ಸೋಂಕು ಉಲ್ಬಣ.. ಜನರಲ್ಲಿ ತಲ್ಲಣ..

ಊಹೆಗೂ ನಿಲುಕದಂತೆ ಹೆಚ್ಚಾಗುತ್ತಿದೆ ಕೋವಿಡ್

Team Udayavani, Aug 17, 2020, 4:51 PM IST

ಸೋಂಕು ಉಲ್ಬಣ.. ಜನರಲ್ಲಿ ತಲ್ಲಣ..

ಸಾಂದರ್ಭಿಕ ಚಿತ್ರ

ದಾವಣಗೆರೆ: ನಡು ಕರ್ನಾಟಕದ ಕೇಂದ್ರ ಬಿಂದು ದಾವಣಗೆರೆ ಜಿಲ್ಲೆಯಲ್ಲಿ ಊಹೆಗೂ ಮೀರಿ ಕೋವಿಡ್ ಸೋಂಕು ವ್ಯಾಪಿಸುತ್ತಿದೆ. 19 ದಿನಗಳ ಅಂತರದಲ್ಲಿ 4 ಸಾವಿರಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆ ಆಗಿರುವುದು ಸೋಂಕಿನ ವ್ಯಾಪಿಸುವಿಕೆಯ ತೀವ್ರತೆಯನ್ನ ಪುಷ್ಟೀಕರಿಸುತ್ತಿದೆ.

ಮಹಾಮಾರಿ ಕೋವಿಡ್ ಕಾಲಿಟ್ಟಂತಹ ಪ್ರಾರಂಭಿಕ ಹಂತದಲ್ಲಿ ಮಾ.27 ರಂದು ದಾವಣಗೆರೆಯಲ್ಲಿ ಪ್ರಥಮ ಪ್ರಕರಣ ಪತ್ತೆಯಾಗಿತ್ತು. ಆ ನಂತರ ಇಬ್ಬರಲ್ಲಿ ಕಾಣಿಸಿಕೊಂಡಿತ್ತು. ಮೂವರು ಗುಣಮುಖರಾದ 32 ದಿನಗಳಲ್ಲಿ ಒಂದೇ ಒಂದು ಪ್ರಕರಣ ಪತ್ತೆಯಾಗದೆ ಜಿಲ್ಲೆ ಹಸಿರು ವಲಯದತ್ತ ಸಾಗಿತ್ತು.

ಏ.29ರಂದು ಮೊದಲ ಪ್ರಕರಣ ಪತ್ತೆಯಾದಾಗ ದಾವಣಗೆರೆ ಜನರು ಆತಂಕಕ್ಕೆ ಒಳಗಾಗಿದ್ದರು. ಮೇ 3 ರಂದು ಒಂದೇ ದಿನ 21 ಜನರಲ್ಲಿ ಸೋಂಕು ದೃಢಪಟ್ಟಾಗ ಅಕ್ಷರಶಃ ನಲುಗಿ ಹೋಗಿದ್ದರು. ಹಲವಾರು ರಸ್ತೆ, ಓಣಿ, ಬೀದಿ, ನಗರದಲ್ಲಿ ಜನರೇ ಸ್ವಯಂ ದಿಗ್ಬಂಧನಕ್ಕೆ ಒಳಗಾಗಿದ್ದರು. ಜಾಲಿನಗರ, ಇಮಾಂ ನಗರ, ಆಜಾದ್‌ನಗರ, ಶಿವನಗರ ಕಂಟೇನ್ಮೆಂಟ್‌ ಝೋನ್‌ಗಳಾಗಿದ್ದವು. ಒಂದು ಹಂತದಲ್ಲಿ ಸೋಂಕಿನ ಅಬ್ಬರತೆಯೂ ಕಡಿಮೆ ಆಗಿತ್ತು. ಇಡೀ ಜಿಲ್ಲೆಯಲ್ಲಿ ಬರೀ 12 ಸಕ್ರಿಯ ಪ್ರಕರಣಗಳಿದ್ದವು. ಸಾರ್ವಜನಿಕರ ವಲಯದಲ್ಲಿ ನೆಮ್ಮದಿಯ ವಾತಾವರಣವೂ ನಿರ್ಮಾಣವಾಗಿತ್ತು.

