ಬೆಳೆ ಸಮೀಕ್ಷೆ ಸದ್ಬಳಕೆ ಮಾಡಿಕೊಳ್ಳಿ: ಉದಾಸಿ
Team Udayavani, Aug 17, 2020, 3:00 PM IST
ಹಾನಗಲ್ಲ: ಪ್ರಸಕ್ತ ಮುಂಗಾರು ಬೆಳೆ ಸಮೀಕ್ಷೆಯನ್ನು ರೈತರೇ ಮೊಬೈಲ್ ಆ್ಯಪ್ ಮೂಲಕ ಕೈಗೊಳ್ಳುವ ಕಾರ್ಯವನ್ನು ಆಗಸ್ಟ್ 24ರ ವರೆಗೆ ವಿಸ್ತರಿಸಲಾಗಿದೆ. ಇದುವರೆಗೆ ಸಮೀಕ್ಷೆ ಮಾಡದ ತಾಲೂಕಿನ ಹಿಡುವಳಿದಾರರು ಕೂಡಲೇ ತಮ್ಮ ಸಮೀಕ್ಷೆಯನ್ನು ಯಶಸ್ವಿಗೊಳಿಸುವಂತೆ ಶಾಸಕ ಸಿ.ಎಂ. ಉದಾಸಿ ಕರೆ ನೀಡಿದರು.
ಪಟ್ಟಣದ ಶ್ರೀ ಕುಮಾರೇಶ್ವರ ಮಠದ ಆವರಣದಲ್ಲಿ ಕೃಷಿ ಸಮೀಕ್ಷೆ ಪ್ರಚಾರ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದರು. ಈ ಸಮೀಕ್ಷೆ ಎಸ್‌ಡಿಆರ್‌ಎಫ್, ಎಸ್‌ಡಿಆರ್‌ಪಿ ಅಡಿ ಪ್ರವಾಹ ಮತ್ತು ಬರಗಾಲ ಸಂದರ್ಭದಲ್ಲಿ ನೀಡುವ ನಷ್ಟ ಪರಿಹಾರ ವಿತರಿಸಲು, ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಗುರುತಿಸಲು, ಬೆಳೆ ವಿಮೆ ಯೋಜನೆಯಡಿ ಬೆಳೆ ವಿವರ ಪರಿಶೀಲಿಸಲು, ಸಾಂಖೀಕ ಇಲಾಖೆ, ಕೃಷಿ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳ ಬೆಳೆ ವಿಸ್ತೀರ್ಣ ವರದಿ ಕಾರ್ಯದಲ್ಲಿ, ಬೆಳೆ ಕಟಾವು ಪ್ರಯೋಗಗಳನ್ನು ಕೈಗೊಳ್ಳಲು, ಬೆಳೆ ಮಾನದಂಡಗಳಿಗೆ ಅನುಗುಣವಾಗಿ ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳ ಫಲಾನುಭವಿ ಆಧಾರಿತ ಯೋಜನೆಗಳ ಅನುಷ್ಠಾನಕ್ಕೆ, ಪಹಣಿಯಲ್ಲಿ ಬೆಳೆ ವಿವರ ದಾಖಲಿಸಲು, ಬ್ಯಾಂಕ ಮತ್ತು ವ್ಯವಸಾಯ ಸಹಕಾರಿ ಸಂಘಗಳ ಮುಖಾಂತರ ಬೆಳೆ ಸಾಲ ನೀಡುವ ಸಂದರ್ಭದಲ್ಲಿ ಬೆಳೆ ಪರಿಶೀಲನೆ ಮಾಡಲು ಸಹಕಾರಿಯಾಗಲಿದೆ ಎಂದರು.
ಕೂಡಲೆ ನಿಗದಿತ ಸಮಯದಲ್ಲಿ ರೈತರು ಮೊಬೈಲ್ ಆ್ಯಪ್ ಮೂಲಕ ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ವಿವರವನ್ನು ತಾವೇ ಖುದ್ದಾಗಿ ವರದಿ ಮಾಡಬೇಕು. ಹೆಚ್ಚಿನ ಮಾಹಿತಿಗಾಗಿ ಕೃಷಿ ಇಲಾಖೆಯನ್ನು ಸಂಪರ್ಕಿಸಿ ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಲಹೆ ಮಾಡಿದರು.
ಈ ಸಂದರ್ಭದಲ್ಲಿ ರೈತ ಸಂಘದ ಅಧ್ಯಕ್ಷ ಮರಿಗೌಡ ಪಾಟೀಲ, ಗುರುಸಿದ್ದಪ್ಪ ಕೊಂಡೋಜಿ, ಕೃಷಿ ಅಧಿಕಾರಿಗಳಾದ ದೇವೆಂದ್ರಪ್ಪ ಕಡ್ಲೆರ, ಸಂಗಮೇಶ ಹಕ್ಲಪ್ಪನವರ ಮೊದಲಾದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.