ಅಭಿವೃದ್ಧಿ ಕಾಮಗಾರಿಯಲ್ಲಿ ವಿಳಂಬ ಸಲ್ಲ
Team Udayavani, Aug 16, 2020, 5:35 PM IST
ಭಾಲ್ಕಿ: ತಾಲೂಕಿನಲ್ಲಿ ಪ್ರಗತಿಯಲ್ಲಿರುವ ಅಭಿವೃದ್ಧಿ ಕಾಮಗಾರಿಯಲ್ಲಿ ವಿಳಂಬಕ್ಕೆ ಆಸ್ಪದ ನೀಡಬಾರದು ಎಂದು ಶಾಸಕ ಈಶ್ವರ ಖಂಡ್ರೆ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಪಟ್ಟಣದ ತಾಲೂಕು ಪಂಚಾಯತಿ ಸಭಾಭವನದಲ್ಲಿ ಶನಿವಾರ ನಡೆದ ಪ್ರಗತಿ ಪರಿಶೀಲನೆ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಾರ್ಮಿಕ ಇಲಾಖೆಯಲ್ಲಿ ನೋಂದಣಿಯಾದ 25,634 ಕಾರ್ಮಿಕರಿಗೆ ಪರಿಹಾರ ಹಣ ಕೊಟ್ಟಿರುವ ಬಗ್ಗೆ ಪರಿಶೀಲಿಸಿದರು. ಎಲ್ಲ ಕಾರ್ಮಿಕರಿಗೆ ಪರಿಹಾರ ಹಣ ನೀಡಲಾಗಿದೆ, ಕೇವಲ 556 ಜನ ಕಾರ್ಮಿಕರಿಗೆ ವಿವಿಧ ಕಾರಣಗಳಿಂದ ಹಣ ನೀಡಲಾಗಿಲ್ಲ ಎಂದು ಕಾರ್ಮಿಕ ಅಧಿಕಾರಿ ಕೆ.ಸುವರ್ಣಾ ಮಾಹಿತಿ ನೀಡಿದರು.
ಹೊಸದಾಗಿ ನಿರ್ಮಿಸಿರುವ ಹಾಸ್ಟೇಲ್ ಕಟ್ಟಡದಲ್ಲಿ ಕೋವಿಡ್ ಕೇರ್ ಕೇಂದ್ರ ಸ್ಥಾಪಿಸಲಾಗಿದ್ದು, ಅಲ್ಲಿಯ ಕ್ವಾರಂಟೈನ್‌ಗಳಿಗೆ ಬಿಸಿನೀರಿನ ವ್ಯವಸ್ಥೆಗಾಗಿ ಗೀಜರ ವ್ಯವಸ್ಥೆ ಮಾಡಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗೆ ಸೂಚಿಸಿದರು. ಸಣ್ಣ ನೀರಾವರಿ ಇಲಾಖೆ, ತೋಟಗಾರಿಕೆ ಇಲಾಖೆ, ಅರಣ್ಯ ಇಲಾಖೆಗಳ ವತಿಯಿಂದ 6 ರಿಂದ 8 ಅಡಿ ಉದ್ದದ ಸುಮಾರು 15 ಸಾವಿರ ಸಸಿಗಳನ್ನು ಪಡೆದು ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ಕಡೆಗಳಲ್ಲಿ ನೆಟ್ಟು ಪರಿಸರ ರಕ್ಷಣೆಗೆ ಸಹಕರಿಸಬೇಕು. ಇದಕ್ಕೆ ಬೇಕಾದ ಹಣಕಾಸಿನ ವ್ಯವಸ್ಥೆ ಮಾಡಲಾಗುವುದು ಎಂದು ಶಾಸಕರು ಹೇಳಿದರು.
ಲ್ಯಾಂಡ್ ಆರ್ಮಿಯವರಿಂದ ಕೆಲ ಅಂಗನವಾಡಿ ಕಟ್ಟಡಗಳ ಕಾಮಗಾರಿ ವಿಳಂಬವಾಗುತ್ತಿದ್ದು, ಆದಷ್ಟು ಬೇಗ ಕಾಮಗಾರಿ ಮುಗಿಸಿ ಕಟ್ಟಡಗಳನ್ನು ಶಿಶು ಅಭಿವೃದ್ಧಿ ಇಲಾಖೆಗೆ ಹಸ್ತಾಂತರಿಸಬೇಕು. ಇದಲ್ಲದೇ ಎಲ್ಲ ಕಾಮಗಾರಿ ಬೇಗ ಮುಗಿಸುವಂತೆ ಲ್ಯಾಂಡ್ ಆರ್ಮಿ ಮುಖ್ಯಸ್ಥರಿಗೆ ಸೂಚಿಸಿದರು. ತಹಶೀಲ್ದಾರ್ ಅಣ್ಣಾರಾವ್ ಪಾಟೀಲ, ತಾಪಂ ಉಪಾಧ್ಯಕ್ಷ ಶಿವರಾಜ ಪಾಟೀಲ ಡೊಣಗಾಪುರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Sambhal Mosque Survey: ಶಾಹಿ ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
Gadget Review: iPhone 16: ಆಕರ್ಷಕ ವಿನ್ಯಾಸ, ಉತ್ತಮ ಕ್ಯಾಮರಾ, ವೇಗದ ಕಾರ್ಯಾಚರಣೆ
Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್ ಭರಾಟೆ ಬಲು ಜೋರು
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.