡೇಟ್
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್ ಎಚ್ಚರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.