ಆದರೆ, ಜೂ.29 ರಿಂದ ಸೋಂಕಿತರ ಸಂಖ್ಯೆ ಹೆಚ್ಚಾಗತೊಡಗಲಾರಂಭಿಸಿತು. 33 ಇದ್ದಂತಹ ಸಕ್ರಿಯ ಪ್ರಕರಣಗಳ ಸಂಖ್ಯೆ ನೋಡ ನೋಡುತ್ತಿದ್ದಂತೆಯೇ ನೂರರ ಗಡಿ ದಾಟಿತ್ತು. ಜು.13 ರಂದು ಸಕ್ರಿಯ ಪ್ರಕರಣಗಳ ಸಂಖ್ಯೆ 129 ಆಗಿತ್ತು. ಜು. 22ರ ವೇಳೆಗೆ ಒಟ್ಟಾರೆ ಸೋಂಕಿತರ ಸಂಖ್ಯೆ 1071,ಸಕ್ರಿಯ ಪ್ರಕರಣಗಳ ಸಂಖ್ಯೆ 400 ಇತ್ತು.

ಜು.22 ರಿಂದ ಆಗಸ್ಟ್‌ 15ಕ್ಕೆ ಒಟ್ಟಾರೆ ಸೋಂಕಿತರ ಸಂಖ್ಯೆ ಐದು ಸಾವಿರದ ಗಡಿ ದಾಟಿದೆ.(5070). ಜೂ.29 ರಿಂದ ಜು. 22ಕ್ಕೆ ಒಂದು ಸಾವಿರದ ಗಡಿ ದಾಟಿದ ಸೋಂಕಿತರ ಸಂಖ್ಯೆ. ಅಲ್ಲಿಂದ ಅತೀ ಕಡಿಮೆ ಅವಧಿಯಲ್ಲಿ ಐದು ಸಾವಿರದ ಗಡಿ ದಾಟಿರುವುದು ಹರಡುವಿಕೆಯ ತೀವ್ರತೆಯ ಪ್ರತೀಕವಾಗಿದೆ. ಮೊದಲು ನಗರ ಪ್ರದೇಶದಕ್ಕೆ ಮಾತ್ರವೇ ಸೀಮಿತವಾಗಿದ್ದ ಸೋಂಕು ಇದೀಗ ಗ್ರಾಮೀಣ ಪ್ರದೇಶದಲ್ಲೂ ತಾಂಡವವಾಡುತ್ತಿದೆ. ಸೋಂಕಿನ ಹೆಚ್ಚಳದ ಜತೆಗೆ ಸಾವಿನ ಪ್ರಮಾಣವೂ ಹೆಚ್ಚಾಗುತ್ತಿರುವುದು ಜನರು ಆತಂಕ ಪಡುವಂತಾಗಿದೆ.

ಲಾಕ್‌ಡೌನ್‌-1 ಮತ್ತು 2ರ ಸಂದರ್ಭದಲ್ಲಿ ನಿಯಂತ್ರಣದಲ್ಲಿದ್ದ ಕೋವಿಡ್ ಲಾಕ್‌ಡೌನ್‌ ತೆರವಿನ ನಂತರ ಹರಡುತ್ತಿದೆ. ಅಲ್ಲೆಲ್ಲೋ ಇದ್ದಂತಹ ಕಂಟೇನ್ಮೆಂಟ್‌ಗಳು ಮನೆಯ ಬಾಗಿಲಿಗೆ ಬರುತ್ತಿರುವುದರಿಂದ ಜನರಲ್ಲಿ ಆತಂಕ ಉಂಟು ಮಾಡುತ್ತಿದೆ. ಮುಕ್ತ ವಾತಾವರಣಕ್ಕೆ ಕಡಿವಾಣ ಬೀಳತೊಡಗಿದೆ. ಜಿಲ್ಲಾ ಚಿಗಟೇರಿ ಆಸ್ಪತ್ರೆಯನ್ನ 300 ಹಾಸಿಗೆಗಳ ಕೋವಿಡ್‌ ಆಸ್ಪತ್ರೆಯನ್ನಾಗಿ ಗುರುತಿಸಲಾಗಿದೆ. 250 ಐಸೋಲೇಷನ್‌ ಬೆಡ್‌ ಸಿದ್ಧಪಡಿಸಲಾಗಿದೆ. 19 ಖಾಸಗಿ ಆಸ್ಪತ್ರೆಗಳನ್ನೂ ಚಿಕಿತ್ಸೆಗೆ ಗುರುತಿಸಲಾಗಿದೆ. ಎರಡು ಖಾಸಗಿ, ಒಂದು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಯೋಗಾಲಯ ಪ್ರಾರಂಭಿಸಲಾಗಿದೆ.

