ಗಲಭೆಯಲ್ಲಿಆಸ್ತಿ ಪಾಸ್ತಿ ನಾಶ ಮಾಡಿದವರ ವಿರುದ್ದ ಬಿಗಿ ಕ್ರಮಕ್ಕೆ ಸಿಎಂ ಸೂಚನೆ: ಬೊಮ್ಮಾಯಿ
Team Udayavani, Aug 17, 2020, 4:52 PM IST
ಬೆಂಗಳೂರು: ಡಿಜೆ.ಹಳ್ಳಿ ಗಲಭೆಯಲ್ಲಿ ಭಾಗಿಯಾಗಿ ಆಸ್ತಿ ಪಾಸ್ತಿ ನಾಶ ಮಾಡಿದವರ ವಿರುದ್ದ ಬಿಗಿ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದ್ದಾರೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗಿನ ಸಭೆ ಬಳಿಕ ಪ್ರತಿಕ್ರಿಯಿಸಿದ ಅವರು, ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಮುಖ್ಯ ಕಾರ್ಯದರ್ಶಿಗಳು, ಅಡ್ವೋಕೇಟ್ ಜನರಲ್ ಸೇರಿದಂತೆ ಗೃಹ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು. ಡಿಜೆ. ಹಳ್ಳಿ, ಕೆ.ಜೆ ಹಳ್ಳಿ ಪರಿಸ್ಥಿತಿ ಬಗ್ಗೆ ಮುಖ್ಯಮಂತ್ರಿಗಳು ಮಾಹಿತಿ ಪಡೆದರು. ಗಲಭೆಕೋರರಿಂದಲೇ ನಷ್ಟ ಭರಿಸುವ ಬಗ್ಗೆ ಸುಪ್ರೀಂ ಕೋರ್ಟ್ ಆದೇಶದ ಅನ್ವಯ ಕ್ಲೇಮ್ ಕಮಿಷನರ್ ನೇಮಕ ಮಾಡಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.
ಎಸ್ಐಟಿ ತನಿಖೆ ವೇಳೆ ಗೂಂಡಾ ಕಾಯ್ದೆಯಲ್ಲಿ ಯಾರು ಇರ್ತಾರೆ, ಅಂಥವರ ವಿರುದ್ದ ಗೂಂಡಾ ಕಾಯ್ದೆ ಮೂಲಕ ಕ್ರಮ ಕೈಗೊಳ್ಳಲು ನಿರ್ಧರಿಸಲಾಯಿತು. ಗೂಂಡಾ ಕಾಯ್ದೆಯಡಿ ಯಾರನ್ನೆಲ್ಲಾ ಬಂಧಿಸಬಹುದೋ ಅವರನ್ನು ಬಂಧಿಸಿ ಎಂದು ಮುಖ್ಯಮಂತ್ರಿಗಳು ಸೂಚಿಸಿದ್ದಾರೆ ಎಂದು ತಿಳಿಸಿದರು.
ಇದನ್ನೂ ಓದಿ: ಬಿಎಸ್ ವೈ ಅವರೇ ಎಲ್ಲಿದೆ ನಿಮ್ಮ ಸರ್ಕಾರ? ಎಲ್ಲಿದೆ ಆ್ಯಂಬುಲೆನ್ಸ್? ಡಿಕೆ ಶಿವಕುಮಾರ್ ಗುಡುಗು
ಗಲಭೆಯಲ್ಲಿ ಪಾಲ್ಗೊಂಡ ಆರೋಪಿಗಳ ಹಿನ್ನೆಲೆ ಪರಿಶೀಲಿಸಲಾಗುತ್ತಿದೆ. ಆರೋಪಿಗಳಿಗೆ ಯಾವ ಸಂಘಟನೆಗಳ ಜತೆ ಸಂಪರ್ಕವಿದೆ ಎಂಬುದನ್ನೂ ಪರಿಶೀಲಿಸಲಾಗುತ್ತಿದೆ. ಪ್ರಕರಣವನ್ನು ಬೇರೆ ತನಿಖೆಗೆ ವಹಿಸುವುದಿಲ್ಲ ಎಂದು ಸ್ಪಷ್ಟನೆ ನೀಡಿದರು.
ಗೋಲಿಬಾರ್ ಪ್ರಕರಣವನ್ನು ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರು ತನಿಖೆ ಮಾಡುತ್ತಿದ್ದಾರೆ. ಪೊಲೀಸ್ ಇಲಾಖೆ ಗಲಭೆ ಬಗ್ಗೆ ತನಿಖೆ ನಡೆಸುತ್ತಿದೆ. ಸದ್ಯ ಈ ಎರಡು ತನಿಖೆಗಳಿಗೆ ಸರ್ಕಾರದ ಬದ್ಧವಾಗಿದೆ. ಗಲಭೆಗೆ ಸಂಬಂಧಪಟ್ಟಂತೆ ಸಿಸಿಬಿ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ನೇತೃತ್ವದಲ್ಲಷ್ಟೇ ತನಿಖೆ ನಡೆಯುತ್ತಿದೆ. ಇದನ್ನು ಹೊರತು ಪಡಿಸಿ ಬೇರೆ ಯಾವುದೇ ತನಿಖೆ ನಡೆಯುತ್ತಿಲ್ಲ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್
Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Kannada: ಕನ್ನಡ ನಾಡಲ್ಲಿ ಪ್ರತಿದಿನವೂ ನಿತ್ಯೋತ್ಸವವಿರಲಿ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್
ಹೊಸಪೇಟೆ: ಸ್ಕ್ಯಾನ್ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.