ದಿನಕ್ಕೆ 3 ಸಾವಿರ ಕೊರೊನಾ ಪರೀಕ್ಷೆಯ ಗುರಿ ನೀಡಲಾಗಿದೆ. ಜಿಲ್ಲೆಯ ಎಲ್ಲ ತಾಲೂಕು ಕೇಂದ್ರದ ಆಸ್ಪತ್ರೆಯಲ್ಲಿ ತಲಾ 10 ಐಸೋಲೇಷನ್‌ ಬೆಡ್‌ ಸಿದ್ಧಪಡಿಸಲಾಗಿದೆ. ಹೆಚ್ಚುವರಿಯಾಗಿ 40 ಐಸೋಲೇಷನ್‌ ಬೆಡ್‌ ಮಾಡಲು ಕ್ರಮ ವಹಿಸಲಾಗಿದೆ. ಪ್ರತಿ ತಾಲೂಕಿನಲ್ಲಿ ಕೋವಿಡ್ ಗುಣಲಕ್ಷಣಗಳು ಇಲ್ಲದ ಪಾಸಿಟಿವ್‌ ಪ್ರಕರಣಗಳ ಚಿಕಿತ್ಸೆಗೆ 100 ಬೆಡ್‌ಗಳ ಕೋವಿಡ್‌ ಕೇರ್‌ ಸೆಂಟರ್‌ ಗುರುತಿಸಲಾಗಿದೆ. ದಾವಣಗೆರೆ ನಗರದಲ್ಲಿ ಒಟ್ಟು 300 ಬೆಡ್‌ಗಳ ಕೋವಿಡ್‌ ಕೇರ್‌ ಸೆಂಟರ್‌ ಕಾರ್ಯ ನಿರ್ವಹಿಸುತ್ತಿವೆ. ಶೇ.50 ರಷ್ಟು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಜ್ವರದ ಕ್ಲಿನಿಕ್‌ ಪ್ರಾರಂಭಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.

ಕೋವಿಡ್ ಸೋಂಕು, ಸಾವಿನ ಪ್ರಮಾಣ ನಿಯಂತ್ರಣಕ್ಕೆ ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಆದರೆ, ಸೋಂಕಿನ ಅಬ್ಬರತೆ ಹೆಚ್ಚಾಗುತ್ತಲೇ ಹೋಗುತ್ತಿರುವುದೇ ಆತಂಕಪಡುವಂತಾಗಿದೆ.

 

-ರಾ. ರವಿಬಾಬು

ಟಾಪ್ ನ್ಯೂಸ್

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ

ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ

Davanagere: Basanagowda Yatnal expelled from the party?: What did Vijayendra say?

Davanagere: ಪಕ್ಷದಿಂದ ಯತ್ನಾಳ್‌ ಉಚ್ಛಾಟನೆ?: ವಿಜಯೇಂದ್ರ ಹೇಳಿದ್ದೇನು?

prison

Davanagere: 9ನೇ ತರಗತಿಯ ಬಾಲಕಿಯ ಅತ್ಯಾಚಾರ ಎಸೆಗಿದ್ದ ಆರೋಪಿಗೆ 20ವರ್ಷ ಕಠಿಣ ಜೈಲು ಶಿಕ್ಷೆ

Udayagiri police station attack case: Muthalik sparks controversy

Davanagere: ಉದಯಗಿರಿ ಪೊಲೀಸ್‌ ಠಾಣೆ ದಾಳಿ ಪ್ರಕರಣ: ಕಿಡಿಕಾರಿದ ಮುತಾಲಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.